ಸಮ್ಮಿಶ್ರ ಸರಕಾರದಿಂದ ಕಾರ್ಕಳಕ್ಕೆ 58 ಕೋಟಿ ರೂ. ಅನುದಾನ: ಎಚ್‌ಡಿಕೆ


Team Udayavani, Apr 8, 2019, 6:11 AM IST

070419kkram1

ಕಾರ್ಕಳ: ನಾನು ಮುಖ್ಯ ಮಂತ್ರಿಯಾದ ಬಳಿಕ ಎಣ್ಣೆಹೊಳೆ ಕಿಂಡಿ ಅಣೆಕಟ್ಟು ಯೋಜನೆಗೆ ಬಜೆಟ್‌ನಲ್ಲಿ 40 ಕೋಟಿ ರೂ., ತಾಲೂಕಿನ 222 ಶಾಲಾ ಸಂಪರ್ಕ ಸೇತುವೆಗಳಿಗೆ 12 ಕೋಟಿ ರೂ., ಗ್ರಾಮೀಣಾಭಿವೃದ್ಧಿಗೆ 7 ಕೋಟಿ ರೂ. ಬಿಡುಗಡೆಗೊಳಿಸಿದ್ದು, ಕಾರ್ಕಳದ ಅಭಿವೃದ್ಧಿಗೆ 9 ತಿಂಗಳಲ್ಲಿ ಒಟ್ಟು 58 ಕೋಟಿ ರೂ. ಅನುದಾನ ಒದಗಿಸಿಕೊಟ್ಟಿದ್ದೇನೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದರು.

ಅವರು ರವಿವಾರ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ಕಾಂಗ್ರೆಸ್‌ ಹಾಗೂ ಜನತಾದಳ ಜಂಟಿಯಾಗಿ ಏರ್ಪಡಿಸಿದ ಸಮಾವೇಶದಲ್ಲಿ ಮಾತನಾಡಿದರು.

2012-13ರಲ್ಲಿ ಬಿಜೆಪಿ ಸರಕಾರ ಕಾರ್ಕಳಕ್ಕೆ ನೀಡಿರುವುದು 5 ಕೋಟಿ, 2013-14ರಲ್ಲಿ 8 ಕೋಟಿ ರೂ. , ಅನಂತರ ಬಂದ ಸಿದ್ದರಾಮಯ್ಯ ಸರಕಾರ 48 ಕೋಟಿ ರೂ. ನೀಡಿದೆ ಎಂದರು.

ದೇಶ ರಕ್ಷಕರು ಸೈನಿಕರು. ಸೇನಾ ಪಡೆಗೆ ರಾಷ್ಟ್ರಪತಿ ಮುಖ್ಯಸ್ಥರೇ ಹೊರತು ಪ್ರಧಾನಿಯಲ್ಲ. ಸೈನಿಕರಸಾಧನೆಯನ್ನೂ ಮೋದಿ ತನ್ನದೆನ್ನುತ್ತಿ ದ್ದಾರೆ. ಇಂದಿರಾ ಗಾಂಧಿ, ಲಾಲ್‌ ಬಹದ್ದೂರ್‌ ಶಾಸಿŒಯವರೂ ಸೈನಿಕರ ಸಾಹಸವನ್ನು ತಮ್ಮ ಸರಕಾರದ್ದೆಂದು ಹೇಳಿಕೊಂಡಿರಲಿಲ್ಲ. ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಭಯೋ ತ್ಪಾದಕ ಚಟುವಟಿಕೆಗಳಾಗಲಿ, ಇನ್ನಿತರ ಯಾವುದೇ ಅಹಿತಕರ ಘಟನೆಗಳಾಗಲಿ ನಡೆ‌ದಿರಲಿಲ್ಲ. ಹಾಗೆಂದು ಅದು ನಮ್ಮ ಸಾಧನೆ ಎಂದು ಹೇಳಿಕೊಂಡು ಬಂದಿರಲಿಲ್ಲ ಎಂದರು.

ಅಸ್ಥಿರಗೊಳಿಸುವ ತಂತ್ರ
ರಾಜ್ಯ ಸರಕಾರವನ್ನು ಅಸ್ಥಿರಗೊಳಿ ಸುವ ತಂತ್ರ ರೂಪಿಸುತ್ತಿದ್ದ ಬಿಜೆಪಿಯವರು ನೆಮ್ಮದಿಯಾಗಿ ಆಡಳಿತ ನಡೆಸಲು ಬಿಡಲಿಲ್ಲ. ಸರಕಾರಕ್ಕೆ ಪದೇಪದೇ ಗಡುವು ನೀಡುವ ಮೂಲಕ ಅಧಿಕಾರಿಗಳು ಪರಿಣಾಮಕಾರಿ ಯಾಗಿ ಕೆಲಸ ನಿರ್ವಹಿಸದಂತೆ ತಡೆಯು ತ್ತಿದ್ದರು. ಇವೆಲ್ಲವುಗಳ ನಡುವೆ ನಾವು ಜನಪರ ಆಡಳಿತ ನೀಡಿದ್ದೇವೆ. ಅನೇಕ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದೇವೆ. ನಮ್ಮ ಕೆಲಸ ಕಾರ್ಯಗಳಿಗೆ ನಿರೀಕ್ಷಿತ ಪ್ರಚಾರ ಮಾತ್ರ ಸಿಗುತ್ತಿಲ್ಲ ಎಂದರು.

