ಸ್ವಚ್ಛತೆ ನಮ್ಮೆಲ್ಲರ ಉಸಿರಾಗಬೇಕು: ರಾಜಶೇಖರ್‌ ಪುರಾಣಿಕ್‌


Team Udayavani, Jul 1, 2019, 5:28 AM IST

swatchate

ಮಹಾನಗರ: ರಾಮಕೃಷ್ಣ ಮಿಷನ್‌ ಮಾರ್ಗದರ್ಶನದಲ್ಲಿ ಜರಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 30ನೇ ರವಿವಾರದ ಶ್ರಮದಾನವನ್ನು ಹಂಪನಕಟ್ಟೆಯಲ್ಲಿ ಹಮ್ಮಿಕೊಳ್ಳಲಾಯಿತು.

ಹಳೆಯ ಬಸ್‌ ನಿಲ್ದಾಣದಲ್ಲಿ ಬೆಳಗ್ಗೆ 7.30ಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ರಾಜ ಶೇಖರ್‌ ಪುರಾಣಿಕ್‌, ಜಯಪ್ರಕಾಶ ನಾಯಕ್‌ ಶ್ರಮದಾನಕ್ಕೆ ಚಾಲನೆ ನೀಡಿದರು. ಸ್ವಚ್ಛ ಮಂಗಳೂರು ಅಭಿಯಾನದ ಸಂಚಾಲಕ ಸ್ವಾಮಿ ಏಕಗಮ್ಯಾನಂದಜಿ, ಹರೀಶ್‌ ಆಚಾರ್‌, ಮೋಹನ್‌ ಕೊಟ್ಟಾರಿ, ಶ್ರೀಕಾಂತ್‌ ರಾವ್‌, ಅನಿರುದ್ಧ ನಾಯಕ್‌, ರಾಜೇಶ್ವರಿ, ಯಶೋಧರ ಚೌಟ್, ಶ್ರೀಕರ ಕಲ್ಲೂರಾಯ ಉಪಸ್ಥಿತರಿದ್ದರು.

ರಾಜಶೇಖರ್‌ ಪುರಾಣಿಕ್‌ ಮಾತನಾಡಿ, ಸ್ವಚ್ಛತೆ ನಮ್ಮ ಉಸಿರಾಗಬೇಕು. ಸ್ವಚ್ಛ ಪರಿಸರ ಸ್ವಚ್ಛ ಗಾಳಿ ಮನುಷ್ಯನಿಗೆ ಅತ್ಯವಶ್ಯ. ಇಂದಿನ ದಿನಗಳಲ್ಲಿ ಎಲ್ಲವೂ ಕಲುಷಿತಗೊಂಡು ಮಾನವನ ಬದುಕು ದುಸ್ತರವಾಗುತ್ತಿದೆ. ಇದೇ ರೀತಿ ಮುಂದು ವರೆದರೆ ಭವಿಷ್ಯದಲ್ಲಿ ಆಮ್ಲಜನಕ ನಳಿಕೆಗಳನ್ನು ಬಳಸುವ ಪ್ರಮೇಯ ಬಂದೊದಗಬಹುದು. ಆದ್ದರಿಂದ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾಳಜಿವಹಿ ಸಬೇಕಾದ ಅಗತ್ಯವಿದೆ. ಸರಕಾರದ ಅನೇಕ ಯೋಜನೆಗಳು ಯಶಸ್ವಿಯಾಗಬೇಕಿದ್ದರೆ ಜನರು ಸ್ಪಂದಿಸಬೇಕು. ರಾಮಕೃಷ್ಣ ಮಿಷನ್‌ ಸ್ವಚ್ಛತಾ ಕಾರ್ಯ ಅತ್ಯಂತ ಯಶಸ್ವಿಯಾಗಿ ಐದನೇ ವರ್ಷವೂ ಮುಂದು ವರಿಯು ತ್ತಿರುವುದು ಜನಸ್ಪಂದನಕ್ಕೆ ಸಾಕ್ಷಿ. ಸ್ವಚ್ಛತೆಯ ಜತೆಗೆ ಗಿಡಮರಗಳನ್ನೂ ಉಳಿಸಿ-ಬೆಳೆಸುವ ಕಾರ್ಯವೂ ಈ ದಿನದ ತುರ್ತುಗಳಲ್ಲೊಂದು. ಜನಸಂಖ್ಯೆ ಬೆಳೆದಂತೆ ನಗರವೃದ್ಧಿಯಾಗುತ್ತಿದೆ. ಅದಕ್ಕೆ ಸರಿಸಮನಾಗಿ ಮರಗಿಡಗಳು ನಗರದಲ್ಲಿರಬೇಕು. ಅದಕ್ಕೆ ಇಂತಹ ಅಭಿಯಾನಗಳನ್ನು ಹಮ್ಮಿಕೊಳ್ಳೊಣ’ ಎಂದರು.

