State government

 • ರಾಜ್ಯದ ಶಾಲೆಗಳಲ್ಲಿ ಮೊಳಗಲಿದೆ “ವಾಟರ್‌ ಬೆಲ್‌”

  ಮಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಇನ್ನು ಮುಂದೆ ಪ್ರತಿ ತರಗತಿ ಮುಗಿದಾಕ್ಷಣ ಕೇಳುವ ಗಂಟೆಯ ಸದ್ದಿನೊಂದಿಗೆ ವಾಟರ್‌ ಬೆಲ್‌ ಕೂಡ ಮೊಳಗಲಿದೆ. ಆ ಮೂಲಕ ಕೇರಳ ಮಾದರಿಯಲ್ಲಿ ರಾಜ್ಯದ ಶಾಲೆಗಳಲ್ಲೂ ನೀರು ಕುಡಿಯಲೆಂದೇ ಮಕ್ಕಳಿಗೆ ಸಮಯ ನಿಗದಿಪಡಿಸಲು ರಾಜ್ಯ…

 • ನೆರೆ ಪರಿಹಾರದಲ್ಲಿ ಅಕ್ರಮ: ಮರು ಸಮೀಕ್ಷೆಗೆ ನಿರ್ಧಾರ

  ಬೆಂಗಳೂರು: ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಅಕ್ರಮ ನಡೆದಿರುವ ಆರೋಪ ಮೇಲಿಂದ ಮೇಲೆ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮನೆಗಳ “ಮರು ಸಮೀಕ್ಷೆ’ಗೆ ಸರಕಾರ ಮುಂದಾಗಿದೆ. ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಅಕ್ರಮ ನಡೆಯುತ್ತಿದ್ದು, ಅನರ್ಹರಿಗೂ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ…

 • ರಾಜ್ಯ ಸರ್ಕಾರ ವಜಾಗೊಳಿಸಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

  ಚಾಮರಾಜನಗರ: ರಾಜ್ಯದಲ್ಲಿದ್ದ ಮೈತ್ರಿ ಸರ್ಕಾರ ಪತನಗೊಳ್ಳಲು ಕೇಂದ್ರ ಸಚಿವ ಅಮಿತಾ ಶಾ ಹಾಗೂ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣರಾಗಿರುವುದು ಆಡಿಯೋ ಮೂಲಕ ಬಹಿರಂಗಗೊಂಡಿದೆ. ಕೂಡಲೇ ಕೇಂದ್ರ ಗೃಹ ಸಚಿವರು ರಾಜೀನಾಮೆ ನೀಡಬೇಕು. ರಾಜ್ಯಪಾಲರು ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು…

 • ಕನ್ನಡಿಗರಿಗೇ ಹುದ್ದೆ; ಕೈಗಾರಿಕಾ ಉದ್ಯೋಗ ನೀತಿಗೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ

  ಬೆಂಗಳೂರು: ಕೈಗಾರಿಕಾ ಉದ್ಯೋಗ ನೀತಿಗೆ ತಿದ್ದುಪಡಿ ತರಲು ರಾಜ್ಯ ಸರಕಾರ ನಿರ್ಧರಿಸಿದ್ದು, ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವೃಂದದ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಷರತ್ತು ವಿಧಿಸಲು ಸಂಪುಟ ಸಭೆ ತೀರ್ಮಾನಿಸಿದೆ. ಜತೆಗೆ, ಟೆಕ್ಸ್‌ಟೈಲ್‌ ಮತ್ತು ಗಾರ್ಮೆಂಟ್ಸ್‌…

 • ರಾಜ್ಯ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ

  ದೇವನಹಳ್ಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ. ಅಭಿವೃದ್ಧಿಯ ಕಾರ್ಯಗಳಿಗೆ ಬಿಡುಗಾಸು ನೀಡುತ್ತಿಲ್ಲ. ಹಲವು ಯೋಜನೆಗಳ ಅನುದಾನ ತಡೆ ಹಿಡಿಯಲಾಗಿದೆ ಎಂದು ಶಾಸಕ ಎಲ್‌.ಎನ್‌ ನಾರಾಯಣಸ್ವಾಮಿ ಆಪಾದಿಸಿದರು. ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ವಿಶ್ವನಾಥಪುರ ಗ್ರಾಪಂ…

 • ಹುಬ್ಬಳ್ಳಿ ಸ್ಫೋಟ ಪ್ರಕರಣದಲ್ಲಿ ಉಗ್ರ ಸಂಘಟನೆಗಳ ಕೈವಾಡ

  ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗಂಭೀರವಾಗಿ ಪರಿಗಣಿಸಬೇಕು. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರ ಅಡಗಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್…

 • ಕೇಂದ್ರ, ರಾಜ್ಯ ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸಿ

  ದೇವನಹಳ್ಳಿ: ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ, ಪ್ರತಿ ಗ್ರಾಮದಲ್ಲೂ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್‌.ಎಂ.ರವಿಕುಮಾರ್‌ ತಿಳಿಸಿದರು. ತಾಲೂಕಿನ ಲಕ್ಷ್ಮೀಪುರ ಶ್ರೀಆಂಜನೇಯಸ್ವಾಮಿ ದೇವಾಲಯ ಆವರಣದಲ್ಲಿ…

