ಲಾಕ್‌ ಡೌನ್‌: ಜಿಲ್ಲೆ ಸಂಪೂರ್ಣ ಸ್ತಬ್ಧ

ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಆದೇಶಕ್ಕೆ ಜನರ ಸ್ಪಂದನೆ

Team Udayavani, May 25, 2020, 11:39 AM IST

25-May-5

ವಿಜಯಪುರ: ಕೋವಿಡ್ ನಿಯಂತ್ರಣಕ್ಕೆ ಕರ್ಫ್ಯೂ ಘೋಷಣೆ ಹಿನ್ನೆಲೆಯಲ್ಲಿ ನಗರದ ಮಹಾತ್ಮಾ ಗಾಂಧಿ ವೃತ್ತ ಬಿಕೋ ಎನ್ನುತ್ತಿತ್ತು.

ವಿಜಯಪುರ: ಕೋವಿಡ್‌-19 ಕೋವಿಡ್ ಸೋಂಕು ನಿಗ್ರಹಕ್ಕಾಗಿ ರಾಜ್ಯ ಸರ್ಕಾರ ರವಿವಾರ ವಿಧಿಸಿದ್ದ ಕರ್ಫ್ಯೂ ವಿಜಯಪುರ ನಗರ ಸೇರಿದಂತೆ ಜಿಲ್ಲೆ ಸಂಪೂರ್ಣ ಸ್ತಬ್ಧಗೊಳ್ಳುವ ಮೂಲಕ ಪೂರ್ಣ ಪ್ರಮಾಣದಲ್ಲಿ ಸ್ಪಂದನೆ ವ್ಯಕ್ತವಾಗಿದೆ.

ಮಾರ್ಚ 22 ರಂದು ಜನತಾ ಕರ್ಫ್ಯೂ ನಂತರ ಎರಡು ತಿಂಗಳ ಬಳಿಕ ಸರ್ಕಾರ ರಾಜ್ಯದಾದ್ಯಂತ ಘೋಷಿಸಿದ ವಾರದ ಕೊನೆ ದಿನ ಕರ್ಫ್ಯೂ ಆದೇಶಕ್ಕೆ ವಿಜಯಪುರ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ರಂಜಾನ್‌ ಹಬ್ಬಕ್ಕೆ ಮುನ್ನಾ ದಿನವೇ ಘೋಷಿತವಾದ ಕರ್ಫ್ಯೂಗೆ ವಿಜಯಪುರ ಜಿಲ್ಲೆಯಲ್ಲಿ ಸೂಕ್ತ ಸ್ಪಂದನೆ ಸಿಕ್ಕಿದೆ. ಬೆಳಗ್ಗೆಯಿಂದಲೇ ನಗರದ ಪ್ರಮುಖ ರಸ್ತೆಗಳು ಜನ ಸಂಚಾರ ಇಲ್ಲದೇ ಬಿಕೋ ಎನ್ನತೊಡಗಿತ್ತು. ಅಲ್ಲಲ್ಲಿ ಕೆಲವರು ತುರ್ತು ಕೆಲಸಗಳಿಗೆ ಬೈಕ್‌, ಲಘು ವಾಹನಗಳ ಓಡಾಟ ಕಂಡು ಬಂದರೂ ಪೊಲೀಸರ ಎಚ್ಚರಿಕೆ ಕಾರಣ ಅನಗತ್ಯ ರಸ್ತೆಗೆ ಇಳಿಯುವವರೂ ಕಾಣಿಸಿಕೊಳ್ಳಲಿಲ್ಲ.

