ಕಾಂಗ್ರೆಸ್‌ನದ್ದು ಸ್ಮಶಾನ ಸಂಸ್ಕೃತಿ ಬಿಜೆಪಿಯದ್ದು ದೈವ ಸಂಸ್ಕೃತಿ

Team Udayavani, Apr 19, 2019, 4:35 PM IST

Udayavani Kannada Newspaper

ಗಂಗಾವತಿ: ಕಾಂಗ್ರೆಸ್‌ ಪಕ್ಷದ್ದು ಸ್ಮಶಾನ ಸಂಸ್ಕೃತಿ ಬಿಜೆಪಿಯದ್ದು, ದೈವ ಸಂಸ್ಕೃತಿಯಾಗಿದೆ ಎಂದು ಆನೆಗೊಂದಿ ರಾಜವಂಶದ ರಾಣಿ ಚಂದ್ರಕಾಂತ ದೇವಿ ಹೇಳಿದರು.

ಅವರು ತಾಲೂಕಿನ ಆನೆಗೊಂದಿಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಪರವಾಗಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ 70 ವರ್ಷಗಳಿಂದ ಆಗಸ್ಟ್‌ 15, ಜನವರಿ 26ರಂದು ಕಾಂಗ್ರೆಸ್‌ನವರು ಇಂದಿರಾಗಾಂಧಿ, ಜವಾಹರಲಾಲ್‌ ನೆಹರೂ, ರಾಜೀವ್‌ ಗಾಂಧಿ ಸಮಾದಿ ಗಳಿಗೆ ಹೋಗುತ್ತಾರೆ. ದೇವಾಲಯ, ಧಾರ್ಮಿಕ ಕೇಂದ್ರಗಳಿಗೆ ಹೋಗುವುದಿಲ್ಲ.

ಪ್ರಧಾನಮಂತ್ರಿ ದೇವರವನ್ನು ನಂಬಿದ್ದು ಅಧಿ ಕಾರಕ್ಕೆ ಬಂದ ತಕ್ಷಣ ಕಾಶಿ ವಿಶ್ವನಾಥ, ಗಂಗಾ ಆರತಿಯಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೈವ ಭಕ್ತಿ ಪ್ರಾಪ್ತಿ ಮಾಡಿಕೊಂಡಿದ್ದಾರೆ. 70 ವರ್ಷಗಳಲ್ಲಿ ಕಾಂಗ್ರೆಸ್‌ ಬಡತನ ನಿರ್ಮೂಲನೆ ಮಾಡುವ ಯೋಜನೆ ಅನುಷ್ಠಾನ ಮಾಡಿದರೂ
ಇನ್ನೂ ಯಾಕೆ ಬಡತನ ನಿರ್ಮೂಲನೆಯಾಗಿಲ್ಲ. ವ್ಯಾಪಕ ಭ್ರಷ್ಟಾಚಾರ ನಡೆಸುವ ಮೂಲಕ ಕಾಂಗ್ರೆಸ್‌ ನಾಯಕರು ಶ್ರೀಮಂತರಾಗಿದ್ದಾರೆ.

ಈಗಾಗಲೇ ಪ್ರಧಾನಿ ಮೋದಿ ಅವರು ವಿಶ್ವದ ಮಾನ್ಯತೆ ಪಡೆದಿದ್ದಾರೆ. ವಿದೇಶಾಂಗ ವ್ಯವಹಾರ ಉತ್ತಮವಾಗಿದ್ದರಿಂದ ರಷ್ಯಾದಂತಹ ದೇಶಗಳು ಬಹುಮಾನ ನೀಡುತ್ತಿವೆ. ಕಾದಂಬರಿಕಾರ ಎಲ್‌.ಎಲ್‌. ಭೈರಪ್ಪ ಹೇಳುವಂತೆ ಸತತವಾಗಿ ಮೋದಿಯವರು ಪ್ರಧಾನಿಯಾಗುತ್ತಿದ್ದರೆ ಭಾರತಕ್ಕೆ ವಿಶ್ವಗುರು ಸ್ಥಾನ ಖಂಡಿತ ಬರುತ್ತದೆ ಎಂದರು.

ಸಂಸದ ಕರಡಿ ಸಂಗಣ್ಣ ಮಾತನಾಡಿ, ಐದು ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶ್ವವೇ ಮೆಚ್ಚು ಕಾರ್ಯ ಮಾಡಿದ್ದಾರೆ. ಜನಧನ್‌ ಖಾತೆ, ಸ್ವತ್ಛ ಭಾರತ, ಉಜ್ವಲಾ ಯೋಜನೆ ಸಣ್ಣ ಸಣ್ಣ ಯೋಜನೆಗಳಾದರೂ ಜನರಿಗೆ ಅತ್ಯಂತ ಉಪಯುಕ್ತವಾಗುವ ಯೋಜನೆಗಳಾಗಿವೆ. ಕಾಂಗ್ರೆಸ್‌ನವರು ಇವುಗಳನ್ನು ಗೇಲಿ ಮಾಡುವ ಮೂಲಕ ಜನರನ್ನು ಅವಮಾನಿಸುತ್ತಿದ್ದಾರೆ.

ರೈತರು ಬೆಳೆದ ಬೆಳೆ ನಷ್ಟವಾದ ಸಂದರ್ಭದಲ್ಲಿ ವಿಮೆ ದೊರಕಿಸಲು ಪ್ರಧಾನಮಂತ್ರಿ ಫಸಲ್‌ ವಿಮಾ ಯೋಜನೆ ಅನುಷ್ಠಾನ ಮಾಡಿದರೂ ರಾಜ್ಯ ಸರಕಾರದ ಅಸಹಕಾರದಿಂದ ಬೆಳೆವಿಮೆ ರೈತರಿಗೆ ತಲುಪಿಲ್ಲ. ಮತ್ತೂಮ್ಮೆ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ತುಂಗಭದ್ರಾ ಡ್ಯಾಮ್‌ಗೆ ಕೃಷ್ಣಾ ನದಿ ನೀರನ್ನು ತರಲಾಗುತ್ತದೆ. ಜತೆಗೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದರು.

ಶಾಸಕ ಪರಣ್ಣ ಮುನವಳ್ಳಿ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ, ತಿಪ್ಪೇರುದ್ರಸ್ವಾಮಿ, ಸಿಂಗನಾಳ ವಿರೂಪಾಕ್ಷಪ್ಪ, ಕೃಷ್ಣಾದೇವರಾಯ, ಹರಿಹರದೇವರಾಯ, ಎಚ್‌.ಸಿ. ಯಾದವ್‌, ಗೌರೀಶ ಬಾಗೋಡಿ, ಸಿದ್ದರಾಮಯ್ಯ, ಜೋಗದ ಹನುಮಂತಪ್ಪ ನಾಯಕ, ವೀರಭದ್ರಪ್ಪ ನಾಯಕ, ದೇವಪ್ಪ ಕಾಮದೊಡ್ಡಿ, ರಾಜೇಶ್ವರಿ ಸುಚಿತ್ರಾ, ಸಿರಿಗೇರಿ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.