ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ
Team Udayavani, Jul 11, 2020, 4:32 PM IST
ಸುಬ್ರಹ್ಮಣ್ಯ : ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಪತ್ನಿ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಕೋವಿಡ್-19 ಸೋಂಕಿನ ಭೀತಿಯ ನಡುವೆಯೂ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಯಾವುದೇ ತೊಂದರೆ ಇಲ್ಲದೆ ನಿರ್ವಿಘ್ನವಾಗಿ ಮುಗಿಸಿದ ಹಿನ್ನಲೆಯಲ್ಲಿ ಕುಕ್ಕೆ ದೇವಳಕ್ಕೆ ಭೇಟಿ ನೀಡಿದರು.