ಚಾಮರಾಜನಗರ ಜಿಲ್ಲೆಗೆ ರಾಯಭಾರಿಯಾಗಿ ಪುನೀತ್ ರಾಜ್ಕುಮಾರ್ ಆಯ್ಕೆ
Team Udayavani, Mar 7, 2020, 9:17 PM IST
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳು ಹಾಗೂ ಅವಕಾಶಗಳನ್ನು ಬಳಸಿಕೊಂಡು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೈಗೊಳ್ಳಲಿರುವ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಬಿಂಬಿಸಲು ಖ್ಯಾತ ಚಲನಚಿತ್ರ ನಟ ಪುನೀತ್ ರಾಜ್ಕುಮಾರ್ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಲಿದ್ದಾರೆ.