ತಾ.ಪಂ, ಜಿ.ಪಂ ಚುನಾವಣೆ: ವಿಚಾರಣೆ ಫೆ.14ಕ್ಕೆ ಮುಂದೂಡಿದ ಹೈಕೋರ್ಟ್
Team Udayavani, Jan 19, 2022, 6:20 AM IST
ಬೆಂಗಳೂರು: ಕಾಲಮಿತಿಯೊಳಗೆ ತಾ.ಪಂ ಹಾಗೂ ಜಿ.ಪಂ ಚುನಾವಣೆಗಳನ್ನು ನಡೆಸದಿದ್ದರೆ ಸಂವಿಧಾದನ ಆಶಯ ಮತ್ತು ಆದೇಶಗಳು ನೇರ ಸಂಘರ್ಷಕ್ಕೊಳಪಡಲಿವೆ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮುಂದೆ ಪ್ರತಿಪಾದಿಸಿದೆ.
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು “ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಸರ್ಕಾರದ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶ ಬೇಕು ಎಂದು ಕೋರಿದರು. ಇದಕ್ಕೆ ಆಕ್ಷೇಪಿಸಿದ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ರಾಜ್ಯದ ತಾ.ಪಂ ಹಾಗೂ ಜಿ.ಪಂ.ಗಳ ಅವಧಿ ಮುಗಿದು ಚುನಾವಣೆ ಬಾಕಿ ಉಳಿದಿದೆ.
ಇದನ್ನೂ ಓದಿ:ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ
ಕಾಲಮಿತಿಯೊಳಗೆ ಚುನಾವಣೆ ನಡೆಸುವುದು ಆಯೋಗದ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ. ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ ನಿಗದಿಯನ್ನು ಪೂರ್ಣಗೊಳಿಸಿ ಚುನಾವಣೆಗೆ ಸಿದ§ತೆಗಳನ್ನು ಮಾಡಿಕೊಂಡ ಬಳಿಕ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ. ಇದು ಸಂವಿಧಾನದ 243 (ಇ) ಪರಿಚ್ಛೇದದೊಂದಿಗೆ ನೇರ ಸಂಘರ್ಷವಾಗಲಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಸರ್ಕಾರದ ಪರ ವಕೀಲರು ವಾದ ಮುಂದುವರಿಸಿ, ಅರ್ಜಿಯಲ್ಲಿ ತಿದ್ದುಪಡಿ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನೆ ಮಾಡಿರುವುದರಿಂದ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶಬೇಕು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