ಕರ್ಫ್ಯೂ ರವಿವಾರ ಇದ್ದ ಕಾರಣ ಸರ್ಕಾರಿ ಕಚೇರಿಗಳಿಗೂ ಸಹಜವಾಗಿ ರಜೆ ಇದ್ದು, ಸರ್ಕಾರಿ ಸೇವೆಯ ಕರ್ತವ್ಯಕ್ಕೆ ತೆರಳುವವರೂ ರಸ್ತೆಗಳಲ್ಲಿ ಕಾಣಿಸಿಕೊಳ್ಳಲಿಲ್ಲ. ವಾರದಿಂದ ಬಸ್‌ ಸಂಚಾರ ಆರಂಭಗೊಂಡು ಮತ್ತೆ ತನ್ನ ವೈಭವ ಕಂಡುಕೊಂಡಿದ್ದ ನಗರದ ಕೇಂದ್ರ ಬಸ್‌ ನಿಲ್ದಾಣ ಸೇರಿದಂತೆ ಜಿಲ್ಲೆಯ ಎಲ್ಲ ಬಸ್‌ ನಿಲ್ದಾಣಗಳು ಮತ್ತೆ ಸ್ತಬ್ಧಗೊಂಡಿದ್ದವು. ನಗರದ ಪ್ರಮುಖ ವಾಣಿಜ್ಯ ಕೇಂದ್ರ ಎನಿಸಿರುವ ಮಹಾತ್ಮಾ ಗಾಂಧೀಜಿ ವೃತ್ತದ ಸುತ್ತಲ ಪ್ರದೇಶಗಳಾದ ಲಾಲ್‌ ಬಹದ್ದೂರ ಶಾಸ್ತ್ರಿ ಮಾರುಕಟ್ಟೆ, ಕಿತ್ತೂರ ರಾಣಿ ಚನ್ನಮ್ಮ ಮಾರುಕಟ್ಟೆ, ನೆಹರು ಮಾರುಕಟ್ಟೆ, ಶ್ರೀ ಸಿದ್ಧೇಶ್ವರ ದೇವಸ್ಥಾನ ರಸ್ತೆ, ಕಿರಾಣಿ ಬಜಾರ್‌ ಸೇರಿದಂತೆ ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳು ಶನಿವಾರ ಸಂಜೆ 7 ರಿಂದಲೇ ಬಾಗಿಲು ಹಾಕಿದ್ದರಿಂದ ರವಿವಾರ ಮಾರುಕಟ್ಟೆ ಪ್ರದೇಶ ಸಂಪೂರ್ಣ ಬಿಕೋ ಎನ್ನುತ್ತಿತ್ತು.

ಜನತಾ ಕರ್ಫ್ಯೂ ಬಳಿಕ ಕೋವಿಡ್‌ ಸೋಂಕಿನ ವೇಗ ನಿಗ್ರಹಕ್ಕೆ ಕೇಂದ್ರ ಸರ್ಕಾರ ಸರಾಸರಿ ಒಂದೂವರೆ ತಿಂಗಳು ಘೋಷಿಸಿದ್ದ ಲಾಕ್‌ಡೌನ್‌ನಿಂದಲೂ ವಿಜಯಪುರ ಜಿಲ್ಲೆ ಸ್ತಬ್ಧವಾಗಿತ್ತು. ಸರಕು ವಾಹನಗಳ ಹೊರತಾಗಿ ಸಾರಿಗೆ ಸಂಸ್ಥೆಯ ಬಸ್‌, ನಗರ ಸಾರಿಗೆ, ಆಟೋ ಸೇರಿದಂತೆ ಎಲ್ಲ ರೀತಿಯ ಜನಸಾರಿಗೆಯೂ ನಿಷೇಧಿಸಲ್ಪಟ್ಟಿತ್ತು. ರವಿವಾರದ ಕರ್ಫ್ಯೂ ಸಂದರ್ಭದಲ್ಲಿ ಕೂಡ ರಸ್ತೆಗಳು ಮತ್ತೆ ಸಂಪೂರ್ಣ ಸ್ತಬ್ಧವಾಗಿ, ನಿರ್ಜನವಾಗಿದ್ದವು. ಕರ್ಫ್ಯೂ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ವಾಹನಗಳು ಗಸ್ತು ತಿರುಗುತ್ತಿದ್ದವು. ಮತ್ತೊಂದೆಡೆ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್‌ ಹಾಕಿದ್ದ ಪೊಲೀಸರು ಸಂಚಾರ ಬಂದ್‌ ಮಾಡಿದ್ದರು. ವೈದ್ಯರು ಸೇರಿದಂತೆ ಕೋವಿಡ್‌ ವಾರಿಯರ್‌ಗಳು ಹಾಗೂ ತುರ್ತು ಸೇವೆಗೆ ತೆರಳುವವರು ಗುರುತಿನ ಪತ್ರ ಪರಿಶೀಲನೆ ಬಳಿಕ ಅನುಮತಿಸಲಾಗುತ್ತಿತ್ತು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.