ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ! ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ SealDown
Team Udayavani, Jul 18, 2020, 5:37 PM IST
ಬೆಳ್ಮಣ್: ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಿ ದರ್ಜೆಯ ಮಹಿಳಾ ನೌಕರರೋರ್ವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾದ ಕಾರಣ ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಆರೋಗ್ಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲು ನಿರ್ಧರಿಸಿಲಾಗಿದೆ. ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ನಂತರ ತೆರೆಯಲಾಗುವುದು ಎಂದು ವರದಿಯಾಗಿದೆ.