ನಿಯಮ ಮೀರಿ ಮರಳು ತೆಗೆಯದಂತಿ ಜಾಗ್ರತೆ ವಹಿಸಿ

Team Udayavani, Feb 21, 2020, 4:11 PM IST

21-February-18

ಚಳ್ಳಕೆರೆ: ಹಿರಿಯೂರು, ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲೂಕುಗಳ ವ್ಯಾಪ್ತಿಯಲ್ಲಿ ಒಟ್ಟು 20 ಗುತ್ತಿಗೆದಾರರಿಗೆ ವೇದಾವತಿ ನದಿಪಾತ್ರದ ಮರಳನ್ನು ಸರ್ಕಾರದ ನಿಯಮಾನುಸಾರ ಹಳ್ಳದಿಂದ ಎತ್ತಿ ದಾಸ್ತಾನು ಮಾಡಲು ಜಿಲ್ಲಾಡಳಿತ ಅನುಮತಿ ನೀಡಿದೆ. ಸರ್ಕಾರ ನಿಗದಿ ಪಡಿಸಿದ ದರದಲ್ಲಿ ಮಾರಾಟ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಉಪವಿಭಾಗಾಧಿಕಾರಿ ಪ್ರಸನ್ನಕುಮಾರ್‌ ತಿಳಿಸಿದರು.

ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೂರು ತಾಲೂಕುಗಳ ವ್ಯಾಪ್ತಿಯ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಪೋರ್ಸ್‌ ಸಮಿತಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿಯಮ ಮೀರಿ ಮರಳು ತೆಗೆಯಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಯಾವುದೇ ಕಾರಣಕ್ಕೂ ಕಾನೂನು ಉಲ್ಲಂಘಟನೆಯಾಗದಂತೆ ಎಲ್ಲರೂ ಜಾಗ್ರತೆ ವಹಿಸಬೇಕೆಂದರು. ಈಗಾಗಲೇ ಟೆಂಡರ್‌ ಪ್ರಕ್ರಿಯೆಯಲ್ಲಿ ಅನುಮತಿ ನೀಡಿದಂತೆ ಒಂದು ಮೀಟರ್‌ ವ್ಯಾಪ್ತಿಯ ಆಳದಲ್ಲಿ ಮಾತ್ರ ಮರಳು ತೆಗೆಯಲು ಅವಕಾಶವಿದೆ. ಇದರ ಪರಿಶೀಲನೆಗಾಗಿ ಗಣಿ ಮತ್ತು ಭೂಗರ್ಭ ಇಲಾಖೆ ಅಧಿಕಾರಿಗಳಲ್ಲದೆ, ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ, ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುತ್ತಾರೆ. ಇದುವರೆಗೂ ಇಂತಹ ಯಾವುದೇ ಘಟನೆ ನಡೆದಿಲ್ಲವಾದರೂ ಅಧಿಕಾರಿ ವರ್ಗ ಹೆಚ್ಚು ಜಾಗ್ರತೆ ವಹಿಸಬೇಕೆಂದರು.

ಹಿರಿಯೂರು 8, ಹೊಸದುರ್ಗ 6 ಮತ್ತು ಚಳ್ಳಕೆರೆ ತಾಲೂಕಿನ 6 ಕಡೆ ಸೇರಿದಂತೆ ಒಟ್ಟು 20 ಕಡೆ ಮರಳು ತೆಗೆದು ದಾಸ್ತಾನು ಮಾಡಿ ಮಾರಾಟ ಮಾಡಲು ಅವಕಾಶವಿದೆ. ನದಿಯಿಂದ ಮರಳು ಎತ್ತುವ ಸಮಯದಲ್ಲಿ ವಿವಿಧ ಇಲಾಖೆಯ ಅಧಿ ಕಾರಿಗಳೊಂದಿಗೆ ಪೊಲೀಸ್‌ ಇಲಾಖೆ ಅಧಿಕಾರಿಗಳೂ ಸ್ಥಳದಲ್ಲಿತ್ತಾರೆ. ಅಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಪರಿಶೀಲನೆ ನಡೆಸಿದ ನಂತರವೇ ಮರಳು ತುಂಬಿದ ವಾಹನಗಳು ಹೊರಹೋಗುತ್ತವೆ. ಸರ್ಕಾರದ ನಿಯಮ ಪಾಲನೆಗೆ ಮೊದಲ ಆದ್ಯತೆ ನೀಡಬೇಕು. ಮರಳು ತೆಗೆಯುವ ಸಂದರ್ಭದಲ್ಲಿ ಹೆಚ್ಚು ಆಳ ತೋಡಿದಲ್ಲಿ ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವುದಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು. ಹತ್ತಿರ ಗ್ರಾಮಗಳ ನೀರಿನ ಸಮಸ್ಯೆ ಉಂಟಾಗದಂತೆ ಕೊಳವೆಬಾವಿಗಳ ಆಸುಪಾಸು ಆಳವಾಗಿ ತೆಗೆಯುವುದು ಬೇಡವೆಂದು ತಾಕೀತು ಮಾಡಿದರು.

ಸಭೆಯಲ್ಲಿ ತಹಶೀಲ್ದಾರ್‌ಗಳಾದ ಬಸವರಾಜ, ಎಂ. ಮಲ್ಲಿಕಾರ್ಜುನ್‌, ಸತ್ಯನಾರಾಯಣ, ಡಿವೈಎಸ್ಪಿ ರೋಷನ್‌ ಜಮೀರ್‌, ಹಿರಿಯೂರು ವೃತ್ತ ನಿರೀಕ್ಷಕ ಆರ್‌.ಜಿ. ಚನ್ನೇಗೌಡ, ಚಳ್ಳಕೆರೆ ವೃತ್ತ ನಿರೀಕ್ಷಕ ಈ.ಆನಂದ, ಪಿಎಸ್‌ಐ ನೂರ್‌ ಅಹಮ್ಮದ್‌, ಗುಡ್ಡಪ್ಪ, ಕಂದಾಯಾಧಿಕಾರಿ ಶಾಂತಪ್ಪ, ರಾಜೇಶ್‌, ವರುಣ್‌, ಪ್ರಾಣೇಶ್‌, ಗುತ್ತಿಗೆದಾರ ಬಸವರಾಜ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.