ಕಬಡ್ಡಿಯ ಹೊಸ ಬೆಳಕು ತೃಪ್ತಿ


Team Udayavani, Jun 28, 2020, 10:00 AM IST

Kabaddi’s new light is satisfying

ಜೀವನದಲ್ಲಿ ಸಾಧಿಸುವ ಗುರಿಯೊಂದಿದ್ದರೆ ಸಾಲದು, ಗುರಿಯನ್ನು ಈಡೇರಿಸಲು ಸತತ ಪ್ರಯತ್ನ ಹಾಗೂ ಪರಿಶ್ರಮ ಕೂಡ ಅಗತ್ಯ. ಅಂತೆಯೇ ಇಲ್ಲೊಬ್ಬ ಕ್ರೀಡಾಪಟು ಎಳವೆಯಿಂದಲೇ ಕ್ರೀಡಾ ಜಗತ್ತಿಗೆ ಮಾದರಿಯಾಗುವ ಹಂಬಲದಿಂದ ಮುನ್ನುಗ್ಗುತ್ತಿದ್ದಾರೆ, ಅವರೇ ತೃಪ್ತಿ ಪಿ.ಜಿ. ಬಾಲ್ಯದಿಂದಲೇ ಕಬಡ್ಡಿಯಲ್ಲಿ ಗುರುತಿಸಿಕೊಂಡಿರುವ ಇವರು ರಾಜ್ಯ ಹಾಗೂ ರಾಷ್ಟ್ರಮಟ್ಟದ ಪಂದ್ಯಾಟಗಳಲ್ಲಿ ಭಾಗವಹಿಸಿದ್ದಾರೆ.

ತೃಪ್ತಿ ಪಿ.ಜಿ. ಅವರು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಪೆರಾಜೆಯ ಶ್ರೀಮತಿ ಮತ್ತು ಗಂಗಾಧರ ಪಿ.ಜಿ. ದಂಪತಿಯ ಪುತ್ರಿ. ಉಜಿರೆಯ ಎಸ್‌.ಡಿ.ಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪೂರೈಸಿರುವ ಇವರು, ಪ್ರಸ್ತುತ ಮಂಗಳೂರು ವಿವಿಯಲ್ಲಿ ದೈಹಿಕ ಶಿಕ್ಷಕ ಶಿಕ್ಷಣ ವಿಭಾಗದಲ್ಲಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಬಡ್ಡಿಯಲ್ಲೇ ತನ್ನ ಭವಿಷ್ಯವನ್ನು ರೂಪಿಸಬೇಕೆಂದು ಹಠದಿಂದ ಮುನ್ನುಗ್ಗುತ್ತಿರುವ ಇವರಿಗೆ ಮನೆಯವರು ಮತ್ತು ಗುರುಗಳು ಸದಾ ಬೆನ್ನೆಲುಬಾಗಿದ್ದಾರೆ.

ಪ್ರೌಢಶಾಲಾ ಮತ್ತು ಪದವಿ ಪೂರ್ವ ಹಂತದಲ್ಲೇ ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ದೊಡ್ಡಣ್ಣ ಬರಮೇಲು ಮತ್ತು ಕೃಷ್ಣಾನಂದ ಪೂರಕ ತರಬೇತಿ ನೀಡಿದರು. ಅದರ ಫ‌ಲವಾಗಿಯೇ ಇಂದು ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ್ತಿಯಾಗಿದ್ದಾರೆ.

ಇವರ ಅಪ್ರತಿಮ ಸಾಧನೆಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ತಮಿಳುನಾಡಿನಲ್ಲಿ ನಡೆದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಪಂದ್ಯಾಟದಲ್ಲಿ ಚಿನ್ನದ ಪದಕ, ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಪಂದ್ಯಾಟದಲ್ಲಿ ಬೆಳ್ಳಿಯ ಪದಕ ಮತ್ತು ವೆಲ್‌ಟೆಕ್‌ ವಿಶ್ವವಿದ್ಯಾನಿಲದಲ್ಲಿ ನಡೆದ ದಕ್ಷಿಣ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ನಾಯಕಿಯಾಗಿ ಬೆಳ್ಳಿಯ ಪದಕ ಹೀಗೆ ಮುಂತಾದ ಬಹುಮಾನಗಳನ್ನು ಪಡೆದಿದ್ದಾರೆ. ಸತತ ನಾಲ್ಕು ಬಾರಿ ಅಖೀಲ ಭಾರತ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ, ಈ ವರ್ಷ ಒರಿಸ್ಸಾದಲ್ಲಿ ನಡೆಯುವ ಖೇಲೋ ಇಂಡಿಯಾದಲ್ಲಿ ಆಡಲು ಅವಕಾಶ ಪಡೆದುಕೊಂಡ ಕೀರ್ತಿ ತೃಪ್ತಿಗೆ ಸಲ್ಲುತ್ತದೆ.

ತೃಪ್ತಿ ಅವರು ಕೇವಲ ಕಬಡ್ಡಿ ಮಾತ್ರವಲ್ಲ, ಹ್ಯಾಂಡ್‌ಬಾಲ್‌, ಕ್ರಿಕೆಟ್‌ ಮತ್ತು ಬಾಸ್ಕೆಟ್‌ಬಾಲ್‌ ಮುಂತಾದ ಆಟಗಳನ್ನೂ ಆಡುತ್ತಾರೆ. ಭವಿಷ್ಯದಲ್ಲಿ ಇವರಿಗೆ ಭಾರತೀಯ ಕಬಡ್ಡಿ ತಂಡವನ್ನು ಪ್ರತಿನಿಧಿಸುವ ಆಸೆಯಿದೆ. ಸಮಾಜದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಹಾತೊರೆಯುವ ವಿದ್ಯಾರ್ಥಿಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ಕೊಡುವ ಆಕಾಂಕ್ಷೆ ಇವರದು. ಮುಂದಿನ ದಿನಗಳಲ್ಲಿ ಇವರ ಎಲ್ಲ ಇಚ್ಛೆಗಳೂ ಈಡೇರಿ ಒಬ್ಬ ಮಾದರಿ ಕ್ರೀಡಾಪಟುವಾಗಲಿ ಎಂಬುದೇ ನಮ್ಮೆಲ್ಲರ ಹಾರೈಕೆ.

ನಿಧಿ ಪ್ರಸನ್ನ, ಉಡುಪಿ , ಮಂಗಳೂರು ವಿವಿ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.