K.R. ಮಾರ್ಕೆಟ್‌ ನಲ್ಲಿ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ

ಬೆಂಗಳೂರಿನ ಹೆಸರಾಂತ ಕೃಷ್ಣರಾಜೇಂದ್ರ ಮಾರುಕಟ್ಟೆ ಭಾಗದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಅನಧಿಕೃತ ಮಳಿಗೆಗಳ ಬೃಹತ್‌ ತೆರವು ಕಾರ್ಯಾಚರಣೆ ಶುಕ್ರವಾರದಂದು ನಡೆಯಿತು. ಮಾರುಕಟ್ಟೆ ಸಂಕೀರ್ಣದ ಕೆಳ ಅಂತಸ್ತಿನಲ್ಲಿ ಅನಧಿಕೃತ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿತ್ತು. ಇವುಗಳ ನೆಲಸಮ ಆದೇಶದ ವಿರುದ್ಧ ಸ್ಥಳಿಯರು ಕೋರ್ಟ್‌ ಮೆಟ್ಟಿಲನ್ನೂ ಏರಿದ್ದರು. ಆದರೆ ಇದೀಗ ರಾಜ್ಯದ ಉಚ್ಛ ನ್ಯಾಯಾಲಯವು ಅನಧಿಕೃತ ಮಳಿಗೆಗಳ ತೆರವಿಗೆ ಆದೇಶ ನೀಡಿರುವುದರಿಂದ ಸ್ಥಳೀಯ ವ್ಯಾಪಾರಸ್ಥರ ವಿರೋಧದ ನಡುವೆಯೂ ಬೆಂಗಳೂರು ಮಹಾನಗರ ಪಾಲಿಕೆಯು ಇವುಗಳ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದೆ. ಬಿಗಿ ಪೊಲೀಸ್‌ ಭದ್ರತೆಯ ನಡುವೆ ಜೆಸಿಬಿಗಳು, ಲಾರಿ, ಟ್ರ್ಯಾಕ್ಟರ್‌ ಹಾಗೂ ಕಾರ್ಮಿಕರನ್ನು ಬಳಸಿಕೊಂಡು ಮಹಾನಗರ ಪಾಲಿಕೆಯು ಈ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದೆ.


ಹೊಸ ಸೇರ್ಪಡೆ

  • ಹೊಸದಿಲ್ಲಿ : ಭಾರತದ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್‌ ಗೊಗೊಯ್‌ ಅವರಿಂದು ಶನಿವಾರ ಸುಪ್ರೀಂ ಕೋರ್ಟಿನ ವಿಶೇಷ ಪೀಠದಲ್ಲಿದ್ದುಕೊಂಡು ತನ್ನ ವಿರುದ್ಧ...

  • ಇಂದು ನಿತ್ಯ ಹರಿದ್ವರ್ಣ ಕಾಡುಗಳಲ್ಲಷ್ಟೇ ಬೃಹತ್‌ ಗಾತ್ರದ ದೇವದಾರು, ತೇಗ, ಬೀಟೆ ಮೊದಲಾದ ಮರಗಳನ್ನು ಕಾಣಬಹುದು. ಆದರೆ ಸವಣೂರಿನ ಕಲ್ಮಠದಲ್ಲಿ ಸಾವಿರಾರು ವರ್ಷಗಳ...

  • Gadwall (Anas strepera) M -Duck + ಗದ್ವಾಲ್‌ ಬಾತನ್ನು ಚರ್ಲೆ ಅಥವಾ ಸರಳೆ ಬಾತು ಎಂದು ಕರೆಯಲಾಗುತ್ತದೆ. ಈ ಹಕ್ಕಿ, ನೀರಿನಲ್ಲಿ ಮುಳುಗಿ ಅಲ್ಲಿರುವ ಕ್ರಿಮಿ ಕೀಟಗಳನ್ನು ಬೇಟೆಯಾಡುತ್ತದೆ....

  • ವೃತ್ತಿಯಲ್ಲಿ ಶಿಕ್ಷಕರಾದ ಕಲ್ಯಾಣ್‌ ಕುಮಾರ್‌ ಅವರಿಗೆ ಪತ್ರಿಕೆ ಸಂಗ್ರಹಿಸುವ ಹವ್ಯಾಸ. ಇದು ಹುಟ್ಟಿದ್ದು ಪರ ಊರಿಗೆ ಪ್ರಯಾಣಿಸುವಾಗ . ಬೇಜಾರು ಕಳೆಯಲಿಕ್ಕೆ...

  • ಉದ್ದಾನ ವೀರಭದ್ರಸ್ವಾಮಿಗಳು ಈ ಆಂಜನೇಯನಿಗೆ ಲಿಂಗಧಾರಣೆ ಮಾಡಿದ್ದು, ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಇರುವುದು ಒಂದು ವಿಶೇಷ. ಸೊಂಟದಲ್ಲಿ ಕತ್ತಿ ಇರುವುದು...

  • ಅರಳಿಮರದ ಬುಡದಲ್ಲಿ ಕುಳಿತು ಸರ್ವಾಂತರ್ಯಾಮಿಯಾದ ಭಗವಂತನ ಸ್ವರೂಪವನ್ನು ಯೋಗಿಗಳಿಂದ ಕೇಳಿ ತಿಳಿದ ರೀತಿಯಲ್ಲೇ ಧ್ಯಾನ ಮಾಡತೊಡಗಿದ್ದರು. ಏಕಾಗ್ರಚಿತ್ತದಿಂದ...