ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹತ್ಯೆ ಸಂಚಿನ ಪ್ರಮುಖ ಆರೋಪಿಯ ಬಂಧನಕ್ಕೆ ಆಗ್ರಹ
Team Udayavani, Jun 17, 2020, 2:12 PM IST
ದಾವಣಗೆರೆ: ಹರಿಹರ ಕ್ಷೇತ್ರದ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹತ್ಯೆಗೆ ಸಂಚು ರೂಪಿಸಿದ ಎಲ್ಲರನ್ನೂ ಬಂಧಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ. ಚಿದಾನಂದಪ್ಪ ಒತ್ತಾಯಿಸಿದ್ದಾರೆ.
ಹರಿಹರ ನಗರದ ಕಿರ್ಲೋಸ್ಕರ್ ಜಾಗದಲ್ಲಿ ಯಾವುದೇ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣ ಆಗುತ್ತಿರುವ ಬಗ್ಗೆ ಶಿವಶಂಕರ್ ನಗರಸಭೆ ಗೆ ಆಕ್ಷೇಪಣೆ ಪತ್ರ ಸಲ್ಲಿಸಿದರು ಎಂಬ ಏಕೈಕ ಕಾರಣಕ್ಕಾಗಿಯೇ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವುದನ್ನು ಜಿಲ್ಲಾ ಜೆಡಿಎಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶಿವಶಂಕರ್ ಹತ್ಯೆಯ ಸಂಚಿಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯನ್ನು ಬಂಧಿಸಬೇಕು. ಹತ್ಯೆಯ ಹಿಂದಿನ ಸಂಚು, ಯಾರ ಕೈವಾಡ ಇದೆ ಎಂಬ ಸತ್ಯಾಸತ್ಯತೆ ಕಂಡು ಹಿಡಿದು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು.
ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಜೆ. ಅಮಾನುಲ್ಲಾ ಖಾನ್ ಮಾತನಾಡಿ, ಕೂಡಲೇ ಪ್ರಮುಖ ಆರೋಪಿಯನ್ನು ಬಂಧಿಸಬೇಕು. ಅವನಿಗೆ ಕೊಲೆ ಮಾಡಲು ಧೈರ್ಯ ತುಂಬಿದವರು ಯಾರು ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು