Pub-G ಹೋಯ್ತು FAU-G ಬಂತು; ಏನಿದು ಅಕ್ಷಯ್ ಕುಮಾರ್ ಅನೌನ್ಸ್ ಮಾಡಿದ ಹೊಸ ಸ್ವದೇಶಿ ಗೇಮ್?
Team Udayavani, Sep 4, 2020, 6:23 PM IST
ಮುಂಬೈ: ಪಬ್ ಜಿ ಬ್ಯಾನ್ ಆದ ಬೆನ್ನಲ್ಲೇ ಬಾಲಿವುಡ್ ನಟ ಅಕ್ಷಯ್ ಕುಮಾರ್ FAU-G ಎಂಬ ಮಲ್ಟಿಪ್ಲೇಯರ್ ಗೇಮ್ ಒಂದನ್ನು ಪರಿಚಯಿಸಿದ್ದಾರೆ. ಮಾತ್ರವಲ್ಲದೆ ಈ ಅಪ್ಲಿಕೇಶನ್ ಪ್ರಧಾನಿ ಮೋದಿಯವರ ಆತ್ಮನಿರ್ಭರ ಯೋಜನೆಗೆ ಬೆಂಬಲ ನೀಡುತ್ತದೆ ಎಂದಿದ್ದಾರೆ.
ಈ ಅಪ್ಲಿಕೇಷನ್ ಶೀಘ್ರದಲ್ಲಿ ಪ್ಲೇಸ್ಟೋರ್ ಗಳಲ್ಲಿ ಲಭ್ಯವಿರಲಿದ್ದು, ಸೈನಿಕರ ತ್ಯಾಗ ಬಲಿದಾನಗಳ ಕುರಿತು ಈ ಆ್ಯಪ್ ನಲ್ಲಿ ತಿಳಿಸಲಾಗಿದೆ. ಮಾತ್ರವಲ್ಲದೆ ಈ ಗೇಮಿಂಗ್ ಆ್ಯಪ್ ನಿಂದ ಬರುವ 20% ಆದಾಯವನ್ನು ಭಾರತ್ ಕೀ ವೀರ್ ಟ್ರಸ್ಟ್ ಗೆ ದೇಣಿಗೆಯಾಗಿ ನೀಡಲಾಗುವುದು ಎಂದು ಅಕ್ಷಯ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಇನ್ ಸ್ಟಾಗ್ರಾಂನಲ್ಲಿ ಮಾಹಿತಿ ನಿಡಿದ ಅಕ್ಷಯ್, ಪ್ರಧಾನಿ ಮೋದಿಯವರ ಆತ್ಮನಿರ್ಭರ ಯೋಜನೆಯೊಂದಿಗೆ ಕೈಜೋಡಿಸುತ್ತಾ, ಈ ಗೇಮಿಂಗ್ ಆ್ಯಪ್ ಅಭಿವೃದ್ದಿಪಡಿಸಲಾಗಿದೆ. FAU-G ಎಂದರೇ Fearless and United-Guards. ಇದರಲ್ಲಿ ಮನೋರಂಜನೆ ಮಾತ್ರವಲ್ಲದೆ ಆಟಗಾರರಿಗೆ ಸೈನಿಕರ ತ್ಯಾಗ ಬಲಿದಾನಗಳ ಬಗ್ಗೆಯೂ ಮಾಹಿತಿ ನೀಡಲಾಗುವುದು. ಈ ಗೇಮ್ ನಿಂದ ಬರುವ 20% ಆದಾಯವನ್ನು #Bharatkeveer ಟ್ರಸ್ಟ್ ಗೆ ನೀಡಲಾಗುವುದು. ಇದು ನನ್ನ ಮೊದಲ ಗೇಮಿಂಗ್ ಉದ್ಯಮವಾಗಿದೆ ಎಂದಿದ್ದಾರೆ.
FAU-G ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಹೊರಬೀಳಬೇಕಾಗಿದೆ. ಕೇಂದ್ರ ಸರ್ಕಾರ 118 ಆ್ಯಪ್ ಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ FAU-G ಪ್ರಕಟಣೆ ಬಂದಿದ್ದು ಕುತೂಹಲ ಮೂಡಿಸಿದೆ. ಈ ಬಗ್ಗೆ ನೆಟ್ಟಿಗರು ಕೂಡ ಉತ್ಸಾಹ ವ್ಯಕ್ತಪಡಿಸಿದ್ದು ಪಬ್ ಜಿ ಗೆ FAU-G ಪರ್ಯಾಯ ಆ್ಯಪ್ ಎಂದೇ ಚರ್ಚಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