ಶ್ರೀಲಂಕಾ ಬಾಂಬ್‌ ದಾಳಿ ಹಿನ್ನಲೆ : ಬೆಂಗಳೂರಿಗರಿಗೆ ಪೊಲೀಸ್‌ ಕಮಿಷನರ್‌ ಹೇಳಿದ್ದೇನು?

ಶ್ರೀಲಂಕಾದಲ್ಲಿ ಉಗ್ರಗಾಮಿಗಳು ನಡೆಸಿದ ಆತ್ಮಾಹುತಿ ದಾಳಿಗಳ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ನಗರದಲ್ಲಿರುವ ಎಲ್ಲಾ ಧರ್ಮೀಯರ ಪ್ರಾರ್ಥನಾ ಮಂದಿರಗಳು ಸೇರಿದಂತೆ ಹೊಟೇಲುಗಳು, ಪಾರ್ಕ್‌ಗಳು ಮತ್ತು ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಶಂಕಾಸ್ಪದ ವ್ಯಕ್ತಿಗಳ ಚಲನವಲನಗಳು ಅಥವಾ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ಸಂಬಂಧಪಟ್ಟ ವ್ಯಕ್ತಿಗಳಿಗೆ ಮತ್ತು ಸಾರ್ವಜನಿಕರಿಗೆ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಟಿ. ಸುನೀಲ್‌ ಕುಮಾರ್‌ ಅವರು ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿನ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಅಳವಡಿಸಿರುವ ಸಿಸಿಕೆಮರಾಗಳನ್ನು ಸುಸ್ಥಿಯಲ್ಲಿರಿಸುವಂತೆಯೂ ಕಮಿಷನರ್‌ ಅವರು ಸಂಬಂಧಪಟ್ಟವರ ಜೊತೆಗಿನ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಭದ್ರತಾ ವ್ಯವಸ್ಥೆಯಲ್ಲಿ ಸಾರ್ವಜನಿಕರು ಮತ್ತು ಸಂಬಂಧಪಟ್ಟವರು ಪೊಲೀಸರೊಂದಿಗೆ ಸಹಕರಿಸುವಂತೆ ಪೊಲೀಸ್‌ ಕಮಿಷನರ್‌ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಹೊಸ ಸೇರ್ಪಡೆ