ತಮಸ್ಸನ್ನು ಹೋಗಲಾಡಿಸಿ ದೀಪವೆಂಬ ಬೆಳಕು ಮೂಡಲಿ


Team Udayavani, Nov 14, 2020, 4:29 PM IST

page 1

ದೀಪವನ್ನು ಬೆಳಗುವುದು ಸನಾತನ ಜೀವನಧರ್ಮದಲ್ಲಿ ಎಲ್ಲ ಧಾರ್ಮಿಕ ವಿಧಿಗಳಲ್ಲೂ ನಡೆಯಬೇಕಾದ ಪ್ರಥಮ ಕಾರ್ಯ.

ಕತ್ತಲೆಯ ವೈರಿ ಬೆಳಕು. ಬೆಳಕನ್ನು ದೃಷ್ಟಿಸುವುದರಿಂದ ನಮ್ಮ ಮನಸ್ಸು ಅರಳಿ ಪ್ರಫ‌ುಲ್ಲವಾಗುತ್ತದೆ. ಕತ್ತಲೆಗೆ ತಮಸ್ಸು ಎಂಬುದಾಗಿಯೂ ಹೆಸರಿದೆ.

ದೀಪವೊಂದು ಉರಿಯುತ್ತಿದ್ದರೆ ಉರಿಯುವ ದೀಪದ ಮೂಲದಲ್ಲಿ ಬ್ರಹ್ಮನೂ, ಮಧ್ಯದಲ್ಲಿ ವಿಷ್ಣುವೂ ಮತ್ತು ತುದಿಯಲ್ಲಿ ಶಿವನೂ ಸನ್ನಿಹಿತರಾಗಿರುತ್ತಾರೆ ಎಂಬುದು ಶ್ಲೋಕದ ಅರ್ಥ. ದೇವರೆಲ್ಲ ಒಬ್ಬನೇ ಆದರೂ ನಾವು ಬಯಸುವ ರೂಪಗಳಲ್ಲಿ ನಮಗೆ ತೋರ್ಪಡಿಸಿಕೊಳ್ಳುವುದು ಅಥವಾ ನಾವು ಆತನನ್ನು ಆರಾಧಿಸುವುದು ನಡೆಯುತ್ತದೆ.

ಮಂಗಳ ಚಿಹ್ನೆಗಳಲ್ಲಿ ಪ್ರಥಮವಾಗಿ ಮಂಗಳ ದೀಪವನ್ನೇ ಹೇಳಲಾಗುತ್ತದೆ. ಅನಂತರ ಇತರ ಎಲ್ಲವೂ ಬರುತ್ತವೆ. ದೇವತೆಗಳ ಪೂಜೆಗೆ ಅವರನ್ನು ಆಹ್ವಾನಿಸುವಾಗ ಏನೆಲ್ಲ ಮಾಡಬೇಕೆಂಬುದೇ ಸಾಮಾನ್ಯವಾಗಿ ಇಲ್ಲಿ ಅರಿಯಬೇಕಾದ ಅಂಶ. ಯಾಕೆ ವಿವಿಧ ಪರಿಕರಗಳು ಉಪಯೋಗಿಸಲ್ಪಡುತ್ತವೆ ಎಂಬುದ‌ರ ಮಹತ್ವವನ್ನೂ ಸ್ಥೂಲವಾಗಿ ಅರಿಯಬಹುದಾಗಿದೆ. ಹಿಂದೆ ನಮ್ಮ ಪೂರ್ವರ್ಜರೆಲ್ಲ ಗೋಮಯದಿಂದ ನೆಲವನ್ನು ಸಾರಿಸುತ್ತಿದ್ದರು. ಗೋಮಯವನ್ನು ಆಯ್ದುಕೊಳ್ಳುವಾಗ ಸಹ ವಿಶಿಷ್ಟ ನಿಯಮಗಳಿದ್ದವು.

ಕರು ಹಾಕಿರುವ ಹಸುವಿನ ತಾಜಾ ಸೆಗಣಿಯೇ ಗೋಮಯವಾಗುತ್ತಿತ್ತು; ಸೂರ್ಯನ ಕಿರಣದಡಿಯಲ್ಲಿ ಗೋಮಾಳಗಳಲ್ಲಿ ಮೇದು ಬರುವ ದೇಸೀ ದನಗಳ ತಾಜಾ ಸೆಗಣಿಯಲ್ಲಿ ಕ್ರಿಮಿನಾಶಕ ಅಂಶಗಳಿವೆ ಎಂಬುದು ವೈಜ್ಞಾನಿಕ. ನಮ್ಮ ಕಾರ್ಯಗಳಿಗೆ ಅಡಚಣೆ ಉಂಟುಮಾಡದಂತೆ ಉಪದ್ರವಕಾರಿ ಕೀಟಾಣುಗಳನ್ನು ದೂರವಿಡುವುದು ಅನಿವಾರ್ಯ; ಅವುಗಳ ಹತವೇ ನಮ್ಮ ಉದ್ದೇಶವಲ್ಲ, ಆದರೆ ನಮಗರಿವಿಲ್ಲದೇ ಅವು ಹತವಾದರೆ ಅದಕ್ಕಾಗಿ ಸೃಷ್ಟಿಕರ್ತನನ್ನೇ ಸ್ಮರಿಸುವುದು ಸಂಪ್ರದಾಯ.

ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಇಡುವುದು ಮಂಗಳದ ಇನ್ನೊಂದು ಚಿಹ್ನೆ. ನಿತ್ಯವೂ ನಾವು ವಾಸಿಸುವ ಸ್ಥಳಗಳ ಎದುರು ಭಾಗದಲ್ಲಿ, ಸೂರ್ಯೋದಯಕ್ಕೂ ಮುಂಚೆ ನೀರು-ಗೋಮಯ ಹಾಕಿ ಸಾರಿಸಿ, ರಂಗೋಲಿ ಇಡುವುದು ನಡೆಯಬೇಕಾದ ಕೆಲಸ. ವಿಶೇಷ ದಿನಗಳಲ್ಲಿ ಮಾವಿನ ಎಲೆ ಮತ್ತು ಬಾಳೆ ಗಿಡಗಳಿಂದ ಬಾಗಿಲನ್ನು ಅಲಂಕರಿಸಿ ದೇವತೆಗಳ ಆಹ್ವಾನಕ್ಕೆ ತಯಾರಿ ನಡೆಸಿಕೊಳ್ಳುವುದು ಮಂಗಳಕರ ಚಿಹ್ನೆ. ಮಂಗಳದ ಚಿಹ್ನೆಗಳನ್ನು ಅಪರ ಕಾರ್ಯಕ್ರಮಗಳಲ್ಲಿ ಬಳಸುವುದಿಲ್ಲ.

ಪರ ಅಂದರೆ ದೇವಲೋಕವೆಂದರ್ಥ, ಅಪರ ಎಂದರೆ ಐಹಿಕ, ಲೌಕಿಕ ಎಂದರ್ಥ. ಸಾಮಾನ್ಯವಾಗಿ ಯಾರಾದರೂ ಮರಣಿಸಿದರೆ, ಅಥವಾ ಪೂರ್ವಿಕರ ಪುಣ್ಯತಿಥಿಯ ಆಚರಣೆಯಿದ್ದರೆ ಅಂತಹ ದಿನಗಳಲ್ಲಿ ಆ ಕಾರ್ಯಕ್ರಮಗಳಲ್ಲಿ ದೀಪವನ್ನು ಬಿಟ್ಟು ಉಳಿದ ಮಂಗಳ ಚಿಹ್ನೆಗಳನ್ನು ಹೆಚ್ಚಾಗಿ ಬಳಸಲಾಗುವುದಿಲ್ಲ. ದೀಪವನ್ನೂ ಸಹ ದೇವರೆದುರು ಮಾತ್ರ ಹಚ್ಚಿ ಇಡಲಾಗುತ್ತದೆಯೇ ವಿನಃ ಶ್ರಾದ್ಧಾದಿಗಳು ನಡೆಯುವಲ್ಲಿ ದೀಪದ ಅಗತ್ಯ ಇರುವುದಿಲ್ಲ ಅಥವಾ ನಿಷೇಧ.