 • ಪ್ರವಾಹದ ಬೆನ್ನಲ್ಲೇ ಬರದ ಛಾಯೆ

  ಬೆಂಗಳೂರು: ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಪ್ರವಾಹ ಬಂದು ಅರ್ಧಕ್ಕೂ ಹೆಚ್ಚು ರಾಜ್ಯ ಮುಳುಗಿ ಜನರು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ಕೆಲವೆಡೆ ಬರ ಪರಿಸ್ಥಿತಿ ಇದ್ದು, ರಾಜ್ಯ ಸರಕಾರಕ್ಕೆ ಬರ ತಾಲೂಕುಗಳ ಆಯ್ಕೆಯ ಸವಾಲು ಎದುರಾಗಿದೆ. ರಾಜ್ಯದ 22 ಜಿಲ್ಲೆಗಳ…

 • ನೆರೆ ವಾಕ್ಸಮರ; ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

  ಬೆಂಗಳೂರು: ರಾಜ್ಯದ ಜನತೆ ಭೀಕರ ಪ್ರವಾಹಕ್ಕೆ ಸಿಲುಕಿ 2 ತಿಂಗಳು ಕಳೆದಿದ್ದರೂ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಪಕ್ಷ ನಾಯಕರು ಕೇಂದ್ರ ಸರಕಾರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುಗಿಬಿದ್ದಿದ್ದರೆ, ಇದಕ್ಕೆ…

 • ಕಾಶ್ಮೀರ ವಿದ್ಯಾರ್ಥಿಗಳ ಮೇಲೆ ನಿಗಾವಹಿಸಲು ನಿರ್ದೇಶನ

  ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿರುವ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಲು ರಾಜ್ಯ ಸರ್ಕಾರ ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜು ಆಡಳಿತ ಮಂಡಳಿಗೆ ಲಿಖಿತ ನಿರ್ದೇಶನ ನೀಡಿದೆ. ಕೇಂದ್ರ ಸರ್ಕಾರವು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ…

 • ಕೇಂದ್ರ, ರಾಜ್ಯ ಸರ್ಕಾರಗಳು ಕಾಫಿ ಬೆಳೆಗಾರರ ಹಿತ ಕಾಪಾಡಬೇಕು

  ಬೇಲೂರು: ಕಾಫಿ ಉತ್ಪಾದನೆಯಲ್ಲಿ 6 ನೇ ಸ್ಥಾನ ಪಡೆದಿರುವ ಭಾರತದಲ್ಲಿ ಬೆಳೆ ಸ್ಥಿರತೆ ಮತ್ತು ಬೆಳೆಗಾರರ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಶ್ರೀಕಂಠೇಗೌಡ ಒತ್ತಾಯಿಸಿದರು. ಪಟ್ಟಣದ ಚನ್ನಕೇಶವ ದೇವಾಲಯದ ಮುಂಭಾಗ…

 • ಆಡಳಿತ ಯಂತ್ರ ಚುರುಕಾಗಲಿ

  ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳಾಯಿತು. ಈ ವಿಧಾನಸಭೆಯ ಅವಧಿಯಲ್ಲಿ ಎರಡನೇ ಸರಕಾರವಿದು. ಆದರೂ ರಾಜ್ಯದ ಜನರಿಗೆ ಇನ್ನೂ ಸರಕಾರ ಅಸ್ತಿತ್ವಕ್ಕೆ ಬಂದಂತೆ ಎನಿಸುತ್ತಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಆಡಳಿತ ನಡೆಸುತ್ತಿದ್ದಾಗಲೂ ಒಟ್ಟಂದದಲ್ಲಿ ಸರಕಾರವೊಂದು…

 • ಹೊಸ ತಾಲೂಕು ಹೆಸರಿಗೆ ಮಾತ್ರ !

  ಹೊಸ ತಾಲೂಕುಗಳ ರಚನೆಯಾಗಿ ವರ್ಷಗಳೇ ಕಳೆದರೂ, ನಿರೀಕ್ಷಿತ ಫ‌ಲ ಸಿಗುತ್ತಿಲ್ಲ. ಕೆಲವು ತಾಲೂಕುಗಳು ನಾಮ ಫ‌ಲಕಕ್ಕೆ ಮಾತ್ರ ಸೀಮಿತವಾಗಿವೆ. ಬಹುತೇಕ ಕೇಂದ್ರಗಳಲ್ಲಿ ಕಚೇರಿ, ಸಿಬ್ಬಂದಿ, ಅನುದಾನದ ಕೊರತೆ ಕಾಡುತ್ತಿದೆ… ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ರಾಜ್ಯದಲ್ಲಿ ಹೊಸ ತಾಲೂಕುಗಳನ್ನು ರಚಿಸಲು, ದಶಕಗಳಿಂದ…

 • 15 ವರ್ಷ ನೆಲೆಸಿದರೆ ಕನ್ನಡಿಗ!

