
ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್!
Team Udayavani, Apr 16, 2021, 10:01 PM IST

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟಿಸ್ ನೀಡಿದೆ. ಇದೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆ ನಡೆಯಲಿದೆ ಎಂದು ನೋಟಿಸ್ ನಲ್ಲಿ ಮಾಹಿತಿ ನೀಡಲಾಗಿದೆ.
SIT ಅಧಿಕಾರಿಗಳು ಗೋಕಾಕ್ ಗೆ ತೆರಳಿ ನೋಟಿಸ್ ಅನ್ನು ನೀಡಿದ್ದಾರೆ. ಸದ್ಯ ರಮೇಶ್ ಜಾರಕಿಹೊಳಿ ಕೋವಿಡ್ ಸೋಂಕಿನಿಂದ ಕ್ವಾರಂಟೈನ್ ನಲ್ಲಿದ್ದಾರೆ. ಹೀಗಾಗಿ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಕಚೇರಿಗೆ ತೆರಳಿ ನೋಟಿಸ್ ಜಾರಿ ಮಾಡಿದ್ದಾರೆ.
ಇನ್ನು ಭಾರಿ ಸದ್ದು ಮಾಡಿದ್ದ ಅನೇಕ ತಿರುವುಗಳಿಂದ ಕುತೂಹಲ ಹುಟ್ಟು ಹಾಕಿದ್ದ ಸಿಡಿ ಪ್ರಕರಣ ಸಂಬಂಧ ಈಚೆಗೆ ರಮೇಶ್ ಜಾರಕಿಹೊಳಿ ತಮ್ಮ ವಕೀಲರ ಜೊತೆ ಚರ್ಚೆ ನಡೆಸಿದ್ದರು ಎಂದು ತಿಳಿದುಬಂದಿದೆ. ಏಪ್ರಿಲ್ 13ರಂದು ಸಿಡಿ ಸಂತ್ರಸ್ತೆ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸುಪ್ರೀಂ ಕೋರ್ಟ್ ವಕೀಲರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು ಎನ್ನಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
