ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಗಂಗೊಳ್ಳಿಯಲ್ಲಿ ಎರಡು ಅಂಗಡಿ ಸಂಪೂರ್ಣ ಬೆಂಕಿಗಾಹುತಿ
Team Udayavani, Jul 7, 2020, 10:09 AM IST
ಕುಂದಾಪುರ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟುಹೋದ ಘಟನೆ ಇಂದು ಮುಂಜಾನೆ ಗಂಗೊಳ್ಳಿ ಪೇಟೆಯಲ್ಲಿ ನಡೆದಿದೆ.
ಪೇಟೆಯ ನೀರಿನ ಟ್ಯಾಂಕ್ ಬಳಿಯಿರುವ ಜಿ. ದಿನೇಶ್ ನಾಯಕ್ ಹಾಗೂ ಜಿ. ಪದ್ಮನಾಭ್ ನಾಯಕ್ ಅವರ ಅಂಗಡಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಎರಡೂ ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದೆ. 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಇಂದು ಬೆಳಗ್ಗಿನ ಜಾವ 3 ಸುಮಾರಿಗೆ ದುರ್ಘಟನೆ ನಡೆದಿದ್ದು, 3.40 ರ ಸುಮಾರಿಗೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು.
ಕಾರ್ಯಾಚರಣೆಯಲ್ಲಿ ಕುಂದಾಪುರ ಅಗ್ನಿ ಶಾಮಕ ಠಾಣಾಧಿಕಾರಿ ಕೆ.ಎನ್. ಮೊಗೇರ, ಸಿಬಂದಿಯಾದ ಕೆ.ಟಿ. ಗೌಡ, ನಾಗರಾಜ ಪೂಜಾರಿ, ಮಂಜುನಾಥ್ ಪೂಜಾರಿ, ಆನಂದ ಭಾಗಿಯಾಗಿದ್ದರು. ಗಂಗೊಳ್ಳಿ ಎಸ್ಐ ಭೀಮಾಶಂಕರ, ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