Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

ಸಿಎಂ ಹುದ್ದೆಯಿಂದ ವಜಾಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Team Udayavani, Mar 28, 2024, 9:28 PM IST

1-wwqeqw

ಹೊಸದಿಲ್ಲಿ: ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯನ್ನು ನಾಲ್ಕು ದಿನ ಏಪ್ರಿಲ್ 1 ರವರೆಗೆ ವಿಸ್ತರಿಸಿದೆ. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಇಡಿ 7 ದಿನಗಳ ವಿಸ್ತರಣೆಯನ್ನು ಕೋರಿತ್ತು.

ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ‘ಸರಕಾರ ಜೈಲಿನಿಂದ ನಡೆಸಲು ಸಾಧ್ಯವಿಲ್ಲ’ ಎಂಬ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ “ಇದು ರಾಜಕೀಯ ಪಿತೂರಿ. ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ’ ಎಂದರು.

ಸಿಎಂ ಹುದ್ದೆಯಿಂದ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.ರಾಷ್ಟ್ರ ರಾಜಧಾನಿಯಲ್ಲಿನ ಸಾಂವಿಧಾನಿಕ ಯಂತ್ರದ ಸ್ಥಗಿತವನ್ನು ಘೋಷಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತು.

ಗೋವಾ ಆಪ್‌ ನಾಯಕರ ವಿಚಾರಣೆ
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ.) ಗುರುವಾರ ಗೋವಾ ಆಪ್‌ ಘಟಕದ ಅಧ್ಯಕ್ಷ ಅಮಿತ್‌ ಪಾಳೇಕರ್‌ ಹಾಗೂ ಇತರ ಮೂವರನ್ನು ವಿಚಾರಣೆ ಗೊಳಪಡಿಸಿದೆ. ಪಾಳೇಕರ್‌ ಜತೆಗೆ ಆಪ್‌ ನಾಯಕ ರಾಮರಾವ್‌ ವಾಘ ಮತ್ತು ಇತರ ಇಬ್ಬರಿಗೆ ಇ.ಡಿ. ಸಮನ್ಸ್‌ ನೀಡಿತ್ತು. ಕೇಜ್ರಿವಾಲ್‌ ಸೇರಿದಂತೆ ಇತರರು ಬಂಧಿತರಾಗಿರುವ ದಿಲ್ಲಿ ಅಬಕಾರಿ ನೀತಿ ಹಗರಣ ಸಂಬಂಧ ಇವರನ್ನು ವಿಚಾರಣೆ ನಡೆಸಲಾಗಿದೆ.

ಕೇಜ್ರಿಗೆ ಕಿರುಕುಳ: ಪತ್ನಿ ಸುನೀತಾ ಆರೋಪ
ಕೇಜ್ರಿವಾಲ್‌ ಆರೋಗ್ಯ ಸರಿಯಿಲ್ಲ. ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಆರೋಪಿಸಿದ್ದಾರೆ. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಆಗಮಿಸಿದ್ದ ಸುನೀತಾ ಅವರು, ಕೇಜ್ರಿವಾಲ್‌ ಆರೋಗ್ಯ ಸರಿಯಿಲ್ಲ. ಅವರ ದೇಹ ದಲ್ಲಿ ಸಕ್ಕರೆ ಅಂಶ ಹೆಚ್ಚು ಕಡಿಮೆಯಾಗುತ್ತಿದೆ. ಅವರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿದೆ. ಈ ದೌರ್ಜನ್ಯ ನಿಲ್ಲುವಂತೆ ಕಾಣುತ್ತಿಲ್ಲ. ಜನರು ತಕ್ಕ ಉತ್ತರ ನೀಡಲಿದ್ದಾರೆಂದು ಹೇಳಿದರು.

ಭಾರತದ ಕಟು ಆಕ್ಷೇಪಕ್ಕೆ ಮೆತ್ತಗಾದ ಜರ್ಮನಿ, ಅಮೆರಿಕ
ಕೇಜ್ರಿವಾಲ್‌ ಬಂಧನ ಸಂಬಂಧ ಅನಾವಶ್ಯಕವಾಗಿ ಭಾರತದ ವ್ಯವಹಾರದಲ್ಲಿ ಮೂಗು ತೂರಿಸಿದ್ದ ಜರ್ಮನಿ ಈಗ ತನ್ನ ಮಾತಿನ ಧಾಟಿಯನ್ನು ಬದಲಿಸಿದೆ. ಭಾರತೀಯ ಸಂವಿಧಾನವು ಮಾನವನ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕೆ ಖಾತ್ರಿ ಒದಗಿಸುತ್ತದೆ. ಏಷ್ಯಾದಲ್ಲಿ ಪ್ರಮುಖ ಪಾಲುದಾರ ರಾಷ್ಟ್ರವಾಗಿರುವ ಭಾರತ ಹಾಗೂ ನಾವು ಒಂದೇ ತೆರನಾದ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಎಂದು ಜರ್ಮನಿ ವಿದೇಶಾಂಗ ವಕ್ತಾರರು ತಿಳಿಸಿದ್ದಾರೆ. ಭಾರ ತವು ಜರ್ಮನಿ ವಿದೇ ಶಾಂಗ ವಕ್ತಾರರಿಗೆ ಸಮನ್ಸ್‌ ನೀಡಿ, ಪ್ರತಿರೋಧ ಸಲ್ಲಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆ ದಿದೆ. ಇದೇ ವೇಳೆ ಕೇಜ್ರಿವಾಲ್‌ ಬಂಧನ ಸಂಬಂಧ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತವು ಅಮೆರಿಕದ ಹಿರಿಯ ಅಧಿಕಾರಿಯನ್ನು ಕರೆಯಿಸಿಕೊಂಡು ತನ್ನ ವಿರೋಧವನ್ನು ದಾಖಲಿಸಿತ್ತು. ಆ ಬಳಿಕ ಅಮೆರಿಕ ಕೂಡ, ಭಾರತೀಯ ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದು ಹೇಳಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.