ರಿಲಯನ್ಸ್ ಜಿಯೋದ ಶೇ. 9.99 ಷೇರನ್ನು 5.7 ಬಿಲಿಯನ್ ಡಾಲರ್ ಗೆ ಖರೀದಿಸಿದ ಫೇಸ್ ಬುಕ್
ಟೆಲಿಕಾಂ ಸಂಸ್ಥೆಯಲ್ಲಿ ಇಂತಹ ಅಭೂತಪೂರ್ವ ಬೆಳವಣಿಗೆ ಹಿಂದೆಂದೂ ನಡೆದಿರಲಿಲ್ಲ
Team Udayavani, Apr 22, 2020, 8:40 AM IST
ನವದೆಹಲಿ: ತಂತ್ರಜ್ಞಾನ ದೈತ್ಯ ಫೇಸ್ ಬುಕ್, ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದ್ದ ರಿಲಾಯನ್ಸ್ ಜಿಯೋದಲ್ಲಿ ಶೇ 9.99ರಷ್ಷರ ಶೇರುಗಳನ್ನು ಖರೀದಿಸಿದೆ. ಈ ಷೇರಿನ ಮೌಲ್ಯ 5.7 ಬಿಲಿಯನ್ ಡಾಲರ್ (43,574 ಕೋಟಿ ರೂಪಾಯಿ) ಆಗಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಆ ಮೂಲಕ ಫೇಸ್ ಬುಕ್, ಉದ್ಯಮಿ ಮುಕೇಶ್ ಅಂಬಾನಿ ಒಡೆತನದ ಜಿಯೋದಲ್ಲಿ ಹೂಡಿಕೆ ಮಾಡುವ ಮುಖಾಂತರ ಶೇ. 9.9 ರಷ್ಟು ಪಾಲುದಾರಿಕಯನ್ನು ತನ್ನದಾಗಿಸಿಕೊಂಡಿದೆ.
ಈ ಬೆಳವಣಿಗೆ ಕುರಿತು ಮಾಹಿತಿ ನೀಡಿದ ರಿಲಾಯನ್ಸ್ ಇಂಡಸ್ಟ್ರೀಸ್ ’ಟೆಲಿಕಾಂ ಸಂಸ್ಥೆಯಲ್ಲಿ ಇಂತಹ ಅಭೂತಪೂರ್ವ ಬೆಳವಣಿಗೆ ಹಿಂದೆಂದೂ ನಡೆದಿರಲಿಲ್ಲ. ಭಾರತದ ಜನರ ಹಾಗೂ ಭಾರತದ ಆರ್ಥಿಕತೆಗೆ ಅಗತ್ಯವಿರುವುದನ್ನು ಪೂರೈಸುವ ಮೂಲಕ ಈ ಪಾಲುದಾರಿಕೆಯು ಭಾರತದ ಸರ್ವತೋಮುಖ ಬೆಳವಣಿಗೆಗೆ ಪುಷ್ಟಿ ನೀಡಲಿದೆ ಎಂದಿದೆ.
2016ರಲ್ಲಿ ಡಿಜಿಟಲ್ ಸರ್ವೋದಯದ ಕನಸು ಕಂಡು ನಾವು ಜಿಯೋ ಸಂಸ್ಥೆಯನ್ನು ಆರಂಭಿಸಿದೆವು. ಇದೀಗ ಇಡೀ ಜಗತ್ತು ಡಿಜಿಟಲೀಕರಣವಾಗಿದೆ. ಈ ವೇಳೆ ಭಾರತೀಯರೂ ಡಿಜಿಟಲ್ ಯುಗದಲ್ಲಿ ಮುಂದೆ ಬರಬೇಕು ಎಂಬುದು ನಮ್ಮ ಆಶಯವಾಗಿತ್ತು. ಈಗ ಈ ವಿಚಾರದಲ್ಲಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿದ್ದೇವೆ. ಹೀಗಾಗಿ, ಫೇಸ್ಬುಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ,” ಎಂದು ಆರ್ ಐಎಲ್ ಮುಖ್ಯಸ್ಥ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