ಸಂಜೆಯಾಯಿತೆಂದರೆ ಭಾರತೀಯ ನಾರಿಯರು ಮನೆಯೊಳಗಡೆ ದೀಪವನ್ನು ಉರಿಸಿ ಈ ಶ್ಲೋಕವನ್ನು ಹೇಳುತ್ತಿದ್ದರು. ಈ ಶ್ಲೋಕದಲ್ಲಿ “ಮಮ ಶತ್ರು ಹತಾರ್ಥಾಯ’ ಎಂದರೆ ನಮ್ಮ ಶತ್ರು ಕತ್ತಲೆ ಎಂದರ್ಥ. ಈ ಜನ್ಮದಲ್ಲಿ ವ್ಯಾವಹಾರಿಕವಾಗಿ ನಮಗೆ ಆಗದ ಜನರನ್ನು ಶತ್ರುಗಳೆಂದು ಭಾವಿಸಬಾರದು, ಹಾಗೆ ಭಾವಿಸುವುದು ನಮ್ಮ ದುಷ್ಟತನವೆನಿಸಿಕೊಳ್ಳುತ್ತದೆ. ನಮಗೂ ಅವರಿಗೂ ಯಾವುದೋ ಕಾರ್ಯಕಾರಣದಿಂದ ಉಂಟಾದ ರಾಗದ್ವೇಷ ಆ ಕಾರಣಕ್ಕಾಗಿ ಮಾತ್ರ ಮೀಸಲಾಗಿರಲಿ; ಅಲ್ಲಿಂದಾಚೆಗೆ ಎಲ್ಲ ವಿಷಯಗಳಲ್ಲೂ ಅವರು ನಮ್ಮ ದ್ವೇಷಿಗಳೆಂದು ಭಾವಿಸದಿರುವುದು ಸನಾತನ ನೀತಿ. ಮಹಾಭಾರತದಲ್ಲಿ ರಣರಂಗದಲ್ಲಿ ತೊಡೆಮುರಿದು ಬಿದ್ದ ದುರ್ಯೋಧನನನ್ನು ಕೃಷ್ಣನ ಅನುಜ್ಞೆಯ ಮೇರೆಗೆ ಭೀಮನು ಕೊಂದು ಹಾಕಿದ. ಸತ್ತ ಸುಯೋಧನನ ಶಿರವನ್ನು ಭೀಮ ಕಾಲಿನಿಂದ ತುಳಿದ. ಆಗ ಕೃಷ್ಣ ಒಂದು ಮಾತನ್ನು ಹೇಳಿದ್ದಾನೆ.

ಜೀವಿಗೆ ಶಿರದ ಭಾಗವೇ ಪ್ರಮುಖ. ಅದನ್ನು ತುಳಿದು ಅವಮಾನಿಸಬಾರದು. ಜೀವವಿರಲಿ, ಇಲ್ಲದಿರಲಿ ಪ್ರತ್ಯಕ್ಷವಾಗಿ ಜೀವಿಯ ಭೌತಿಕ ಶರೀರ ಎದುರು ಕಂಡಾಗ, ಕಾಲಿನಿಂದ ತಲೆಯನ್ನು ತುಳಿಯಬಾರದು. ಹಿಂದೊಂದು ಜಾವದಲ್ಲಿ ಜೀವದಲ್ಲಿದ್ದ ಆ ಜೀವಿಗೆ ತಲೆಯೇ ಕೇಂದ್ರ ಸ್ಥಾನವಾಗಿತ್ತು. ತಲೆಯಿಲ್ಲದಿದ್ದರೆ ಜೀವಿ ಅಪೂರ್ಣ. ತಲೆಯಲ್ಲಿರುವ ಮೆದುಳಿನಿಂದ ಮನಸ್ಸಿನ ಚಟುವಟಿಕೆಗಳು ನಡೆಸಲ್ಪಡುತ್ತವೆ. ಹೀಗಾಗಿ ಭೀಮ ನೀನು ಸುಯೋಧನನ ಪಾರ್ಥಿವ ಶರೀರದ ಶಿರವನ್ನು ಕಾಲಿನಿಂದ ತುಳಿದದ್ದು ತಪ್ಪು. ಇದು ಕೃಷ್ಣನ ಧರ್ಮಪಾಲನೆಯನ್ನು ತಿಳಿಸುತ್ತದೆ.