  ಬೆಂಗಳೂರು: ಐಟಿ/ಬಿಟಿ ಮತ್ತು ಸಂಬಂಧಿತ ಉದ್ಯಮ ಸಹಿತ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ರೂಪಿಸಲಾಗಿರುವ “ಹತ್ತು ವರ್ಷ ರಾಜ್ಯದಲ್ಲಿ ನೆಲೆಸಿರಬೇಕೆಂಬ’ ನಿಯಮವನ್ನು 15 ವರ್ಷಕ್ಕೆ ಏರಿಕೆ ಮಾಡುವಂತೆ ಸರಕಾರಕ್ಕೆ ಶಿಫಾರಸು ಮಾಡಲು ಕಾರ್ಮಿಕ ಇಲಾಖೆ…

 • ಕೇಂದ್ರ, ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್‌ 10 ಪ್ರಶ್ನೆ

  ಬೆಂಗಳೂರು: ಭೀಕರ ಪ್ರವಾಹದಿಂದ ರಾಜ್ಯದಲ್ಲಿ ಉಂಟಾದ ಅನಾಹುತಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏಕೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್‌ ಎರಡೂ ಸರ್ಕಾರಗಳಿಗೆ “ಎದ್ದೇಳು ಬಿಜೆಪಿ’ ಎಂದು ಹ್ಯಾಷ್‌ ಟ್ಯಾಗ್‌ ಮೂಲಕ 10 ಪ್ರಶ್ನೆಗಳನ್ನು ಕೇಳಿದೆ. 1.ಪ್ರಧಾನಿ ನರೇಂದ್ರ…

 • ರಾಜ್ಯ ಸರ್ಕಾರದಿಂದ ಪಿಯು ವಿದ್ಯಾರ್ಥಿಗಳಿಗೆ ಬಿಸಿಯೂಟ

  ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಜತೆ ಇನ್ನು ಮುಂದೆ ಪಿಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ. ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಇದಕ್ಕಾಗಿ ಹಣಕಾಸು ಹೊಂದಿಸಿಕೊಂಡು ಪ್ರಸಕ್ತ ಸಾಲಿನಿಂದಲೇ ಜಾರಿಗೆ ತರಲು ಉದ್ದೇಶಿಸಿದೆ. ರಾಜ್ಯದ ಬಹುತೇಕ…

 • ಸರಕಾರದಿಂದ ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ

  ಬೆಂಗಳೂರು: ಸರಕಾರಿ ಶಾಲಾ ಮಕ್ಕಳ ಜತೆ ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ. ಈ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿದ್ದು, ಇದಕ್ಕಾಗಿ ಹಣಕಾಸು ಹೊಂದಿಸಿಕೊಂಡು ಪ್ರಸಕ್ತ ಸಾಲಿನಿಂದಲೇ ಜಾರಿಗೆ ತರಲು ಉದ್ದೇಶಿಸಿದೆ. ರಾಜ್ಯದ ಬಹುತೇಕ…

 • ರೈತರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ

  ಬೆಂಗಳೂರು: ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ನೆರೆಯಿಂದ ಹಾನಿಗೀಡಾದ ರೈತರಿಗೆ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರ ನೀಡಿದೆ. ಇನ್ನಷ್ಟು ಯೋಜನೆಗಳನ್ನು ಶೀಘ್ರ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…

 • ಬಿಎಸ್‌ವೈ ನಡೆ ಮೇಲೆ ರಾಜ್ಯ ಸರ್ಕಾರದ ಭವಿಷ್ಯ

  ಕಲಾದಗಿ (ಬಾಗಲಕೋಟೆ): ಸಚಿವ ಸಂಪುಟ ರಚನೆ ಬಳಿಕ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದ್ದು, ಈ ಕುರಿತು ನಾನು ಏನೂ ಹೇಳಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಶಾಸಕರನ್ನು ಯಾವ ರೀತಿ ನೋಡಿಕೊಳ್ಳುತ್ತಾರೋ ಅದರ ಮೇಲೆ ಬಿಜೆಪಿ ಸರ್ಕಾರದ ಭವಿಷ್ಯ ಅಡಗಿದೆ ಎಂದು ಮಾಜಿ…

 • ವರ್ಷಾಂತ್ಯಕ್ಕೂ ಮಕ್ಕಳಿಗೆ ಸೈಕಲ್ ಸಿಗೋದು ಡೌಟು!

  ನಂಜನಗೂಡು: ಶಾಲೆಗಳು ಪ್ರಾರಂಭವಾಗಿ ಮೂರು ತಿಂಗಳು ಕಳೆದಿವೆ. ಜೊತೆಗೆ ದಸರಾ ರಜೆ ಕೂಡ ಸಮೀಪಿಸುತ್ತಿದೆ. ಆದರೂ ಸಹ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಿಲ್ಲ. ತಾಲೂಕಿನ 78 ಸರ್ಕಾರಿ ಪ್ರೌಢಶಾಲೆಗಳ 8ನೇ ತರಗತಿಯ 3,242 ವಿದ್ಯಾರ್ಥಿಗಳು ಚಾತಕ…

ಹೊಸ ಸೇರ್ಪಡೆ