ಸ್ವಚ್ಛತೆ

ಪ್ರಥಮದಲ್ಲಿ ನಾಲ್ಕು ತ್ಯಾಜ್ಯರಾಶಿ ತುಂಬಿದ್ದ ಸ್ಥಳಗಳನ್ನು ಗುರುತಿಸಲಾಯಿತು. ಅನಂತರ ಸ್ವಯಂ ಸೇವಕರು ನಾಲ್ಕು ತಂಡಗಳಾಗಿ ವಿಭಾಗಿಸಿಕೊಂಡು ಸ್ವಚ್ಛತಾ ಕಾರ್ಯವನ್ನು ಕೈಗೊಂಡರು. ಮೊದಲ ತಂಡದಲ್ಲಿ ಸೌರಜ್‌ ಮಂಗಳೂರು ನೇತೃತ್ವದಲ್ಲಿ ಬಸ್‌ ನಿಲ್ದಾಣದಲ್ಲಿದ್ದ ದೊಡ್ಡದಾದ ತ್ಯಾಜ್ಯ ರಾಶಿಯನ್ನು ಜೇಸಿಬಿ ಸಹಾಯದಿಂದ ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.

ಮೆಹಬೂಬ್‌ ಖಾನ್‌ ಮುಂದಾಳತ್ವದ ಎರಡನೇ ತಂಡ ಕೆ.ಎಸ್‌. ರಾವ್‌ ರಸ್ತೆಯ ಮೂಲೆಯಲ್ಲಿದ್ದ ತ್ಯಾಜ್ಯ ಹಾಗೂ ಕಟ್ಟಡಗಳ ತ್ಯಾಜ್ಯವನ್ನು ತೆಗೆದು ಹಸನು ಮಾಡಿದರು. ಸಂದೀಪ್‌ ಕೋಡಿಕಲ್, ಸತೀಶ್‌ ಕೆಂಕನಾಜೆ ಹಾಗೂ ಇನ್ನಿತರ ಕಾರ್ಯಕರ್ತರು ಆರೋಗ್ಯ ಇಲಾಖೆಯ ಉಪಕಚೇರಿಯ ಮುಂಭಾಗದಲ್ಲಿದ್ದ ಗಲೀಜನ್ನು ತೆಗೆದು ಟಿಪ್ಪರಿಗೆ ತುಂಬಿಸಿದರು. ಸ್ವಚ್ಛ ಎಕ್ಕೂರು ತಂಡದ ಸದಸ್ಯರಾದ ಶುಭಕರ ಶೆಟ್ಟಿ, ಪ್ರಶಾಂತ ಎಕ್ಕೂರು, ಉಳಿದ ಸದಸ್ಯರು ಬಸ್‌ ನಿಲ್ದಾಣದ ಒಳಭಾಗದಲ್ಲಿ ಬಿದ್ದಿದ್ದ ಕಸಕಡ್ಡಿ ಪ್ಲಾಸ್ಟಿಕ್‌, ಬಾಟಲ್, ಗಾಜುಗಳನ್ನು ತೆಗೆದು ಶ್ರಮದಾನ ಮಾಡಿದರು.

ಸ್ವಚ್ಛತಾ ಯೋಧರ ಪಡೆ

ದಿಲ್ರಾಜ್‌ ಆಳ್ವ ಹಾಗೂ ಕಾರ್ಯಕರ್ತರು ಬಸ್‌ ನಿಲ್ದಾಣದಲ್ಲಿ ಅಡ್ಡಾದಿಡ್ದಿಯಾಗಿ ನಿಲ್ಲಿಸಿದ್ದ ಹಳೆಯ ವಾಹನ, ರಿಕ್ಷಾಗಳನ್ನು ತೆಗೆದು ಬದಿಗೆ ಹಾಕಿ ಹೆಚ್ಚಿನ ಪಾರ್ಕಿಂಗ್‌ ಅನುಕೂಲ ಮಾಡಿಕೊಟ್ಟರು. ಸ್ವಚ್ಛ ಮಾಡಿದ ಆಯ್ದ ಸ್ಥಳಗಳಲ್ಲಿ ಆಲಂಕಾರಿಕ ಹೂಗಿಡಗಳ ಕುಂಡಗಳನ್ನಿಡಲಾಗಿದೆ. ಅಲ್ಲಿ ಸ್ವಚ್ಛತಾ ಯೋಧರು ಹಗಲಿರುಳು ಕಾವಲು ಕಾಯ ಲಿದ್ದಾರೆ. ಕಸ ಹಾಕುವವರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಿದ್ದಾರೆ. ಹಲವಾರು ವಾರಗಳಿಂದ ಈ ಸ್ವಚ್ಛತಾ ಯೋಧರ ಪಡೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿ, ನಗರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅಭಿಯಾನದ ಪ್ರಧಾನ ಸಂಯೋಜಕ ಉಮಾನಾಥ್‌ ಕೋಟೆಕಾರ್‌ ಶ್ರಮದಾನದ ಉಸ್ತುವಾರಿ ನೋಡಿಕೊಂಡರು.

