Up: ಕ್ರಿಕೆಟ್ ಆಡಿ ನೀರು ಕುಡಿದ ಬಾಲಕ: ಕುಸಿದು ಬಿದ್ದು ಸಾವು; ಹೃದಯಾಘಾತ ಶಂಕೆ
Team Udayavani, Dec 31, 2023, 1:29 PM IST
ಲಕ್ನೋ: ಕ್ರಿಕೆಟ್ ಆಡಿ ನೀರು ಕುಡಿದ ಬಳಿಕ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲ್ಮೋರಾ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ(ಡಿ.30 ರಂದು) ನಡೆದಿದ್ದು, ಹಸನ್ಪುರದ ಕಾಯಸ್ತಾನ್ನ 10ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಸೈನಿ ಎಂಬ ಬಾಲಕ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.
ಬಾಲಕ ಸೈನಿ ಕ್ರಿಕೆಟ್ ಆಡಿದ ಬಳಿಕ ನೀರು ಕುಡಿಯಲು ಬಂದಿದ್ದಾನೆ. ಕೋಲ್ಡ್ ನೀರು ಕುಡಿದಿದ್ದಾನೆ. ನೀರು ಕುಡಿದ ತಕ್ಷಣವೇ ಆತ ಪ್ರಜ್ಞೆ ತಪ್ಪಿದ್ದಾನೆ.
ಪ್ರಿನ್ಸ್ ಅವರ ಸ್ನೇಹಿತರು ವಿಚಾರವನ್ನು ಮನೆಯವರಿಗೆ ತಿಳಿಸಿದ್ದು,ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಪರೀಕ್ಷೆ ಮಾಡಿದ ವೈದ್ಯರು ಆದಾಗಲೇ ಆತ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಬಾಲಕನ ಸಾವಿಗೆ ಹೃದಯಾಘಾತವೇ ಕಾರಣವಿರಬಹದೆಂದು ಶಂಕಿಸಲಾಗಿದೆ. ಸದ್ಯ ಈ ಬಗ್ಗೆ ಪೋಷಕರು ದೂರು ದಾಖಲಿಸಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