Union Budget 2024: ರಾಮನಗರಕ್ಕೆ ಈ ಬಾರಿಯಾದರೂ ದೊರೆತೀತೆ ಅನುದಾನ

Team Udayavani, Jan 30, 2024, 5:55 PM IST

Union Budget 2024: ರಾಮನಗರಕ್ಕೆ ಈ ಬಾರಿಯಾದರೂ ದೊರೆತೀತೆ ಅನುದಾನ

ಉದಯವಾಣಿ ಸಮಾಚಾರ
ರಾಮನಗರ: ಕೆಲ ಸಣ್ಣ ಪುಟ್ಟ ಕಾರ್ಯ ಕ್ರಮಗಳನ್ನು ಹೊರತುಪಡಿಸಿದರೆ, ಕಳೆದ 5 ವರ್ಷಗಳ ಅವಧಿಯಲ್ಲಿ ರಾಮನಗರ ಜಿಲ್ಲೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ದೊರೆತಿರುವ ಮಹ ತ್ವದ ಕೊಡುಗೆಗಳ್ಯಾವುವೂ ಇಲ್ಲವಾಗಿದೆ. ಇದೀಗ ತನ್ನ ಕೊನೆಯ ಬಜೆಟ್‌ನಲ್ಲಾದರೂ ಕೇಂದ್ರ ವಿತ್ತ ಸಚಿವರು ರೇಷ್ಮೆನಾಡಿಗೆ ಮಹತ್ತರ ಕೊಡುಗೆ ನೀಡುವರೇ ಎಂಬ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ ಕೇಂದ್ರ ಬಜೆಟ್‌ನತ್ತ ನಿರೀಕ್ಕೆ ಇಟ್ಟಿದ್ದಾರೆ.

ಬೆಂಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸಾಕಷ್ಟು ನೆರವು ನಿರೀಕ್ಷಿಸಿದೆ. ನರೇಗಾ, ಜಲಜೀವನ್‌ ಮಿಷನ್‌, ಕಿಸಾನ್‌ ಸಮ್ಮಾನ್‌ ಮೊದಲಾದ ಸಾರ್ವತ್ರಿಕ ಯೋಜನೆಗಳನ್ನು ಹೊರತುಪಡಿಸಿದರೆ ಜಿಲ್ಲೆಗಾಗಿ ಕೇಂದ್ರ ಸರ್ಕಾರ ನೀಡಿದ ಪ್ರತ್ಯೇಕ ಯೊಜನೆಗಳು ಯಾವುವೂ ಇಲ್ಲವಾಗಿವೆ.

ಈ ಬಾರಿ ಹಲವು ನಿರೀಕ್ಷೆ: ಕೇಂದ್ರ ವಿತ್ತಸಚಿವ ನಿರ್ಮಲಾ ಸೀತಾರಾಮ್‌ ತನ್ನ ಕೊನೆಯ ಬಜೆಟ್‌ ನಲ್ಲಿ ಮಹತ್ವದ ಕೊಡುಗೆಗಳನ್ನು ಜಿಲ್ಲೆಗೆ ನೀಡಬಹುದೇ ಎಂಬ ನಿರೀಕ್ಷೆ ಜನತೆಯಲ್ಲಿ ಗರಿಗೆದರಿದೆ. ಕೇಂದ್ರ ಸಚಿವರು ಜಿಲ್ಲೆಗೆ ಈ ಬಾರಿಯಾದರೂ ಬಜೆಟ್‌ನಲ್ಲಿ ಮಹತ್ವದ ಕೊಡುಗೆಗಳನ್ನು ನೀಡಲಿ ಎಂದು ಜಿಲ್ಲೆಯ ಜನತೆ ಬಯಸುತ್ತಿದ್ದಾರೆ.

