ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Team Udayavani, Apr 19, 2024, 4:10 PM IST
ಬೆಳಗಾವಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಅವರ ಹತ್ಯೆ ಅತ್ಯಂತ ಖಂಡನೀಯ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು ಈ ಹೇಯ ಕೃತ್ಯದಿಂದ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಇಂಥ ಘಟನೆಗಳು ಮತ್ತೆ ಮರುಕಳಿಸಬಾರದು. ಅಪರಾಧಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ಆರೋಪಿಯ ಬಂಧನವಾಗಿದೆ. ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಅವರು ಪೊಲೀಸರಿಗೆ ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಸಂಬಂಧ ಸೇರಿಸುವುದು ಸರಿಯಲ್ಲ. ಬಿಜೆಪಿಯವರು ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!