ಆಂಧ್ರ ಪ್ರದೇಶ ರಾಜ್ಯಕ್ಕೆ ನೂತನ ರಾಜಧಾನಿ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

Team Udayavani, Jan 31, 2023, 3:44 PM IST

Visakhapatnam Will be New Capital of Andhra Pradesh: CM Jagan

ಹೊಸದಿಲ್ಲಿ: ಆಂಧ್ರ ಪ್ರದೇಶಕ್ಕೆ ನೂತನ ರಾಜಧಾನಿಯ ಘೋಷಣೆಯಾಗಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಇಂದು ಕರಾವಳಿ ನಗರ ವಿಶಾಖಪಟ್ಟಣಂ ಇನ್ನು ಆಂಧ್ರ ಪ್ರದೇಶದ ರಾಜಧಾನಿಯಾಗಿರಲಿದೆ ಎಂದು ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ರಾಜತಾಂತ್ರಿಕ ಮೈತ್ರಿಕೂಟದಲ್ಲಿ ಮಾತನಾಡಿದ ಸಿಎಂ ಜಗನ್ ಈ ಘೋಷಣೆ ಮಾಡಿದ್ದಾರೆ.  “ನಮ್ಮ ರಾಜಧಾನಿಯಾಗಿರುವ ವಿಶಾಖಪಟ್ಟಣಕ್ಕೆ ನಿಮ್ಮನ್ನು ಆಹ್ವಾನಿಸಲು ನಾನು ಇಲ್ಲಿದ್ದೇನೆ. ನಾನು ಕೂಡ ವೈಜಾಗ್‌ ಗೆ ಶಿಫ್ಟ್ ಆಗುತ್ತೇನೆ” ಎಂದು ಸಿಎಂ ಹೇಳಿದರು.

“ಆಂಧ್ರ ಪ್ರದೇಶದಲ್ಲಿ ವ್ಯಾಪಾರ ಮಾಡುವುದು ಎಷ್ಟು ಸುಲಭ ಎಂದು ನೀವೇ ನೋಡಲು ನಾನು ಮತ್ತು ನಿಮ್ಮ ಸಹೋದ್ಯೋಗಿಗಳನ್ನು ಆಹ್ವಾನಿಸುತ್ತೇನೆ” ಎಂದು ಅವರು ಹೇಳಿದರು.

2014 ರಲ್ಲಿ ಆಂಧ್ರ ಪ್ರದೇಶ ರಾಜ್ಯವನ್ನು ವಿಭಜಿಸಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲಾಗಿತ್ತು. ಈ ವೇಳೆ ರಾಜಧಾನಿ ಹೈದರಾಬಾದ್ ತೆಲಂಗಾಣದ ಪಾಲಾಗಿತ್ತು. ಈ ವೇಳೆ ಎನ್ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವು 2015 ರಲ್ಲಿ ಅಮರಾವತಿಯನ್ನು ಆಂಧ್ರ ಪ್ರದೇಶವನ್ನು ರಾಜಧಾನಿಯಾಗಿ ಘೋಷಿಸಿತ್ತು. ಇದಕ್ಕಾಗಿ ರೈತರಿಂದ 33,000 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು.

ಇದನ್ನೂ ಓದಿ:ಪಾಕಿಸ್ಥಾನ ತಂಡಕ್ಕೆ ಆನ್ ಲೈನ್ ಕೋಚ್? ಏನಿದು ವಿಚಿತ್ರ ನಿರ್ಧಾರ?

ಜಗನ್ ಮೋಹನ್ ರೆಡ್ಡಿ ಅವರು 2019 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ರಾಜ್ಯ ಸರ್ಕಾರವು ಮೂರು ರಾಜಧಾನಿಗಳನ್ನು ಹೊಂದುವ ಕಲ್ಪನೆಯನ್ನು ಹರಿಬಿಟ್ಟಿತ್ತು. ವಿಶಾಖಪಟ್ಟಣಂ-ಕಾರ್ಯನಿರ್ವಾಹಕ ರಾಜಧಾನಿ, ಅಮರಾವತಿ-ಶಾಸಕ ರಾಜಧಾನಿ ಮತ್ತು ಕರ್ನೂಲ್-ನ್ಯಾಯಾಂಗ ರಾಜಧಾನಿ ಎಂಬ ಯೋಜನೆ ಆರಂಭಿಸಿತ್ತು.

ಕಳೆದ ವರ್ಷ ಮಾರ್ಚ್‌ ನಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ಮೂರು ರಾಜಧಾನಿ ಯೋಜನೆಯ ವಿರುದ್ಧ ತೀರ್ಪು ನೀಡಿತು. ಅಮರಾವತಿಯನ್ನು ರಾಜ್ಯದ ರಾಜಧಾನಿಯಾಗಿ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿತು.

2022 ಮಾರ್ಚ್ 3ರಂದು ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ರಾಜಧಾನಿಯನ್ನು ಸ್ಥಳಾಂತರಿಸಲು, ವಿಭಜಿಸಲು ಅಥವಾ ತ್ರಿವಿಭಜಿಸಲು ಯಾವುದೇ ಶಾಸನವನ್ನು ಮಾಡುವ ಸಾಮರ್ಥ್ಯವನ್ನು ರಾಜ್ಯ ಶಾಸಕಾಂಗವು ಹೊಂದಿಲ್ಲ ಎಂದು ಹೇಳಿದೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.