ಕರಪತ್ರ ಹಂಚಿಕೆ

ಶ್ರೀಶಾರದಾ ವಿದ್ಯಾಲಯದ ವಿದ್ಯಾರ್ಥಿನಿಯರು ಹಂಪನಕಟ್ಟೆ ಕೆ.ಎಸ್‌.ಆರ್‌. ರಾವ್‌ ರಸ್ತೆಯ ಅಂಗಡಿಗಳಿಗೆ ಭೇಟಿ ನೀಡಿ ಸ್ವಚ್ಛತೆಯ ಕುರಿತು ಮಾಹಿತಿ ನೀಡಿ ನಗರದ ಸ್ವಚ್ಛತೆಗೆ ಸಹಕಾರ ನೀಡುವಂತೆ ಕೋರಿದರು. ಜತೆಗೆ ‘ಸ್ವಚ್ಛ ಮಂಗಳೂರು ಕನಸಲ್ಲ’ ಎಂಬ ಮಾಹಿತಿ ಪತ್ರವನ್ನು ಹಂಚಿಕೆ ಮಾಡಿದರು. ಪ್ರೊ| ಸತೀಶ್‌ ಭಟ್, ಕೋಡಂಗೆ ಬಾಲಕೃಷ್ಣ ನಾೖಕ್‌ ವಿದ್ಯಾರ್ಥಿನಿಯರನ್ನು ಮಾರ್ಗ ದರ್ಶಿಸಿದರು. ಪ್ರವೀಣ ಶೆಟ್ಟಿ, ಸ್ವಯಂ ಸೇವಕರು ಸಸಿಗಳನ್ನು ನೆಟ್ಟರು. ಕೆ.ಎಂ.ಎಫ್‌. ವತಿಂದ ಶ್ರಮದಾನದಲ್ಲಿ ಪಾಲ್ಗೊಂಡವರಿಗೆ ಮಜ್ಜಿಗೆಯನ್ನು ವಿತರಿಸಲಾಯಿತು.

ಅಶೋಕ ನಗರದಲ್ಲಿರುವ ಸೇಂಟ್ ಡೊಮಿನಿಕ್‌ ಚರ್ಚ್‌ ನಲ್ಲಿ ಸ್ವಚ್ಛತೆಯ ಕುರಿತು ವಿಶೇಷ ಕಾರ್ಯಾಗಾರ ಜರಗಿತು. ವಂ| ಅಕ್ವೀನ್‌ ನೊರೋನ್ಹ ಮುಖ್ಯ ಅತಿಥಿಯಾಗಿದ್ದರು. ಕ್ಯಾ| ಗಣೇಶ್‌ ಕಾರ್ಣಿಕ್‌ ಸ್ವಚ್ಛತೆಯ ಮಹತ್ವದ ಕುರಿತು ಭಾಷಣ ಮಾಡಿದರು. ನಲ್ಲೂರು ಸಚಿನ್‌ ಶೆಟ್ಟಿ ಸಾವಯವ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆಯನ್ನು ನೀಡಿ, ಮನೆ ಮಟ್ಟದಲ್ಲಿ ಹಸಿಕಸ ನಿರ್ವಹಿಸುವ ಕುರಿತು ಮಾತನಾಡಿದರು. ರಿಚರ್ಡ್‌ ಗೋನ್ಸಾಲ್ವಿಸ್‌, ಸುಧೀರ್‌ ನೊರೋನ್ಹ ಮತ್ತಿತರರಿದ್ದರು. ರಂಜನ್‌ ವಂದಿಸಿದರು. ಭಾರತೀಯ ಕೆಥೋಲಿಕ್‌ ಯುವ ಸಂಚಲನ ಅಶೋಕ ನಗರದ ಘಟಕ ಈ ಕಾರ್ಯಕ್ರಮವನ್ನು ಸಂಘಟನೆ ಮಾಡಿತ್ತು. ಸ್ವಚ್ಛತಾ ಅಭಿಯಾನದ ಈ ಎಲ್ಲ ಚಟುವಟಿಕೆಗಳಿಗೆ ಎಂ.ಆರ್‌.ಪಿ.ಎಲ್. ಸಂಸ್ಥೆ ಪ್ರಾಯೋಜಕತ್ವ ನೀಡಿ ಸಹಕರಿಸುತ್ತಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.