ಒಂದು ಬಾರಿ ಅವಕಾಶ ಕೊಡಿ…
ಈ ಬಾರಿ ಪ್ರಮೋದ್‌ ಮಧ್ವರಾಜ್‌ಅವರಿಗೊಂದು ಅವಕಾಶ ಕೊಡಿ. ಕ್ಷೇತ್ರದ ಅಭಿವೃದ್ಧಿಯೊಂದಿಗೆ ಈ ಭಾಗದ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ಮನವಿ ಮಾಡಿಕೊಂಡರು.

ಸಚಿವರಾದ ಡಾ| ಜಯಮಾಲಾ, ಯು.ಟಿ. ಖಾದರ್‌, ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌, ನಾಯಕರಾದ ಅಮರನಾಥ ಶೆಟ್ಟಿ, ಭೋಜೇಗೌಡ, ಬಿ.ಎಂ. ಫಾರೂಕ್‌, ಗೋಪಾಲ ಭಂಡಾರಿ, ಯು.ಆರ್‌. ಸಭಾಪತಿ, ಅಶೋಕ ಕುಮಾರ್‌ ಕೊಡವೂರು, ಉದಯ ಶೆಟ್ಟಿ ಮುನಿಯಾಲು, ಅಧ್ಯಕ್ಷ ಶೇಖರ್‌ ಮಡಿವಾಳ, ಯೋಗಿಶ್‌ ಶೆಟ್ಟಿ ವೇದಿಕೆ ಯಲ್ಲಿದ್ದರು. ಬಿಪಿನ್‌ ಚಂದ್ರಪಾಲ್‌ ಸಭೆ ನಿರ್ವಹಿಸಿದರು.

ಹಣ ರಾಜ್ಯದ್ದು; ಹೆಸರು ಮೋದಿಯದ್ದು!
ಮೋದಿ 5 ವರ್ಷಗಳಲ್ಲಿ ಮಾಡಿದ್ದು ಭಾಷಣ ಮಾತ್ರ. ಆಯುಷ್ಮಾನ್‌ ಭಾರತ್‌ ಯೋಜನೆಗೆ ರಾಜ್ಯ ಸರಕಾರ 900 ಕೋಟಿ ರೂ. ಭರಿಸಿದರೆ, ಕೇಂದ್ರ ನೀಡಿದ್ದು ಕೇವಲ 350 ಕೋಟಿ. ಆದರೆ ಜಾಹೀರಾತಿನಲ್ಲಿ ಮೋದಿ ಚಿತ್ರ ಮಾತ್ರವಿದೆ ಎಂದು ಟೀಕಿಸಿದ ಮುಖ್ಯಮಂತ್ರಿಗಳು, ನರೇಗಾ ಯೋಜನೆಗೆ ಮೋದಿ ಸರಕಾರ ನಯಾ ಪೈಸೆ ನೀಡದೇ ಕಾರ್ಮಿಕ ರನ್ನು ಸಂಕಷ್ಟಕ್ಕೆ ದೂಡಿತ್ತು. ಈ ವೇಳೆ ರಾಜ್ಯ ಸರಕಾರವೇ 1,300 ಕೋಟಿ ರೂ. ಭರಿಸಿದ್ದು ಎಂದರು.

– ಸಿಎಂ ಆದ ಬಳಿಕ ಗಲಭೆಯಾಗಿಲ್ಲ
ನಾನು ಮುಖ್ಯಮಂತ್ರಿಯಾದ ಬಳಿಕ ಕರಾವಳಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ರಾಜಕೀಯಕ್ಕೋಸ್ಕರ ಬಿಜೆಪಿಯು ಜಾತಿ, ಧರ್ಮಗಳ ಮಧ್ಯೆ ವೈಷಮ್ಯ ಸೃಷ್ಟಿಸುತ್ತಿದೆ ಎಂದರು.

ನ‌ನ್ನ ಮನೆಗೆ ಪ್ರತಿದಿನ ಅಂಗವಿಕಲರು, ಆನಾರೋಗ್ಯ ಪೀಡಿತರು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ. ಅಂಥವರಿಗೆ ನೆರವಾಗು ವಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 9 ತಿಂಗಳಲ್ಲಿ 85 ಕೋಟಿ ರೂ. ನೀಡಲಾಗಿದೆ. ಹಿರಿಯ ನಾಗರಿಕರ ಮಾಸಾಶನವನ್ನು 1 ಸಾವಿರಕ್ಕೆ ಏರಿಸಲಾಗಿದೆ ಎಂದರು.

–  ಶೋಭಾ ಮಾತನಾಡಿದ್ದಾರಾ ?
ಅಡಿಕೆ, ತೆಂಗು ಬೆಳೆಗಾರರ ಸಮಸ್ಯೆ, ಮೀನುಗಾರಿಕೆ ಸಮಸ್ಯೆ ಕುರಿತು ಕುರಿತು ಶೋಭಾ ಲೋಕಸಭೆಯಲ್ಲಿ ಮಾತನಾಡಿದ್ದಾರಾ? ನಾಪತ್ತೆ ಯಾದ ಬೋಟ್‌ ಪತ್ತೆಹಚ್ಚುವಲ್ಲಿ ಕೇಂದ್ರ ಸರಕಾರ ಸ್ಪಂದಿಸಿದೆಯೇ ಎಂದು ಸಿಎಂ ಪ್ರಶ್ನಿಸಿದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.