“ಕೃಷ್ಣ ಟಾಕೀಸ್’ನಲ್ಲಿ ಅಜೇಯ್: ಸಸ್ಪೆನ್ಸ್-ಥ್ರಿಲ್ಲರ್ ಟೀಸರ್
Team Udayavani, Oct 16, 2019, 9:37 PM IST
ಅಜೇಯ್ ರಾವ್ ಅಭಿನಯದ “ಕೃಷ್ಣ ಟಾಕೀಸ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಎಲ್ಲೆಡೆಯಿಂದಲೂ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಕ್ಕೂ ವೀಕ್ಷಣೆಯಾಗಿದೆ. “ಇದೊಂದು ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ. ಸುಮಾರು ವರ್ಷಗಳ ಹಿಂದೆ ಲಕ್ನೋದ ಚಿತ್ರಮಂದಿರವೊಂದರಲ್ಲಿ ನಡೆದ ನೈಜ ಘಟನೆಯನ್ನಾಧರಿಸಿ ಈ ಚಿತ್ರ ಮಾಡಲಾಗಿದ್ದು, ಗೋಕುಲ ಎಂಟರ್ಟೈನರ್ ಬ್ಯಾನರ್ನಲ್ಲಿ ಗೋವಿಂದರಾಜು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವಿಜಯಾನಂದ್ ನಿರ್ದೇಶನ ಹಾಗೂ ವಿ. ಶ್ರೀಧರ್ ಸಂಭ್ರಮ್ ಸಂಗೀತವಿದೆ. ವಿಲಿಯಮ್ ಡೇವಿಡ್ ಛಾಯಾಗ್ರಹಣ ಮಾಡಿದರೆ, ಶ್ರೀಕಾಂತ್ ಸಂಕಲನವಿದೆ. ಚಿತ್ರದಲ್ಲಿ ಸಿಂಧು ಲೋಕನಾಥ್, ಚಿಕ್ಕಣ್ಣ, ಪ್ರಮೋದ್ ಶೆಟ್ಟಿ, ಪ್ರಕಾಶ್, ಶೋಭರಾಜ್, ಮಂಡ್ಯ ರಮೇಶ್, ನಿರಂತ್, ಯಶ್ ಶೆಟ್ಟಿ, ಉಮೇಶ್, ಶ್ರೀನಿವಾಸ ಪ್ರಭು, ಲಕ್ಷ್ಮೀಗೌಡ, ಯಮುನಾ, ಧರ್ಮೇಂದ್ರ ಅರಸ್, ಶಂಕರ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.