ಇಂದು ಎಣ್ಣೆಯ ದೀಪಗಳ ಹಂಗಿಲ್ಲ, ದೇವರಿಗೂ ದೀಪವನ್ನು ಹಚ್ಚುವ ಪರಿಪಾಠ ಅನೇಕ ಮನೆಗಳಲ್ಲಿ ಇಲ್ಲ! ಹೀಗಾಗಿ ದೀಪಗಳ ಮಹತ್ವದ ಅರಿವಿಲ್ಲ. ದೀಪಗಳನ್ನು ಉರಿಸುವಾಗ ಅವುಗಳಿಂದ ಉತ್ಪತ್ತಿಯಾದ ಹೊಗೆ ವಾಯುವನ್ನು ಸೇರುತ್ತದೆ. ಹೀಗಾಗಿ ವಾಯುವನ್ನು ಮಲಿನಗೊಳಿಸುವ ಹೊಗೆ ಆದಷ್ಟೂ ಆಗದ ರೀತಿಯಲ್ಲಿ ದೀಪಗಳನ್ನು ಉರಿಸುತ್ತಿದ್ದರು.

ಉದಾಹರಣೆಗೆ ಎಳ್ಳೆಣ್ಣೆಯ ದೀಪವನ್ನು ಉರಿಸುವುದರಿಂದ ಅದರ ಹೊಗೆ ಸುತ್ತಲಿನ ವಾತಾರಣವನ್ನು ಸೇರಿ-ಉಸಿರಾಟದ ಮೂಲಕ ನಮ್ಮೊಳಗೆ ಸೇರಿ, ಮನದ ಕ್ಲೇಶನಾಶಕ್ಕೆ ಕಾರಣವಾಗುತ್ತದೆ. ತುಪ್ಪದ ದೀಪ ಕೂಡ ಹಾಗೆ. ಸೀಮೆಎಣ್ಣೆ ದೀಪವನ್ನು ದೇವರ ಮುಂದೆ ಬೆಳಗುವುದಿಲ್ಲ. ಏಕೆಂದರೆ ಕಲ್ಲೆಣ್ಣೆಯ ಹೊಗೆ ಆರೋಗ್ಯಕ್ಕೆ ಹಾನಿಕರ. ಮನುಷ್ಯ ಪರಿಶ್ರಮದಿಂದ ತಯಾರಿಸಿಕೊಂಡ ಕಡಲೇ ಕಾಯಿ ಎಣ್ಣೆ ಶೇಂಗಾ ಎಣ್ಣೆ, ಹರಳೆಣ್ಣೆ, ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಇಂತಹ ಎಣ್ಣೆಗಳನ್ನು ಮಾತ್ರ ದೀಪಗಳಿಗೆ ಬಳಸಲಾಗುತ್ತದೆ.

ಕಾಲೇಜೊಂದರ ಉಪನ್ಯಾಸಕರೊಬ್ಬರಿಗೆ ವೇದಿಕೆಯ ಕಾರ್ಯಕ್ರಮಗಳಲ್ಲಿ ದೀಪವನ್ನು ಬೆಳಗುವುದು ಬಹಳ ಕೋಪವನ್ನು ತರಿಸುತ್ತಿತ್ತಂತೆ. ಸದರೀ ಉಪನ್ಯಾಸಕರು ತಮ್ಮ ಉಪನ್ಯಾಸಗಳಲ್ಲಿ ದೀಪಗಳನ್ನು ಬೆಳಗುವವರ ಕುರಿತು ವೈದಿಕ ಧರ್ಮದವರು, ಮೂಢನಂಬಿಕೆಯುಳ್ಳವರು ಎಂದೆಲ್ಲ ಗಂಟೆಗಟ್ಟಲೆ ಉಪನ್ಯಾಸ ಬಿಗಿಯುತ್ತಿದ್ದರಂತೆ. ಒಂದು ದಿನ ವಿಶೇಷ ಸಮಾರಂಭವೊಂದಕ್ಕೆ ವಿದೇಶೀ ವಿಶ್ವವಿದ್ಯಾನಿಲಯದ ಮುಖ್ಯಸ್ಥರೊಬ್ಬರು ಅತಿಥಿಗಳಾಗಿ ಬರುವವರಿದ್ದರು. ಆ ದಿನದ ಕಾರ್ಯಕ್ರಮದ ವೇದಿಕೆ-ವ್ಯವಸ್ಥೆಯನ್ನು ಕಾಲೇಜಿನ ಪ್ರಾಚಾರ್ಯರು ತಾವೇ ಸ್ವತಃ ನಿಂತು ಮಾಡಿಸಿದ್ದರಂತೆ.

ದೀಪ ಬೆಳಗುವ ಕಾರ್ಯಕ್ರಮದಿಂದ ಉದ್ಘಾಟನೆಗೊಳ್ಳುವ ಕಾರ್ಯಕ್ರಮದಲ್ಲಿ ದೀಪ ಬೆಳಗುತ್ತಿರುವಾಗ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರು ಭಕ್ತಿಗೀತೆಯೊಂದನ್ನು ಹಾಡಿದರಂತೆ. ತಾವೇ ಹಚ್ಚಿದ ದೀಪವನ್ನು ಮತ್ತೆ ಮತ್ತೆ ನಿಂತು ನೋಡಿದ ವಿದೇಶೀ ಗಣ್ಯರು ಅದರ ಫೋಟೊಗಳನ್ನು ತೆಗೆದು ಕೊಡುವಂತೆ ಎದುರಿಗಿದ್ದ ಛಾಯಾಗ್ರಾಹಕನಲ್ಲಿ ವಿನಂತಿಸಿದರಂತೆ. ಜತೆಗೆ ತಮ್ಮ ಉಪನ್ಯಾಸದಲ್ಲಿ ದೀಪದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ How Beautiful..! ಎಂದು ಕೊನೆಯವರೆಗೂ ಉದ್ಗರಿಸುತ್ತಲೇ ಇದ್ದರಂತೆ. ದೀಪದಲ್ಲಿರುವ ದೈವತ್ವದ ಅರಿವು ಅವರಿಗಾಯ್ತೋ? ಇಲ್ಲವೋ ಗೊತ್ತಿಲ್ಲ ಆದರೆ ದೀಪವೆಷ್ಟು ಸುಂದರ, ಮನಮೋಹಕ ಮತ್ತು ಎಷ್ಟು ಸಂತೋಷದಾಯಕ ಎಂಬುದನ್ನು ಅವರು ಅರಿತಿದ್ದರು. ಸಭಾಂಗಣದಲ್ಲಿ ಕುಳಿತು ಅವರ ಉಪನ್ಯಾಸವನ್ನು ಕೇಳುತ್ತಿದ್ದ ದೀಪ ವಿರೋಧಿ-ಉಪನ್ಯಾಸಕರಿಗೆ ತನ್ನ ಬಗೆಗೇ ಕೀಳರಿಮೆ ಹುಟ್ಟಲು ಆರಂಭವಾಯ್ತಂತೆ.

ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬರಾಕ್‌ ಒಬಾಮಾ ತಮ್ಮ ಕಚೇರಿಯಲ್ಲಿ ಭಾರತೀಯ ಪುರೋಹಿತರಿಂದ ದೀಪವನ್ನು ಬೆಳಗಿ “ಅಗ್ನಿ ಮೀಳೇ ಪುರೋಹಿತಂ…’ ಎಂಬ ವೇದಮಂತ್ರವನ್ನು ಹೇಳಿಸಿ, ಕೇಳಿ ಖುಷಿಪಟ್ಟ ವಿಚಾರ ಜಗತ್ತಿನಾದ್ಯಂತ ಅನೇಕರಿಗೆ ತಿಳಿದಿದೆ. ಎಂದಾಗ ದೀಪದ ಮಹತ್ವ ಎಂಥದ್ದು ಎಂಬುದನ್ನು ನಾವು ಅರಿಯಬೇಕು.

ದೀಪಗಳಲ್ಲಿ ವೈವಿಧ್ಯವಿದೆ, ಜ್ಯೋತಿಗೆ ನಿಗದಿತ ಆಕಾರವಿಲ್ಲದಿದ್ದರೂ ದೀಪವನ್ನು ಹಚ್ಚುವ ಹಣತೆಗಳಲ್ಲಿ, ದೀಪದ ಕಾಲು-ಕಂಬಗಳಲ್ಲಿ ವೈವಿಧ್ಯಗಳನ್ನು ಕಾಣಬಹುದು. ದೀಪದ ಕಾಲು-ಕಂಬದ ಮೇಲೆ ಮರದ ಟೊಂಗೆಗಳಂತೆ ಟಿಸಿಲಾಗುವ ಆಕಾರಗಳಿದ್ದು ಹತ್ತಾರು ಹಣತೆಗಳು ಅಲ್ಲಿರಬಹುದು. ರಥದ ಆಕಾರದಲ್ಲಿ ಸುತ್ತಮುತ್ತ ಹಣತೆಗಳಿರುವ ದೀಪದ ಕಂಬವಿರಬಹುದು. ಸಾಲಾಗಿ ಹಚ್ಚುವ ದೀಪಗಳನ್ನು ನೋಡುವುದೇ ಕಣ್ಣಿಗೊಂದು ಹಬ್ಬ. ಅದಕ್ಕೆಂತಲೇ “ದೀಪಾವಳಿ’ ಎಂದೇ ಒಂದು ಹಬ್ಬವನ್ನು ಹೆಸರಿಸಿದರು.

ಮಿಥಿಲೆಯ ಜನಕನನ್ನು ಒಮ್ಮೆ ಒಂದು ಸಂದೇಹ ಬಲವಾಗಿ ಕಾಡಿತು. ರಾಜಗುರುಗಳಾದ ಯಾಜ್ಞವಲ್ಕéರನ್ನು ಕರೆಸಿದ ಆತ ಅವರಲ್ಲಿ ತನ್ನ ಸಮಸ್ಯೆಯನ್ನು ಹೇಳಿಕೊಂಡ. ಪುರುಷನಿಗೆ ನಿಜವಾದ ಜ್ಯೋತಿ ಯಾವುದು ಎಂಬುದೇ ಆತನ ಸಮಸ್ಯೆ. ಯಾಜ್ಞವಲ್ಕ್ಯರು ಉತ್ತರಿಸುತ್ತಲೇ ಹೋದರು: ಮೊದಲು ಆದಿತ್ಯನೆಂದರು, ಜನಕ ಕೇಳಿದ: “ಹಗಲಲ್ಲಿ ಸೂರ್ಯನಿರುತ್ತಾನೆ, ರಾತ್ರಿಯಲ್ಲಿ?’ ಚಂದ್ರ ಎಂಬ ಉತ್ತರ ಬಂತು. ಇಬ್ಬರೂ ಇಲ್ಲದಾಗ ಗುರುಗಳೇ? -ಅರಸ ಮತ್ತೆ ಕೇಳಿದ. ಅಗ್ನಿಯೇ ಜ್ಯೋತಿ ಎಂದರು ಗುರು ಯಾಜ್ಞವಲ್ಕ್ಯರು.

ಅಗ್ನಿಯೂ ಶಾಂತವಾದಾಗ ಯಾವುದು? ಎಂಬ ಜನಕನ ಪ್ರಶ್ನೆಗೆ ವಾಕ್‌, ಕತ್ತಲೆಯಲ್ಲಿ ಯಾವ ದಿಕ್ಕಿನಿಂದ ಪರಿಚಿತ ಧ್ವನಿ ಕೇಳಿಬರುವುದೋ ಆ ಕಡೆಗೆ ಮನುಷ್ಯ ಗಮನಕೊಡುತ್ತಾನಲ್ಲ, ಆಗ ಅದೇ ಜ್ಯೋತಿ. ಅಷ್ಟಕ್ಕೇ ಜನಕನಿಗೆ ಸಮಾಧಾನವಾಗಲಿಲ್ಲ, ಆತ ಮತ್ತೆ ಕೇಳಿದ: ಒಂದೊಮ್ಮೆ ಸೂರ್ಯ, ಚಂದ್ರ, ಅಗ್ನಿ, ವಾಕ್‌ ಯಾವುದೂ ಇಲ್ಲವಾದರೆ, ಪುರುಷ ಮಲಗಿ ನಿದ್ರಿಸುತ್ತಿದ್ದರೆ ಅಥವಾ ಕನಸು ಕಾಣುತ್ತಿದ್ದರೆ ಆಗ ಯಾವುದು ಜ್ಯೋತಿ? ಯಾಜ್ಞವಲ್ಕ್ಯರು ಉತ್ತರಿಸಿದರು: ಆಗ ಪುರುಷನಿಗೆ ಒಳಗಿನ ಆತ್ಮವೇ ಜ್ಯೋತಿ. ಜನಕ ಸುಮ್ಮನಿರುವನೇ ಆತ್ಮನ ಬಗ್ಗೆ ಕೇಳಿತಿಳಿದುಕೊಳ್ಳಲು ಆರಂಭಿಸಿದ: ಆತ್ಮನಾದರೂ ಯಾರು? ಆತ ಹೇಗಿದ್ದಾನೆ.

