
Jaipur: ಚಲಿಸುತ್ತಿರುವ ಬೈಕ್ ನಲ್ಲಿ ಲಿಪ್ ಲಾಕ್ ಮಾಡಿದ ಜೋಡಿ; ವಿಡಿಯೋ ವೈರಲ್
Team Udayavani, Sep 16, 2023, 12:34 PM IST

ಜೈಪುರ: ಬೈಕ್ ನಲ್ಲಿ ಹೋಗುವಾಗ ಜೋಡಿಯೊಂದು ಲಿಪ್ ಲಾಕ್ ಮಾಡಿಕೊಂಡು ಹೋಗಿರುವ ವಿಡಿಯೋವೊಂದು ವೈರಲ್ ಆಗಿದೆ.
ರಾಜಸ್ಥಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಯುವ ಜೋಡಿಯೊಂದು ಬೈಕ್ ನಲ್ಲಿ ಸಂಚರಿಸುವ ವೇಳೆ ಯುವಕ ಯುವತ್ತಿಯತ್ತ ಕತ್ತು ತಿರುಗಿಸಿ ಆಕೆಯ ತುಟಿಗೆ ಮುತ್ತು ಕೊಟ್ಟಿದ್ದಾನೆ. ಲಿಪ್ ಲಾಕ್ ಮಾಡುತ್ತಾ ನಡುರಸ್ತೆಯಲ್ಲೇ ಈ ರೀತಿ ಸಂಚರಿಸುವುದನ್ನು ಬೇರೆ ಅವರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
ಟ್ರಾಫಿಕ್ ನಿಯಮ ಉಲ್ಲಂಘಿಸಿದ ಈ ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ವೈರಲ್ ವಿಡಿಯೋ ಕುರಿತು ಮಾಹಿತಿ ಪಡೆದ ನಂತರ ಹಿರಿಯ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕ್ರಮಕ್ಕೆ ಆದೇಶಿಸಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸವಾರನಿಗೆ ದಂಡ ವಿಧಿಸಲಾಗಿದೆ.
“ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತಿಯೊಬ್ಬರು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಇತರ ಚಟುವಟಿಕೆಗಳಲ್ಲಿ ತೊಡಗಿರುವ ವೀಡಿಯೊವನ್ನು ನಾವು ನೋಡಿದ್ದೇವೆ. ವೀಡಿಯೊದಲ್ಲಿ ನೋಡಿದ ನೋಂದಣಿ ಸಂಖ್ಯೆಯ ಆಧಾರದ ಮೇಲೆ ನಾವು ವಾಹನ ಮಾಲೀಕರ ಹೆಸರು ಮತ್ತು ವಿಳಾಸವನ್ನು ಪಡೆದುಕೊಂಡಿದ್ದೇವೆ ಮತ್ತು ಮೋಟಾರು ವಾಹನ ಕಾಯ್ದೆ (ಎಂವಿ) ಅಡಿಯಲ್ಲಿ ಕಾನೂನು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಜೈಪುರ ಸಂಚಾರ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್ ಗಡ್ಕರಿ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

Newspapers ಬಳಸಿ ಆಹಾರ ಪ್ಯಾಕ್ ಮಾಡದಿರಿ: ಎಫ್ಎಸ್‌ಎಸ್‌ಎಐ ಮನವಿ
MUST WATCH
ಹೊಸ ಸೇರ್ಪಡೆ

Asian Games ಇಂದಿನಿಂದ ಆ್ಯತ್ಲೆಟಿಕ್ಸ್ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್ ಚಿರಸ್ಥಾಯಿ