ಕೊನೆಗೂ ವಾಹನ ಸವಾರಿಗೆ ಮುಕ್ತಗೊಂಡ ಪಂಪ್ ವೆಲ್ ಫ್ಲೈ ಓವರ್
Team Udayavani, Jan 31, 2020, 11:50 PM IST
ಮಂಗಳೂರಿನ ಪಂಪ್ವೆಲ್ ಮೇಲ್ಸೇತುವೆಯು ಶುಕ್ರವಾರವಾರದಂದು ಲೋಕಾರ್ಪಣೆಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದರು.
600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿರುವ ಪಂಪ್ವೆಲ್ ಮೇಲ್ಸೇತುವೆ ನಿರ್ಮಾಣಕ್ಕೆ 2010ರಲ್ಲಿ ಚಾಲನೆ ನೀಡಲಾಗಿತ್ತು. ಈ ಮೇಲ್ಸೇತುವೆ ಲೋಕಾರ್ಪಣೆಗೆ ಕಳೆದೆರಡು ವರ್ಷಗಳಿಂದ ಹಲವು ಗಡುವುಗಳನ್ನು ಸಂಸದ ನಳಿನ್ಕುಮಾರ್ ಕಟೀಲು ನೀಡಿದ್ದರು.
ಆದರೆ ಅಂತಿಮವಾಗಿ ಕಳೆದ ಡಿಸೆಂಬರ್ನಲ್ಲಿ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಮಗಾರಿಯ ಮೇಲುಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿತ್ತು. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸಮಕ್ಷಮದಲ್ಲಿ ಗುತ್ತಿಗೆ ವಹಿಸಿಕೊಂಡಿರುವ ನವಯುಗ್ ಕಂಪೆನಿ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣ ಗೊಳಿಸುವ ವಾಗ್ದಾನ ಮಾಡಿತ್ತು. ಅದರಂತೆ ಇದೀಗ ಮೇಲ್ಸೇತುವೆಯು ಲೋಕಾರ್ಪಣೆಗೊಂಡಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