ಆತ್ಮನ ಸ್ವರೂಪವನ್ನು ಪದಗಳಲ್ಲಿ ವರ್ಣಿಸುವುದು ಬಹಳ ಕಷ್ಟ; ಅದು ಅನುಭವಕ್ಕೆ ನಿಲುಕುವ ವಿಷಯವೇ ಹೊರತು ಹೇಳಲು ಬರುವಂಥದ್ದಲ್ಲ. ಆದರೂ ಕ್ಲಿಷ್ಟವಾದ ವಿಷಯವನ್ನು ಸರಳವಾಗಿ ಸ್ವಲ್ಪದರಲ್ಲಿ ಹೋಲಿಕೆಯ ಮೂಲಕ ಯಾಜ್ಞವಲ್ಕéರು ತಿಳಿಸಿಕೊಟ್ಟರು. ಹೊರಗಿನ ವ್ಯವಹಾರಗಳಿಗೇ ಆಗಲಿ ಅಥವಾ ಮಾನಸಿಕ ಕ್ರಿಯೆಗಳಿಗಾಗಲೀ ಬೆಳಕೆಂಬುದು ಬೇಕೇ ಬೇಕು. ಬೆಳಕು ಸ್ವಯಂ ಪ್ರಕಾಶಗೊಳ್ಳುವಂಥದ್ದಿರಬೇಕು.

ಅಂತಹ ಬೆಳಕೇ ಪರಬ್ರಹ್ಮ, ಆತನೇ ಪರಂಜ್ಯೋತಿ. ಸೂರ್ಯ, ಚಂದ್ರ, ನಕ್ಷತ್ರ, ಬೆಂಕಿ, ವಿದ್ಯುತ್‌ಮಿಂಚು, ದೀಪ ಇವುಗಳೆಲ್ಲ ಪ್ರಾಕೃತಿಕವಾಗಿರುವ ಜ್ಯೋತಿಗಳು. ನಾವು ಮನೆಗಳಲ್ಲಿ ಹಚ್ಚುವ ದೀಪಗಳು ಆ ಪರಂಜ್ಯೋತಿಯ ಪ್ರತೀಕಗಳು. ಅವುಗಳನ್ನು ಪೂಜಿಸುವುದು, ಗೌರವಿಸುವುದು ಪರಂಜ್ಯೋತಿಗೆ ನಾವು ಸಲ್ಲಿಸಬಹುದಾದ ಪ್ರಾಥಮಿಕ ಪೂಜೆ. ಪ್ರತಿಯೊಂದು ಮಂಗಳ ಕಾರ್ಯದಲ್ಲಿ ಸ್ವಸ್ತಿಕ ಬರೆಯುವುದರಿಂದ ಭೂತಣ್ತೀವೂ ಮತ್ತು ಕಲಶ ಸ್ಥಾಪನೆಯಿಂದ ಜಲತಣ್ತೀವೂ ಅರ್ಚಿಸಲ್ಪಡುತ್ತದೆ.


ವಿದ್ಯಾಶ್ರೀ ಬಿ., ಬಳ್ಳಾರಿ ವಿ.ವಿ. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.