ತಹಶೀಲ್ದಾರ್‌, ಎಸಿ ಉಪಸ್ಥಿತಿಗೆ ಆಗ್ರಹಿಸಿ ಬಹಿಷ್ಕಾರ

Team Udayavani, Jun 22, 2019, 5:00 AM IST

12

ಪುತ್ತೂರು: ತಹಶೀಲ್ದಾರ್‌ ಅಥವಾ ಸಹಾಯಕ ಕಮಿಷನರ್‌ ಅನುಪಸ್ಥಿತಿ ಯಲ್ಲಿ ಎಸ್ಸಿ, ಎಸ್ಟಿ ಕುಂದುಕೊರತೆ ಪರಿಶೀಲನ ಸಭೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ದಲಿತ ಸಂಘಟನೆಗಳ ಮುಖಂಡರು ಸಭೆಯನ್ನು ಬಹಿಷ್ಕರಿಸಿ ಹೊರ ನಡೆದ ಘಟನೆ ಶುಕ್ರವಾರ ನಡೆದಿದೆ.

ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ಎಸ್ಸಿ, ಎಸ್ಟಿ ಕುಂದುಕೊರತೆ ಪರಿಶೀಲನ ಸಭೆಯನ್ನು ಆಯೋಜಿಸ ಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಬೇಕಾದ ತಹಶೀಲ್ದಾರ್‌ ಅವರು ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಎಸಿಬಿಯವರಿಂದ ಬಂಧಿಸ ಲ್ಪಟ್ಟಿರುವುದರಿಂದ ಅವರ ಪರವಾಗಿ ಉಪತಹಶೀಲ್ದಾರ್‌, ತಾಲೂಕು ಪಂಚಾಯತ್‌ ಇಒ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಸಭೆ ನಡೆಸಲು ಬಂದಿದ್ದರು. ಇದಕ್ಕೆ ಸಂಘಟನೆಯ ಮುಖಂಡರು ವಿರೋಧ ವ್ಯಕ್ತಪಡಿಸಿದರು.

ಆರು ತಿಂಗಳು ಕಳೆದಿದೆ
ಸಭೆಗೆ ತಹಶೀಲ್ದಾರ್‌ ಅಥವಾ ಸಹಾ ಯಕ ಕಮಿಷನರ್‌ ಬರಬೇಕು. ಇಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ವಿಚಾರಗಳೇ ಹೆಚ್ಚು ಚರ್ಚಿಸಲ್ಪಡುತ್ತವೆ. ಜನವರಿಯಲ್ಲಿ ಸಭೆ ನಡೆದ ಬಳಿಕ ಸಭೆ ನಡೆಯದೆ ಆರು ತಿಂಗಳು ಕಳೆದಿದೆ. ದಲಿತರ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡದೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಹೀಗಾದರೆ ಅಭಿವೃದ್ಧಿ ಸಾಧ್ಯವಾಗುವುದಾದರೂ ಹೇಗೆ?

ತಹಶೀಲ್ದಾರ್‌ ಅಥವಾ ಸಹಾಯಕ ಕಮಿಷನರ್‌ ಅನುಪಸ್ಥಿತಿಯಲ್ಲಿ ಸಭೆ ನಡೆಸಲು ಬಿಡುವುದಿಲ್ಲ ಎಂದು ಮುಖಂಡ ರಾದ ಗಿರಿಧರ ನಾಯ್ಕ, ಬಾಲಚಂದ್ರ ಸೊರಕೆ, ಸೇಸಪ್ಪ ನೆಕ್ಕಿಲ ಮೊದಲಾದವರು ಎಚ್ಚರಿಸಿದರು.

