ಕಾಪು ದಿವಾಕರ ಶೆಟ್ಟಿ ಅವರಿಂದ 450 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ
Team Udayavani, Apr 26, 2020, 8:19 PM IST
ಕಾಪು : ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ / ಕಾಪು ಸಿಎ ಬ್ಯಾಂಕ್ನ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರು ರವಿವಾರ ಕಾಪು ಪುರಸಭೆ ವ್ಯಾಪ್ತಿಯ ಕೈಪುಂಜಾಲು ಭಟತೋಟ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಂದಾಗಿ ಅನನುಕೂಲತೆಗೊಳಗಾದ ಕುಟುಂಬಗಳಿಗೆ ಪಡಿತರ ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭ ಮಾತನಾಡಿದ ಅವರು ಪುರಸಭೆ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಕಾಪು ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕರು, ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನ ಮತ್ತು ಮೂರನೇ ಮಾರಿಗುಡಿಯ ಸಿಬಂದಿಗಳು ಹಾಗೂ ಉಳಿಯಾರಗೋಳಿ, ಕೋತಲಕಟ್ಟೆ ಮತ್ತು ಭಟತೋಟ ವ್ಯಾಪ್ತಿಯ ಸುಮಾರು 450 ಕ್ಕೂ ಅಧಿಕ ಕುಟುಂಬಗಳಿಗೆ ಪಡಿತರ ಕಿಟ್ ಗಳನ್ನು ವಿತರಿಸಲಾಗಿದೆ ಎಂದರು. ಕಾಪು ಪುರಸಭೆ ಸದಸ್ಯ ಸುರೇಶ್ ದೇವಾಡಿಗ, ರಾಧಾರಮಣ ಶಾಸ್ತ್ರಿ, ಪ್ರಭಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು