ಜ. 27: ರಾಜನಾಥ್‌ ಸಿಂಗ್‌ ಮಂಗಳೂರಿಗೆ ಆಗಮನ

Team Udayavani, Jan 25, 2020, 1:33 AM IST

ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಸಿಎಎಯನ್ನು ಬೆಂಬಲಿಸಿ ನಗರದಲ್ಲಿ ಜ. 27ರಂದು ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಮಿಸಲಿದ್ದಾರೆ. ಸಿಎಎ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ ಇದೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌, ಸಂಸದರಾದ ಶೋಭಾ ಕರಂದ್ಲಾಜೆ, ಅನಂತ್‌ ಕುಮಾರ್‌, ಪ್ರತಾಪ ಸಿಂಹ ಮತ್ತು ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸಚಿವರು ಭಾಗವಹಿಸಲಿದ್ದಾರೆ. ಪ್ರತೀ ಕ್ಷೇತ್ರದ ಬೂತ್‌ ಮಟ್ಟದಿಂದ ಸ್ಥಳೀಯರೇ ಸಮಾವೇಶದಲ್ಲಿ ಭಾಗವಹಿಸಲು ವಾಹನದ ವ್ಯವಸ್ಥೆ ಮಾಡಿದ್ದಾರೆ ಎಂದು ಬಿಜೆಪಿ ಪ್ರಕಟನೆ ತಿಳಿಸಿದೆ.

ಸಂಶಯಗಳಿಗೆ ಉತ್ತರ
ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ಸಾರ್ವಜನಿಕರ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಸಂಚಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಪೊಲೀಸ್‌ ಇಲಾಖೆಯು ಮಾರ್ಗ ಸೂಚಿಯನ್ನು ರಚಿಸಿದೆ. ಇದೇ ಸಂದರ್ಭದಲ್ಲಿ ನಗರದ ಬಸ್‌, ಟ್ಯಾಕ್ಸಿ ಮತ್ತು ಆಟೋ ಚಾಲಕರ ಸಂಘದ ಸದಸ್ಯರು ಬೆಂಬಲ ನೀಡಲಿದ್ದು, ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಿಗೆ ಏನಾದರೂ ಗೊಂದಲಗಳಿದ್ದಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