
ಮೀಸಲಾತಿ ರದ್ದು: ಈಶ್ವರಪ್ಪ ಹೇಳಿಕೆಗೆ ರಾಮದಾಸ್ ಅಠವಳೆ ವಿರೋಧ
Team Udayavani, Sep 24, 2022, 10:45 PM IST

ಮೈಸೂರು: ಆರ್ಥಿಕವಾಗಿ ಶ್ರೀಮಂತರಾಗಿರುವ ದಲಿತರ ಮೀಸಲಾತಿಯನ್ನು ತೆಗೆದು ಹಾಕಬೇಕು ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠವಳೆ ವಿರೋಧಿಸಿದ್ದಾರೆ.
ತಳ ಸಮುದಾಯಕ್ಕೆ ಮೀಸಲಾತಿಯ ಅನುಕೂಲ ಸಿಗುತ್ತಿಲ್ಲ ಎಂಬುದು ನಿಜ. ಆದರೆ ಇದಕ್ಕಾಗಿ ಆರ್ಥಿಕವಾಗಿ ಶ್ರೀಮಂತರಾಗಿರುವ ದಲಿತರ ಮೀಸಲಾತಿಯನ್ನು ತೆಗೆಯಬೇಕು ಎಂಬುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.
ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಸ್ಪೃಶ್ಯತೆ ಆಚರಣೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ ಅಸ್ಪೃಶ್ಯತೆಆಚರಣೆ ಇನ್ನೂ ಜೀವಂತವಾಗಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಒಂದು ವ್ಯರ್ಥ ಪ್ರಯತ್ನ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
