Budget; ಶೀಘ್ರ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ; ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು

Team Udayavani, Feb 16, 2024, 12:31 PM IST

Budget; ಶೀಘ್ರ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ; ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು

ಬೆಂಗಳೂರು: ರಾಜ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದರು. ಪ್ರಮುಖವಾಗಿ ಶೀಘ್ರದಲ್ಲಿಯೇ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ರಾಜ್ಯ ಬಜೆಟ್ 2024: ಉನ್ನತ ಶಿಕ್ಷಣ

ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ, ರಾಜ್ಯದ ಅಸ್ಮಿತೆ ಮತ್ತು ಸಂಸ್ಕೃತಿಗೆ ಅನುಗುಣವಾಗಿ, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿದೆ. ಆಯೋಗವು ಶೀಘ್ರದಲ್ಲಿಯೇ ವರದಿಯನ್ನು ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡುತ್ತಾ ಬಂದಿದೆ. ಹಿಂದಿನ ಅಧಿಕಾರಾವಧಿಯಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಮಹತ್ತರ ತೀರ್ಮಾನವನ್ನು ಕೈಗೊಂಡಿತ್ತು. ಇದೀಗ ಇನ್ನೊಂದು ಹೆಜ್ಜೆ ಮುಂದಿಡುತ್ತಾ ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂ. ಅನುದಾನ ಒದಗಿಸಲಾಗುವುದು.

2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ 250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ ಒದಗಿಸಲಾಗುವುದು. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಅಗತ್ಯತೆಗನುಗುಣವಾಗಿ ತುಂಬಲಾಗುವುದು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು.

ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (UVCE) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಜೊತೆಗೆ ಸಿ.ಎಸ್.ಆ‌ರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುವುದು.

ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಗೊಳಿಸಲು ‘ಬೇರು-ಚಿಗುರು’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ತಮ್ಮ ಆವಿಷ್ಕಾರಗಳಿಗೆ ಪೇಟೆಂಟ್ ಪಡೆದುಕೊಳ್ಳಲು ಅಗತ್ಯವಾದ ತಾಂತ್ರಿಕ ಮತ್ತು ಆರ್ಥಿಕ ನೆರವು ನೀಡಲು 10 ಕೋಟಿ ರೂ.ಗಳ Corpus Fund ಸ್ಥಾಪಿಸಲಾಗುವುದು.

ವಿಷಯ ತಜ್ಞರು, ನಾಗರಿಕ ಸೇವಾ ಅಧಿಕಾರಿಗಳು ಮತ್ತು ಉದ್ಯಮಿಗಳಿಂದ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಎಂಬ ಕಾರ್ಯಕ್ರಮದಡಿ ಮಾರ್ಗದರ್ಶನವನ್ನು (Mentorship) ನೀಡಲಾಗುವುದು.

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು 54 ಕೋಟಿ ರೂ. ವೆಚ್ಚದಲ್ಲಿ ಹಾಗೂ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ 116 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.