ದೇಶಿ ಆಟಿಕೆ ಉದ್ಯಮಕ್ಕೆ ಉತ್ತೇಜನ ನೀಡುವುದಾಗಿ ಕೇಂದ್ರ ಸರ್ಕಾರ ಹಲ ವಾರು ಬಾರಿ ಹೇಳುತ್ತಾ ಬಂದಿದ್ದು, ಕೋವಿಡ್‌-19 ಬಳಿಕ ಸಂಕಷ್ಟಕ್ಕೆ ಸಿಲುಕಿ ರುವ ಚನ್ನಪಟ್ಟಣದ ಕರಕುಶಲ ಉದ್ಯಮಕ್ಕೆ ಉತ್ತೇಜನ ನೀಡುವ ಕೆಲಸ ಈ ಬಜೆಟ್‌ನಲ್ಲಾದರೂ ಆಗಲಿ, ಚನ್ನಪಟ್ಟಣದಲ್ಲಿ ಕೇಂದ್ರ ಸರ್ಕಾರ ಆಟಿಕೆಗಳ ನಿರ್ಮಾಣದ ಕ್ಲಸ್ಟರ್‌ ತೆರೆದು ಸಾಂಪ್ರದಾಯಿಕ ಬೊಂಬೆಗಳ ಉದ್ಯಮಕ್ಕೆ ಚೈತನ್ಯ ನೀಡಲಿ ಎಂದು ಜನತೆ ನಿರೀಕ್ಷಿಸುತ್ತಿದ್ದಾರೆ.

ಇದರೊಂದಿಗೆ ರಾಮನಗರ ಚನ್ನಪಟ್ಟಣ ಮಾರ್ಗದಲ್ಲಿ ಪ್ರತಿನಿತ್ಯ 15 ಸಾವಿ ರಕ್ಕೂ ಹೆಚ್ಚು ಮಂದಿ ಕಾರ್ಮಿಕರು, ನೌಕರರು ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದು, ಇವರ ಅನುಕೂಲಕ್ಕಾಗಿ ಹೆಚ್ಚುವರಿ ರೈಲು ಸೇವೆ. ರೈಲು ನಿಲ್ದಾಣಗಳ ಅಭಿವೃದ್ಧಿಗೆ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವರು ಚಿತ್ತೈಸ ಬೇಕಿದೆ.

ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಬೇಕು: ರಾಮನಗರ ಜಿಲ್ಲೆಯಲ್ಲಿ ಬಿಡದಿ, ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಜೊತೆಗೆ ಸಣ್ಣ ಪುಟ್ಟ ಕೈಗಾರಿಕೆಗಳು ಇದ್ದು, ಹತ್ತಾರು ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಹಿತದೃಷ್ಟಿಯಿಂದ ಜಿಲ್ಲೆಗೆ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಅತ್ಯವಶ್ಯಕ ವಾಗಿದೆ. ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಾದರೂ ಸುಸಜ್ಜಿತ ಇಎಸ್‌ಐ ಆಸ್ಪತ್ರೆಗೆ ಅನುಮೋದನೆ ನೀಡಿದ್ದೇ ಆದಲ್ಲಿ ಹತ್ತಾರು ಸಾವಿರ ಕಾರ್ಮಿಕ ಕುಟುಂಬಗಳಿಗೆ ನೆರವಾಗಲಿದೆ.

ಕನಕಪುರ-ಚಾಮರಾಜನಗರ ರೈಲ್ವೆಗೆ ಸಿಗುತ್ತ ಅನುಮೋದನೆ

ಜಿಲ್ಲೆಯ ಹಲವು ದಿನಗಳ ಬೇಡಿಕೆಯಾಗಿರುವ ಹೆಜ್ಜಾಲ ಮೂಲಕ ಕನಕಪುರ, ಮಳವಳ್ಳಿ, ಕೊಳ್ಳೇಗಾಲ ಮೂಲಕ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ಹೊಸ ರೈಲ್ವೆ ಮಾರ್ಗ ಹತ್ತಾರು ವರ್ಷಗಳಿಂದ ಕೇವಲ ದಾಖಲೆಯಲ್ಲೇ ಉಳಿದಿದ್ದು, ಈ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಾದರೂ ಕೇಂದ್ರ ಸರ್ಕಾರ ಅನುಮೋದನೆ ನೀಡುವುದೇ ಎಂಬುದು ಜನರ ನಿರೀಕ್ಷೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿರುವ ಕಾರಣ ಟ್ರಾಮಾ ಸೆಂಟರ್‌, ಬಿಡದಿಯವರೆಗೆ ಸಬ್‌ಅರ್ಬನ್‌ ರೈಲ್ವೆ ಯೋಜನೆ ವಿಸ್ತರಣೆ, ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜವಳಿ ಪಾರ್ಕ್‌ ನಿರ್ಮಾಣ, ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಕೆಫೆಟೇರಿಯಾ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರದ ಅನುಮೋದನೆ ದೊರೆತೀತೆ ಕಾಯ್ದು ನೋಡಬೇಕಿದೆ.

■ ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.