ಕೆಲಸಗಳು ಆಗುತ್ತಿಲ್ಲ
ಗಿರಿಧರ್‌ ಮಾತನಾಡಿ, ನಾನು ಸುಳ್ಯದ ಸಭೆಗೂ ಹೋಗುತ್ತೇನೆ. ಅಲ್ಲಿನ ತಹಶೀಲ್ದಾರ್‌ ಉತ್ತಮ ಸ್ಪಂದನೆ ನೀಡು ತ್ತಾರೆ. ಆದರೆ ಪುತ್ತೂರಿನಲ್ಲಿ ದಲಿತರಿಗೆ ಸಂಬಂಧಿಸಿದ ಮೂಲ ಸೌಕರ್ಯಗಳನ್ನೇ ಮಾಡಿಕೊಡುತ್ತಿಲ್ಲ. ತಾಲೂಕು ಆಫೀಸ್‌ಗೆ ತೆರಳಿದರೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಸಹಾಯಕ ಕಮಿಷನರ್‌ ಆದರೂ ಬರಬೇಕು. ನಮಗೆ ಸಮಸ್ಯೆಗಳನ್ನು ಹೇಳಿಕೊಳ್ಳಲು ಇದೆ ಎಂದವರು ಹೇಳಿದರು.

ಸಭೆ ಬರ್ಖಾಸ್ತು
ಅನಂತರ ತಾ.ಪಂ. ಧಿಕಾರಿ ಜಗದೀಶ್‌ ಎಸ್‌. ಮಾತನಾಡಿ, ಈ ಸಭೆಯ ಅಧ್ಯಕ್ಷರು ತಹಶೀಲ್ದಾರ್‌ ಅವರೇ ಆಗಿರುತ್ತಾರೆ. ಸಭೆ ಇಂದು ಬೇಡ ಎಂದಾದರೆ ಮುಂದಿನ ದಿನವನ್ನು ನಿಗದಿ ಮಾಡೋಣ ಎಂದು ಹೇಳಿದರು. ಬಳಿಕ ಸಭೆಯನ್ನು ಬರ್ಖಾಸ್ತುಗೊಳಿಸಲಾಯಿತು. ಮುಂದಿನ ಸಭೆಯ ದಿನಾಂಕವನ್ನು ತಿಳಿಸುವುದಾಗಿ ಇಒ ಹೇಳಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಎಸ್‌., ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಸಿ.ಎಚ್., ಉಪ ತಹಶೀಲ್ದಾರ್‌ ರಾಮಣ್ಣ ನಾಯ್ಕ ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡರು.

ಟಾಪ್ ನ್ಯೂಸ್

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; ಇಬ್ಬರು ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 7 ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಹೈಕಮಾಂಡ್ ಜೊತೆ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಹೈಕಮಾಂಡ್ ಜೊತೆ ಸಿಎಂ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್

ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್

1death

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ಕುಟುಂಬಿಕರ ಆಕ್ರೋಶ

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

World Giants

ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

6elephant

ಸಂಪಾಜೆ ನೆಲ್ಲಿಕುಮೇರಿ ಕಾರ್ಣಿಕ ದೈವ ಕಟ್ಟೆಗೆ ಕಾಡಾನೆ ದಾಳಿ

5fire

ಬೆಂಕಿ ಅವಘಡ: ಕೃಷಿಭೂಮಿ ಬೆಂಕಿಗಾಹುತಿ

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; ಇಬ್ಬರು ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 7 ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

4bank

ಡಿಸಿಸಿ ಬ್ಯಾಂಕ್‌ನಿಂದ ಬಡ್ಡಿ ರಹಿತ ಸಾಲ ವಿತರಣೆ: ಹೇರೂರ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

6elephant

ಸಂಪಾಜೆ ನೆಲ್ಲಿಕುಮೇರಿ ಕಾರ್ಣಿಕ ದೈವ ಕಟ್ಟೆಗೆ ಕಾಡಾನೆ ದಾಳಿ

5fire

ಬೆಂಕಿ ಅವಘಡ: ಕೃಷಿಭೂಮಿ ಬೆಂಕಿಗಾಹುತಿ

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; ಇಬ್ಬರು ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 7 ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

4bank

ಡಿಸಿಸಿ ಬ್ಯಾಂಕ್‌ನಿಂದ ಬಡ್ಡಿ ರಹಿತ ಸಾಲ ವಿತರಣೆ: ಹೇರೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.