ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ತ್ವರಿತ ನಿರ್ಧಾರ, ತ್ವರಿತ ಅನುಷ್ಠಾನಕ್ಕೆ ಒತ್ತು ನೀಡಲು ನಿರ್ಧಾರ

Team Udayavani, Oct 21, 2021, 5:45 AM IST

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ನವದೆಹಲಿ: ಪ್ರತಿಯೊಬ್ಬ ನಾಗರಿಕರ ಜನನ ಪ್ರಮಾಣ ಪತ್ರ, ನಾನಾ ಯೋಜನೆಗಳ ಪ್ರಮಾಣಪತ್ರಗಳು ಒಂದೇ ವೇದಿಕೆಯಲ್ಲಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡಲು ಹೊಸ ವ್ಯವಸ್ಥೆಯೊಂದನ್ನು ರೂಪಿಸಲು ಕೇಂದ್ರ ಸರ್ಕಾರ 60 ಅಂಶಗಳ ಕಾರ್ಯಸೂಚಿಯನ್ನು ನಿರ್ಧರಿಸಿರುವ ಬೆನ್ನಲ್ಲೇ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉಪಲಬ್ಧತೆಯನ್ನು ಗಣನೀಯವಾಗಿ ಹೆಚ್ಚಿಸಲು ಮತ್ತೊಂದು ಹೆಜ್ಜೆ ಇಡಲಾಗಿದೆ.

ಒಟ್ಟಾರೆ ದೇಶೀಯ ಉತ್ಪಾದನೆಗೆ (ಜಿಡಿಪಿ) ಮಾಹಿತಿ ತಂತ್ರಜ್ಞಾನ ಕ್ಷೇತ್ರದಿಂದ ಬರುತ್ತಿರುವ ದೇಣಿಗೆಯನ್ನು ಗಣನೀಯವಾಗಿ ಹೆಚ್ಚಿಸಲು, ಆ ಕ್ಷೇತ್ರದಲ್ಲಿ ತ್ವರಿತ ನಿರ್ಧಾರ, ತ್ವರಿತ ಅನುಷ್ಠಾನ, ಪರಿಣಾಮಕಾರಿ ಆಡಳಿತವನ್ನು ನೀಡುವುದು ಹಾಗೂ ಹೊಸ ಸ್ಟಾರ್ಟ್‌ ಅಪ್‌ ಗಳ ಬೆಳವಣಿಗೆಗಳಿಗೆ ಮತ್ತಷ್ಟು ಪೂರಕವಾದ ವಾತಾವರಣವನ್ನು ಒದಗಿಸಲು ತೀರ್ಮಾನಿಸಲಾಗಿದೆ.

ಹೆಚ್ಚೆಚ್ಚು ಸಂಗ್ರಹವಾಗಿರುವ ದತ್ತಾಂಶ ಕ್ರೋಢೀಕರಣವನ್ನು ವಿವಿಧ ಯೋಜನೆಗಳಲ್ಲಿ, ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಧಾನ ಮಾಹಿತಿ ಅಧಿಕಾರಿಗಳನ್ನು (ಸಿಐಒ) ಹಾಗೂ ಮುಖ್ಯ ತಾಂತ್ರಿಕ ಅಧಿಕಾರಿಗಳನ್ನು (ಸಿಟಿಒ) ನೇಮಿಸಲು ನಿರ್ಧರಿಸಲಾಗಿದೆ.

ಈ ಮೂಲಕ, ಈ ಕ್ಷೇತ್ರದಲ್ಲಿ ಬಂಡವಾಳ ಹೂಡುವ ಪ್ರತಿಯೊಬ್ಬರಿಗೂ ಸರ್ಕಾರ ಯೋಜನೆಗಳು, ಸವಲತ್ತುಗಳು ತ್ವರಿತವಾಗಿ, ಕ್ರಮಬದ್ಧವಾಗಿ ಸಿಗುವಂತೆ ಮಾಡಲು ನಿರ್ಧರಿಸಲಾಗಿದೆ. ಜಿಯೋಗ್ರಾಫಿಕ್‌ ಇನಾರ್ಮೇಷನ್‌ ಸಿಸ್ಟಂ (ಜಿಐಎಸ್‌) ಮ್ಯಾಪಿಂಗ್‌ ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ದೇಶದ ಒಟ್ಟಾರೆ ದೇಶೀಯ ಉತ್ಪಾದನೆಯನ್ನು (ಜಿಡಿಪಿ) ಗಣನೀಯ ಮಟ್ಟಕ್ಕೆ ಏರಿಸುವುದು ಮತ್ತೂಂದು ಉದ್ದೇಶವಾಗಿದೆ.

