ಜಿಲ್ಲಾ ಉಸ್ತುವಾರಿ ಶ್ರೀರಾಮುಲುಗೆ ನೀಡಿ

Team Udayavani, Nov 24, 2021, 3:37 PM IST

ballari news

ಬಳ್ಳಾರಿ: ನಗರ ಶಾಸಕ ಸೋಮಶೇಖರರೆಡ್ಡಿಯವರ ಇಚ್ಛೆಯಂತೆ ವಿಭಜಿತ ಬಳ್ಳಾರಿಜಿಲ್ಲಾ ಉಸ್ತುವಾರಿಯನ್ನು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರಿಗೆ ನೀಡುವಂತೆ ಸಿಎಂಬಸವರಾಜ ಬೊಮ್ಮಾಯಿ ಅವರಿಗೆ ಈಗಾಗಲೇಹೇಳಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ,ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್‌ ಹೇಳಿದರು.

ನಗರದ ಡಿಸಿ ಕಚೇರಿ ಆವರಣದಲ್ಲಿ ವಿಧಾನಪರಿಷತ್‌ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಸತೀಶ್‌ ಅವರು ನಾಮಪತ್ರ ಸಲ್ಲಿಸಿದ ಬಳಿಕಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಭಿವೃದ್ಧಿ ದೃಷ್ಟಿಯಿಂದ ಅವಿಭಜಿತ ಬಳ್ಳಾರಿಜಿಲ್ಲೆಯನ್ನು ವಿಭಜನೆ ಮಾಡಲಾಗಿದೆ. ಹೀಗಾಗಿಎರಡು ಜಿಲ್ಲೆಗಳು, ಇಬ್ಬರು ಜಿಲ್ಲಾ ಧಿಕಾರಿಗಳು ಇರುವುದರಿಂದ ಸಹಜವಾಗಿ ಒಂದಷ್ಟುಒತ್ತಡ ಇದ್ದೇ ಇರುತ್ತದೆ. ಹಾಗಾಗಿ ಬಳ್ಳಾರಿಜಿಲ್ಲೆ ಉಸ್ತುವಾರಿ ಬಿಟ್ಟುಕೊಡಲು ಸಿದ್ಧನಿದ್ದು,ಈಗಾಗಲೇ ಸಿಎಂ ಗಮನಕ್ಕೆ ತಂದಿದ್ದೇನೆ.

ಆದರೆ ಕೆಲ ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆಎಂದು ಸ್ಪಷ್ಟಪಡಿಸಿದರು.ಎರಡೂ ಜಿಲ್ಲೆಗಳ ಉಸ್ತುವಾರಿ ಸಚಿವನಾಗಿನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಕೇವಲ ಬಳ್ಳಾರಿಗೆ ಬಂದು ಸಭೆಗಳನ್ನು ಮಾಡಿದರಷ್ಟೇ ಜಿಲ್ಲೆಅಭಿವೃದ್ಧಿ ಬಗ್ಗೆ ಆಸಕ್ತಿಯಿದೆ ಎಂದಲ್ಲ. ಜಿಲ್ಲೆಯಸಮಸ್ಯೆಗಳ ಬಗ್ಗೆ ಅಧಿ ಕಾರಿಗಳೊಂದಿಗೆ ಸದಾಸಂಪರ್ಕದಲ್ಲಿದ್ದೇನೆ. ರಾಜ್ಯಾದ್ಯಂತ ಮಳೆಯಾಗಿಬೆಳೆ ನಷ್ಟವಾಗಿದೆ.

