30 ರಂದು ಡಾ| ಮಹಾಂತ ಸ್ವಾಮೀಜಿ ಜಯಂತ್ಯುತ್ಸವ 


Team Udayavani, Sep 24, 2021, 4:57 PM IST

23-dvg-17-copy

ದಾವಣಗೆರೆ: ಲಿಂಗಾಯತ ಪಂಚಮಸಾಲಿ ಜಗದ್ಗುರು ಡಾ| ಮಹಾಂತ ಮಹಾಸ್ವಾಮಿಯವರ ಜಯಂತ್ಯುತ್ಸವ, ಲಿಂಗಾಯತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ ಅಭಿಯಾನ, ಯುವ ಘಟಕ ರಾಜ್ಯ ಅಧ್ಯಕ್ಷರ ಪದಗ್ರಹಣ ಸಮಾರಂಭ ಸೆ. 30 ರಂದು ದಾವಣಗೆರೆಯ ತ್ರಿಶೂಲ್‌ ಕಲಾಭವನದಲ್ಲಿ ನಡೆಯಲಿದೆ ಎಂದು ಅಖೀಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಲಿಂಗಾಯತ ಸಮಾಜದ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಪ್ರತಿಜ್ಞಾ ಪಂಚಾಯತ್‌ ಅಭಿಯಾನ ನಡೆಯಲಿದೆ. ಇದೇ ಸಂದರ್ಭದಲ್ಲಿ ರಾಜ್ಯ ಯುವ ಘಟಕದ ನೂತನ ಅಧ್ಯಕ್ಷ, ಮಾಜಿ ಮೇಯರ್‌ ಬಿ.ಜಿ. ಅಜಯ್‌ಕುಮಾರ್‌ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು.

ಅಂದು ಮಧ್ಯಾಹ್ನ 3ಕ್ಕೆ ದಾವಣಗೆರೆಗೆ ಆಗಮಿಸುವ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಹಾತ್ಮಗಾಂಧಿ ವೃತ್ತದವರೆಗೆ 5 ಸಾವಿರ ಬೈಕ್‌ ಗಳೊಂದಿಗೆ ಸ್ವಾಗತಿಸಲಾಗುವುದು. ಮಹಾತ್ಮಗಾಂಧಿ ವೃತ್ತದಿಂದ ವೇದಿಕೆ ಕಾರ್ಯಕ್ರಮ ನಡೆಯುವ ತ್ರಿಶೂಲ್‌ ಕಲಾಭವನದವರೆಗೆ ವಾದ್ಯಮೇಳಗಳೊಂದಿಗೆ ಸ್ವಾಮೀಜಿಯವರನ್ನ ಕರೆತರಲಾಗುವುದು. ಶ್ರೀಶೈಲ, ಐರಣಿ, ಹೊನ್ನಾಳಿ ಹಿರೇಕಲ್ಮಠದ ಆನೆಗಳು ಸಹ ಭಾಗವಹಿಸಲಿವೆ. ಸಂಜೆ 5ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌, ಶಾಸಕ ಬಸನಗೌಡ ಯತ್ನಾಳ್‌, ಸ್ವಾಮೀಜಿಗಳು, ಗಣ್ಯರು ಭಾಗವಹಿಸುವರು. 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಲಿಂಗಾಯತ ಸಮಾಜದ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಜ.14 ರಿಂದ ಕೂಡಲ ಸಂಗಮದಿಂದ ಬೆಂಗಳೂರಿನವರೆಗೆ 718 ಕಿಲೋಮೀಟರ್‌ ಪಾದಯಾತ್ರೆ ನಡೆಸಲಾಗಿತ್ತು. 10 ಲಕ್ಷ ಜನರ ಬೃಹತ್‌ ಸಮಾವೇಶ ಆಯೋಜಿಸಲಾಗಿತ್ತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 23 ದಿನಗಳ ಧರಣಿ ಕೈಗೊಳ್ಳಲಾಗಿತ್ತು. ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 6 ತಿಂಗಳಲ್ಲಿ ಬೇಡಿಕೆ ಈಡೇರಿಸುವ ಸಕಾರಾತ್ಮಕ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಧರಣಿ ಹಿಂಪಡೆಯಲಾಗಿದೆ. ಸರ್ಕಾರ ನೀಡಿದ್ದ ಗಡುವು ಸೆ. 15ಕ್ಕೆ ಮುಕ್ತಾಯಗೊಂಡಿದೆ. ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮದೊಳಗೆ ಸರ್ಕಾರ ಬೇಡಿಕೆ ಈಡೇರಿಸುವ ನಿರೀಕ್ಷೆ ಇದೆ. ಇಲ್ಲದಿದ್ದಲ್ಲಿ ಅ.1 ರಿಂದ ಮತ್ತೆ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಪ್ರಾರಂಭಿಸಲಾಗುವುದು ಎಂದು ಎಚ್ಚರಿಸಿದರು. ಜಿಲ್ಲಾಧ್ಯಕ್ಷ ಆರ್‌.ವಿ. ಅಶೋಕ್‌ ಗೋಪನಾಳ್‌, ನಗರಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್‌, ಪ್ರಭು ಕಲುºರ್ಗಿ, ಎಸ್‌. ಓಂಕಾರಪ್ಪ, ಮಹಾಂತೇಶ್‌ ಒಣರೊಟ್ಟಿ, ಟಿ. ಶಂಕರಪ್ಪ, ನಂಜಪ್ಪ, ಸೋಗಿ ಮುರುಗೇಶ್‌, ಜಯಪ್ರಕಾಶ್‌ ಸತ್ತೂರು, ಪ್ರಶಾಂತ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.