ದಿಗ್ವಿಜಯ್‌ ಸಿಂಗ್‌ ಹಿಂದುತ್ವ ಜಪ!

Team Udayavani, May 12, 2019, 10:12 AM IST

kan-kana-2

ದೇಶದ ಅತಿ ಚರ್ಚಿತ ಸೀಟುಗಳಲ್ಲಿ ಮಧ್ಯಪ್ರದೇಶದ ಭೋಪಾಲವೂ ಒಂದು. ಈ ಬಾರಿ ಇಲ್ಲಿ ಕಾಂಗ್ರೆಸ್‌ನ ದಿಗ್ಗಜ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‌ ಸಿಂಗ್‌( 72) ಮತ್ತು ಬಿಜೆಪಿಯ ಫ‌ಯರ್‌ ಬ್ರಾಂಡ್‌ ನಾಯಕಿ ಸಾಧ್ವಿ ಪ್ರಜ್ಞಾ ಠಾಕೂರ್‌(49) ನಡುವೆ ಪ್ರಬಲ ಪೈಪೋಟಿ ಇದೆ.
ಪ್ರಜ್ಞಾ ಸಿಂಗ್‌ರ ಪ್ರವೇಶದ ನಂತರ ಸಹಜವಾಗಿಯೇ ಈ ಬಾರಿ ಭೋಪಾಲದಲ್ಲಿ ಹಿಂದುತ್ವವೇ ಪ್ರಮುಖ ವಿಷಯವಾಗಿ ಬದಲಾಗಿದ್ದು. ಅಚ್ಚರಿದಾಯಕ ಸಂಗತಿಯೆಂದರೆ, ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಅವರಂತೂ ತಮ್ಮ “ಅಲ್ಪಸಂಖ್ಯಾತ ಪರ’ ಇಮೇಜ್‌ ತಗ್ಗಿಸಿಕೊಳ್ಳುವುದಕ್ಕಾಗಿ ಹಿಂದುತ್ವದ ಧ್ವನಿ ಜಪಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಅವರು ಭರ್ಜರಿಯಾಗಿಯೇ ಹೋಮ ಹವನಗಳಲ್ಲಿ ಪಾಲ್ಗೊಂಡಿದ್ದಾರೆ, ಅಲ್ಲದೇ ಸಾಧು-ಸಂತರನ್ನು ತಮ್ಮ ಪರ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ. ಅದರಲ್ಲೂ ಕಂಪ್ಯೂಟರ್‌ ಬಾಬಾ ಎಂದೇ ಖ್ಯಾತರಾದ ನಾಮದೇವ್‌ ದಾಸ್‌ ತ್ಯಾಗಿ ಬಾಬಾ ಈಗ ದಿಗ್ವಿಜಯ್‌ ಪರ ನಿಂತಿದ್ದಾರೆ. ದಿಗ್ವಿಜಯ್‌ ಸಿಂಗ್‌ ಅವರ ರ್ಯಾಲಿಗಳೆಲ್ಲವೂ ಕೇಸರಿ ಧ್ವಜಗಳಿಂದ ಕಂಗೊಳಿಸಿವೆ!

ಇನ್ನೊಂದೆಡೆ ಸಾಧ್ವಿ ಪ್ರಜ್ಞಾ ಠಾಕೂರ್‌ ಬಂಧನದಲ್ಲಿ ತಾವು ಅನುಭವಿಸಿದ ಯಾತನೆಗಳನ್ನು ಜನರಿಗೆ ಹೇಳುತ್ತಿದ್ದಾರೆ. 2008ರ ಮಾಲೇಗಾಂವ್‌ ಸ್ಫೋಟದ ಆರೋಪಿ ಆಗಿರುವ ಪ್ರಜ್ಞಾ ಅವರು, ಮೊದಲಿನಿಂದಲೂ ಕೃತ್ಯದಲ್ಲಿ ತಮ್ಮ ಪಾತ್ರವಿಲ್ಲ ಎಂದೇ ಹೇಳುತ್ತಾ ಬಂದಿದ್ದಾರೆ. ಇತ್ತೀಚೆಗಷ್ಟೇ ಅವರು ದಿವಂಗತ ಹೇಮಂತ್‌ ಕರ್ಕರೆ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ನಂತರ ಕ್ಷಮಾ ಪಣೆ ಕೋರಿದ್ದರು. ಬಾಬ್ರಿ ಮಸೀದಿಯ ಧ್ವಂಸ ವಿಚಾರದಲ್ಲಿ ಅವರು ಆಡಿದ ಮಾತುಗಳಿಂದಾಗಿ ಚುನಾವಣಾ ಆಯೋಗದಿಂದ 72 ಗಂಟೆಗಳ
ಕಾಲ ಪ್ರಚಾರದಿಂದ ನಿಷೇಧಕ್ಕೆ ಒಳಗಾಗಿದ್ದರು. ಪ್ರಜ್ಞಾ ಸಿಂಗ್‌ ಅವರಿಗೆ ಉಮಾ ಭಾರತಿ, ನರೇಂದ್ರ ಮೋದಿ, ಅಮಿತ್‌ ಶಾರಂಥ ಹಿರಿಯ ನಾಯಕರ ಬೆಂಬಲ ಸಿಕ್ಕಿದೆ.

