ಗ್ರಾಮೀಣ ಮಾರ್ಗದಲ್ಲಿ ಬಸ್‌ ಸಂಚಾರ

Team Udayavani, Jan 5, 2022, 12:39 PM IST

9bus

ಆಳಂದ: ಸ್ಥಳೀಯ ಕೆಕೆಆರ್‌ಟಿಸಿ ಘಟಕದಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಜಿಲ್ಲಾ ಕೇಂದ್ರಕ್ಕೆ ಪ್ರತ್ಯೇಕ ಎರಡು ವಲಯದ ಗ್ರಾಮೀಣ ಮಾರ್ಗ ಆಯ್ಕೆ ಮಾಡಿಕೊಂಡು ಪಟ್ಟಣದಿಂದ ನಿತ್ಯ ಬಸ್‌ ಸಂಚಾರಕ್ಕೆ ಶಾಸಕ ಸುಭಾಷ ಗುತ್ತೇದಾರ ಶನಿವಾರ ಹಸಿರು ನಿಶಾನೆ ತೋರಿಸಿದರು.

ಬಳಿಕ ಮಾತನಾಡಿದ ಶಾಸಕರು, ಹೊಸ ಮಾರ್ಗದ ಬಸ್‌ ಸಂಚಾರದಿಂದ ಪ್ರಯಾಣಿಕರು, ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಆಗುತ್ತದೆ. ತಾಲೂಕಿನ ತಡಕಲ್‌ದಿಂದ ಮಹಾರಾಷ್ಟ್ರದ ಲಾತೂರ್‌ಗೆ ಸಂಚಾರದ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೆಕೆಆರ್‌ಟಿಸಿ ನಿರ್ದೇಶಕ ಮಲ್ಲಿಕಾರ್ಜುನ ತಡಕಲ್‌ ಪ್ರಯತ್ನದಿಂದ ಎರಡು ಹೊಸ ಮಾರ್ಗಗಳಿಗೆ ಬಸ್‌ ಕಲ್ಪಿಸಲು ಸಾಧ್ಯವಾಗಿದೆ. ಅಲ್ಲದೇ ಕೊರೊನಾ ಬಳಿಕ ಕಡಿತವಾಗಿದ್ದ ಹಲವು ಮಾರ್ಗಗಳಿಗೆ ಪುನಃ ಬಸ್‌ ಸಂಚಾರ ಕಲ್ಪಿಸುವ ಮೂಲಕ ಗ್ರಾಮೀಣ ಜನರಿಗೆ ಅನುಕೂಲ ಮಾಡಿದ್ದಾರೆ ಎಂದು ಹೇಳಿದರು.

ಕೆಕೆಆರ್‌ಟಿಸಿ ನಿರ್ದೇಶಕ ಮಲ್ಲಿಕಾರ್ಜುನ ತಡಕಲ್‌ ಮಾತನಾಡಿ, ಆಳಂದ ತಾಲೂಕಿನ ಎಲ್ಲ ಗ್ರಾಮಗಳಿಗೆ ಸಾರಿಗೆ ಬಸ್‌ ಸೌಕರ್ಯ ಒದಗಿಸಲಾಗುವದು ಎಂದರು.

ಬೆಳಗ್ಗೆ 9:30ಕ್ಕೆ ಆಳಂದದಿಂದ ಹೊರಟು ಜಿಡಗಾ, ಜಮಗಾ ಮಾರ್ಗವಾಗಿ ಮಾದನಹಿಪ್ಪರಗಾ-ನಿಂಬಾ ಳ-ಮಾಡಿಯಾಳ-ನಿಂಬರಗಾ, ನಿಂಬರಗಾ ತಾಂಡಾ, ಬಸವಂತವಾಡಿ, ಧರ್ಮವಾಡಿ, ಆಲೂರ ಕ್ರಾಸ್‌ -ಸುಂಟನೂರ, ಪಟ್ಟಣ ಹಾಗೂ ಕಲಬುರಗಿಯ ಶಹಾಬಜಾರ ನಾಕಾ ವರೆಗೆ ಸಂಚಾರ ನಡೆಯಲಿದೆ. ಮತ್ತೂಂದೆಡೆ 10:45ಕ್ಕೆ ಆಳಂದ ಬಸ್‌ ನಿಲ್ದಾಣದಿಂದ ತಡಕಲ್‌, ಬೆಳಮಗಿ, ವಿ.ಕೆ. ಸಲಗರ, ಮುದ್ದಡಗಾ, ಅಂಬಲಗಾ, ಮಹಾಗಾಂವ್‌, ನೆಹರುಗಂಜ್‌ ವರೆಗೆ ಸಂಚರಿಸಲು ಅನುಕೂಲ ಕಲ್ಪಿಸಲಿದೆ. ಪ್ರಯಾಣಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು.

ಪುರಸಭೆ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ, ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ಅಶೋಕ ಗುತ್ತೇದಾರ ಮಲ್ಲಿಕಾರ್ಜುನ ಕಂದಗೂಳೆ, ಸುನಿಲ ಹಿರೋಳಿಕರ, ಶ್ರೀಮಂತ ನಾಮಣೆ, ವಿಜಯ ಕೋಥಳಿಕರ, ಸಂತೋಷ ಹಾದಿಮನಿ, ಶರಣು ಕುಮಸಿ ಪ್ರಕಾಶ ಮಾನೆ, ನಿಗಮದ ವಿಭಾಗಿಯ ನಿಯಂತ್ರಣಾಧಿಕಾರಿ ಎಸ್‌.ಜಿ.ಗಂಗಾಧರ, ವಿಭಾಗಿಯ ಸಂಚಾರಿ ಅಧಿಕಾರಿ ರವಿಂದ್ರಕುಮಾರ, ಘಟಕದ ವವ್ಯಸ್ಥಾಪಕ ಜೆ.ಡಿ. ದೊಡ್ಡಮನಿ ಸಹಾಯಕ ಸಂಚಾರ ನಿರೀಕ್ಷಕ ಶರಣು ಮಾಲಗತ್ತಿ ಇದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.