ಮುಖ್ಯಮಂತ್ರಿಗಳು ವಿಡಿಯೋಕಾನ್‌#ರೆನ್ಸ್‌ ಮೂಲಕ ಜಿಲ್ಲಾಧಿ ಕಾರಿಗಳಿಗೆ ಅಗತ್ಯಸೂಚನೆಗಳನ್ನು ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಕಂಪ್ಲಿ, ಕುರುಗೋಡು, ಸಿರುಗುಪ್ಪ, ಬಳ್ಳಾರಿತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ,ಮೆಣಸಿನಕಾಯಿ ಬೆಳೆ ನಷ್ಟವಾಗಿದೆ. ವಿಜಯನಗರಜಿಲ್ಲೆಯಲ್ಲಿ ಮೆಕ್ಕೆಜೋಳ, ಹತ್ತಿ ಸೇರಿ ಇತರೆಬೆಳೆಗಳು ನಷ್ಟವಾಗಿವೆ. ಈ ಕುರಿತು ಈಗಾಗಲೇಜಿಲ್ಲಾ ಧಿಕಾರಿಗಳಿಗೆ ಸೂಚನೆ ನೀಡಿದ್ದು, ಬೆಳೆಸಮೀಕ್ಷೆ ನಡೆಸಿ ತ್ವರಿತವಾಗಿ ಪರಿಹಾರ ವಿತರಿಸಲುಕ್ರಮ ಕೈಗೊಳ್ಳಲಾಗುತ್ತದೆ ಎಂದರು.ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆನ. 23ರಂದು ಮಂಗಳವಾರ ಕರೆಯಬೇಕಿತ್ತು.

ಆದರೆ ರೈತರ ಬೇಡಿಕೆಗನುಗುಣವಾಗಿನೀಡಲು ಜಲಾಶಯದಲ್ಲಿ ನೀರು ಲಭ್ಯವಿದೆ.ಹಾಗಾಗಿ ಎರಡನೇ ಬೇಸಿಗೆ ಬೆಳೆಗೆ ನೀರುನೀಡಲಾಗುವುದು ಎಂದರು.

ಅಭ್ಯರ್ಥಿ ಗೆಲವು ಖಚಿತ: ವಿಧಾನ ಪರಿಷತ್‌ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎಂ. ಸತೀಶ್‌ ಗೆಲುವು ಖಚಿತ. ಕಾರಣಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರೇ ಹೆಚ್ಚಿನಸಂಖ್ಯೆಯಲ್ಲಿದ್ದಾರೆ. ಇದಕ್ಕೆ ಈಚೆಗೆ ಬಳ್ಳಾರಿಯಲ್ಲಿನಡೆದ ಜನ ಸ್ವರಾಜ್‌ ಯಾತ್ರೆಯೇ ಸಾಕ್ಷಿ ಎಂದರು.ಅಭ್ಯರ್ಥಿ ಆಯ್ಕೆ ಪಕ್ಷಕ್ಕೆ ಬಿಟ್ಟ ವಿಚಾರ. ಸತೀಶ್‌ಅವರ ತಾತನ ಕಾಲದಿಂದಲೂ ಪಕ್ಷದಲ್ಲಿದ್ದಾರೆ.ಇವರ ಸಮಾಜ ಸೇವೆ ಪರಿಗಣಿಸಿ ಟಿಕೆಟ್‌ನೀಡಿರಬಹುದು ಎಂದರು.

ಬಿಜೆಪಿಯವರೇಕಾಂಗ್ರೆಸ್‌ ಅಭ್ಯರ್ಥಿ ಕೊಂಡಯ್ಯನವರನ್ನುಬೆಂಬಲಿಸುತ್ತಾರೆ ಎಂಬ ಆರೋಪದ ಬಗ್ಗೆಪ್ರತಿಕ್ರಿಯಿಸಿದ ಸಚಿವ ಸಿಂಗ್‌, ಅದು ಆರೋಪಅಷ್ಟೇ. ನಮ್ಮ ಅವರ ಸ್ನೇಹ ಬೇರೆ. ಚುನಾವಣೆಬಂದಾಗ ಪಕ್ಷ ನಿಷ್ಠೆ ಮುಖ್ಯ. ನಮ್ಮ ಅಭ್ಯರ್ಥಿಪರವಾಗಿ ನಾವು ಕೆಲಸ ಮಾಡುತ್ತೇವೆ. ಇನ್ನುಕಾಂಗ್ರೆಸ್‌ ಶಾಸಕರೇ ಕೊಂಡಯ್ಯರಿಗೆ ಟಿಕೆಟ್‌ ಬೇಡಎಂದಿದ್ದಾರೆ.

ಕಾಂಗ್ರೆಸ್‌ನಲ್ಲಿನ ಅಸಮಾಧಾನವೇಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆಎಂದು ತಿಳಿಸಿದರು. ಶಾಸಕ ಜಿ.ಸೋಮಶೇಖರರೆಡ್ಡಿ, ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್‌ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.