ಬಿಜೆಪಿಯದ್ದೇ ಹಿಡಿತ: ಭೋಪಾಲ್‌ ಸಂಸದೀಯ ಕ್ಷೇತ್ರವು 1984ರಿಂದ ಬಿಜೆಪಿಯ ಹಿಡಿತದಲ್ಲೇ ಇದೆ. ಇಲ್ಲಿಯವರೆಗೂ ಈ ಕ್ಷೇತ್ರದಲ್ಲಿ ನಡೆದ 16 ಚುನಾವಣೆಗಳಲ್ಲಿ ಕಾಂಗ್ರೆಸ್‌ ಕೇವಲ 6 ಬಾರಿಯಷ್ಟೇ ಗೆದ್ದಿದೆ. ಒಟ್ಟು 16 ಲಕ್ಷ ಮತದಾರರು ಈ ಕ್ಷೇತ್ರದಲ್ಲಿದ್ದು ಇವರಲ್ಲಿ 4 ಲಕ್ಷ ಮುಸಲ್ಮಾನರು, 4 ಲಕ್ಷ ಬ್ರಾಹ್ಮಣರು, 5 ಲಕ್ಷ ಹಿಂದುಳಿದ ವರ್ಗಗಳು, 2 ಲಕ್ಷ ಕಾಯಸ್ಥರು ಮತ್ತು 1 ಲಕ್ಷ ಕ್ಷತ್ರಿಯ ವರ್ಗದ ಮತದಾರರು ಇದ್ದಾರೆ. ಮುಸಲ್ಮಾನರ ಮತಗಳು ದಿಗ್ವಿಜಯ್‌ ಪರ ಇವೆ ಎನ್ನಲಾಗುತ್ತದಾದರೂ, ಈ ಬಾರಿ ದಿಗ್ವಿಜಯ್‌ “ಹಿಂದುತ್ವದ ಹಾದಿ’ ಹಿಡಿದಿರುವುದನ್ನು ನೋಡಿ, ಆ ವರ್ಗದ ಮತದಾರರೂ ಗೊಂದಲದಲ್ಲಿದ್ದಾರೆ ಎನ್ನಲಾಗುತ್ತದೆ. ಸಾಧ್ವಿ ಪ್ರಜ್ಞಾ ಠಾಕೂರ್‌ ಅಂತೂ ಈ ಚುನಾವಣೆಯನ್ನು ಧರ್ಮಯುದ್ಧ ಎಂದೇ ಕರೆಯುತ್ತಾರೆ. “”ಕೇಸರಿ ಭಯೋತ್ಪಾದನೆ ಎಂಬ ಪದವನ್ನು ಹುಟ್ಟುಹಾಕಿ ಸನಾತನ ಧರ್ಮದ ಹೆಸರು ಕೆಡಿಸಿದವರ, ನನ್ನನ್ನು ಜೈಲಿಗೆ ಕಳುಹಿಸಿ ಕಿರುಕುಳ ಕೊಟ್ಟವರ ವಿರುದ್ಧದ ಧರ್ಮಯುದ್ಧವಿದು” ಎನ್ನುತ್ತಿದ್ದಾರೆ ಪ್ರಜ್ಞಾ.

ಟಾಪ್ ನ್ಯೂಸ್

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಮಣಿಪಾಲ: ಮಂಚಿಯ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಮಣಿಪಾಲ: ಮಂಚಿ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.