COVID-19 ಉಚಿತ ಪರೀಕ್ಷೆಗೆ ದ.ಕ ಜಿಲ್ಲೆಗೆ 25,000 Rapid Antigen Test Kit ಸರಬರಾಜು
Team Udayavani, Jul 17, 2020, 6:59 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ ಕುರಿತು, ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ವಿಕಾಸಸೌಧದಲ್ಲಿ ಇಂದು ಡಿಸಿಎಂ ಅಶ್ವತ್ ನಾರಾಯಣ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತುರ್ತು ಸಭೆ ನಡೆಸಿದರು.
ಸಭೆಯ ನಂತರ ದ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಹಾಗೂ ಶಾಸಕರುಗಳಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಯು.ಟಿ.ಖಾದರ್ ಹಾಗೂ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಕೋವಿಡ್-19 ಸೋಂಕಿತರು, ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ, ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.
ಇನ್ನು ಮುಂದೆ ಕೋವಿಡ್ -19 ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್-19 ಟೆಸ್ಟ್ ಮಾಡಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಡಿಸಿಎಂ, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?