1 ತಿಂಗಳ ಚಂದಾದಾರಿಕೆಯನ್ನು ರದ್ದುಗೊಳಿಸಿದ ಅಮೆಜಾನ್ ಪ್ರೈಮ್; ಫ್ರೀ ಟ್ರಯಲ್ ಸೇವೆ ಕೂಡ ಅಲಭ್ಯ

Team Udayavani, May 16, 2021, 9:25 AM IST

prie

ನವದೆಹಲಿ: ಓಟಿಟಿ ಫ್ಲ್ಯಾಟ್ ಫಾರ್ಮ್ ಗಳಲ್ಲಿ ಒಂದಾದ ಅಮೆಜಾನ್ ಪ್ರೈಮ್ ತನ್ನ, ಒಂದು ತಿಂಗಳ ಕಾಲಾವಧಿಯ ಸಬ್ ಸ್ಕ್ರಿಫ್ಷನ್ ಪ್ಲ್ಯಾನ್ (ಚಂದಾದಾರಿಕೆ) ನನ್ನು ರದ್ದುಗೊಳಿಸಿದೆ. ಮಾತ್ರವಲ್ಲದೆ ಅಮೇಜಾನ್ ಪ್ರೈಮ್ ಟ್ರಯಲ್ ಪ್ಯಾಕ್ ಯೋಜನೆಯನ್ನೂ ಸ್ಥಗಿತಗೊಳಿಸಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಮೆಜಾನ್ ಪ್ರೈಮ್ ತಿಳಿಸಿದೆ. ಬ್ಯಾಂಕ್ ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಆರ್ ಬಿಐ, ಪುನರಾವರ್ತಿತ ಆನ್ ಲೈನ್ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಲು ಧೃಡೀಕರಣದ ಅಂಶಗಳನ್ನು ಸೇರಿಸುವಂತೆ ಸೂಚನೆ ನೀಡಿತ್ತು. ಜೊತೆಗೆ ಸೆಪ್ಟೆಂಬರ್ 30ರ  ಗಡುವನ್ನು ಕೂಡ ವಿಧಿಸಿತ್ತು.

ಅಮೆಜಾನ್ ತನ್ನ FAQ(Frequently asked questions) ಪೇಜ್ ಅನ್ನು ನವೀಕರಣಗೊಳಿಸಿದ್ದು, ಕೆಲವೊಂದು ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದೆ. ಹೊಸ ಮಾರ್ಗಸೂಚಿಯ ಪ್ರಕಾರ ಬ್ಯಾಂಕ್ ಗಳಿಗೆ ಕ್ರೆಡಿಟ್ / ಡೆಬಿಟ್ ಕಾರ್ಡ್‌ಗಳ ಮೂಲಕ ಮಾಡಲಾಗುವ ಹೊಸ ಸ್ವಯಂಚಾಲಿತ ಪಾವತಿಗಳನ್ನು ಪ್ರಕ್ರಿಯೆಗೊಳಿಸಲು ಸಾಧ್ಯವಾಗುವುದಿಲ್ಲ ಎಂದಿದೆ.

ಅಮೇಜಾನ್ ಪ್ರೈಮ್ ಒಂದು ತಿಂಗಳ ಚಂದಾದಾರಿಕೆ ಪಡೆಯಲು 129 ರೂ. ಪಾವತಿಸಬೇಕಾಗಿತ್ತು. ಇದೀಗ ಈ ಸೇವೆ ರದ್ದುಗೊಂಡಿದ್ದರಿಂದ, 3 ತಿಂಗಳ (329 ರೂ.) ಅಥವಾ ಒಂದು ವರ್ಷದ ಚಂದಾದಾರಿಕೆ (999 ರೂ.) ಪ್ಲ್ಯಾನ್ ಪಡೆಯಲು ಮಾತ್ರ ಅವಕಾಶವಿದೆ. ಏಪ್ರಿಲ್ 27, 2021ರಿಂದಲೇ ಹೊಸ ನೀತಿ ಅನ್ವಯವಾಗಲಿದ್ದು, ಹೊಸ ಚಂದಾದಾರಿಕೆ ಪಡೆಯಲಿಚ್ಚಿಸುವವರು ಫ್ರೀ ಟ್ರಯಲ್ ಹಾಗೂ ಮಾಸಿಕ ಚಂದಾದಾರರಾಗಲು ಸಾಧ್ಯವಿಲ್ಲ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.