ಉಡುಪಿ SSLC ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ
Team Udayavani, Jun 25, 2020, 12:44 PM IST
ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಇವರು ಭೇಟಿ ನೀಡಿ ಸರಕಾರದ ಮಾರ್ಗಸೂಚಿಯಂತೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಕುರಿತು ಶಿಕ್ಷಕರಲ್ಲಿ ಚರ್ಚಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿ ವಿದ್ಯಾರ್ಥಿಗಳು ಆತ್ಮ ಸ್ಥೈರ್ಯದಿಂದ ಪರೀಕ್ಷೆಯನ್ನು ಬರೆದು ಎಲ್ಲರೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಿಲ್ಪ ಜಿ ಸುವರ್ಣ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.