ಇದನ್ನೂ ಓದಿ:ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

“ಕರ್ಮಯೋಗಿ’ಗೆ ಮತ್ತಷ್ಟು ಒತ್ತು:
ಜಿಐಎಸ್‌ ಆಧಾರಿತ ಯೋಜನೆ ಮತ್ತು ಅನುಷ್ಠಾನ ಪದ್ಧತಿಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಕೆಲಸವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಜಾರಿಗೊಳಿಸಿರುವ ಕರ್ಮಯೋಗಿ ಯೋಜನೆಯಡಿಯ ಒಂದು ಭಾಗವಾಗಿಯೇ ಇದನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.

ಮಿತ್ರುಭೂಮಿ ಮೂಲಕ ಡಿಜಿಟೈಸೇಷನ್‌:
2023ರೊಳಗೆ ಎಲ್ಲಾ ಭೂದಾಖಲೆಗಳನ್ನು ಡಿಜಿಟೈಸ್ಡ್ ತಂತ್ರಜ್ಞಾನದ ಮೂಲಕ ಲಭ್ಯವಾಗುವಂತೆ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಪ್ರತಿಯೊಂದು ಹೊಲಕ್ಕೆ ಅಥವಾ ಮನೆಯ ನಿವೇಶನಕ್ಕೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲಾಗುತ್ತದೆ. ಇದರ ಜೊತೆಯಲ್ಲೇ, ಕಂದಾಯ ಇಲಾಖೆಯ ಅಡಿಯಲ್ಲಿ ದಾಖಲಾಗುವ ಎಲ್ಲಾ ರೀತಿಯ ಭೂ ವ್ಯಾಜ್ಯಗಳ ಇತ್ಯರ್ಥಕ್ಕಾಗಿ ಇ-ಕೋರ್ಟ್‌ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಈ ಮೂಲಕ, ಭೂದಾಖಲೆಗಳು, ವ್ಯಾಜ್ಯಗಳ ಇತ್ಯರ್ಥ ವ್ಯವಸ್ಥೆಗಳಿಗೆ ಪಾರದರ್ಶಕತೆ ಕೊಡಲು ನಿರ್ಧರಿಸಲಾಗಿದೆ.

ಹಂತಹಂತವಾಗಿ ಜಾರಿ
ಸೆ. 18ರಂದು ಪ್ರಧಾನಿ ನೇತೃತ್ವದಲ್ಲಿ ಹಲವಾರು ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ದೇಶದ ನಾಗರಿಕರಿಗೆ ಅವರಿಗೆ ಬೇಕಾದ ಮೂಲದಾಖಲೆಗಳನ್ನು ಒಂದೇ ವ್ಯವಸ್ಥೆಯಡಿ ಕಲ್ಪಿಸುವ ಮಹತ್ವದ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಿದ್ದರು. ಅದೇ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವಾರು ಹೊಸ ಆಲೋಚನೆಗಳುಳ್ಳ ಯೋಜನೆಗಳ ಬಗ್ಗೆ ಚರ್ಚಿಸಲಾಗಿತ್ತು. ಆಗ ರೂಪುಗೊಂಡಿರುವ ಹೊಸ ವ್ಯವಸ್ಥೆಗಳು, ಹೊಸ ಯೋಜನೆಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ಡುಕಾಟಿ ಪೆನಿಗೇಲ್‌ ವಿ4 2022 ಅನಾವರಣ

ಡುಕಾಟಿ ಪೆನಿಗೇಲ್‌ ವಿ4 2022 ಅನಾವರಣ

oneplus buds pro

ಸಂಗೀತ ಆಲಿಸಲು ಉತ್ತಮ ಆಯ್ಕೆ ಒನ್‍ಪ್ಲಸ್‍ ಬಡ್ಸ್ ಪ್ರೊ: ಏನಿದರ ವಿಶೇಷತೆ? ಬೆಲೆ ಎಷ್ಟು?

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.