ಕೃಷಿ ಆಧಾರಿತ ಕೈಗಾರಿಕೆಗಳು ಯಾಕೆ ಬೇಕು?

ಕಡಿಮೆ ವೆಚ್ಚ ಹೊಂದಿರುವ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಬರಲು ಕಾರಣವಾಗುತ್ತದೆ.

Team Udayavani, Sep 1, 2021, 4:55 PM IST

ಕೃಷಿ ಆಧಾರಿತ ಕೈಗಾರಿಕೆಗಳು ಯಾಕೆ ಬೇಕು?

ಭಾರತದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳ ಬಗ್ಗೆ ತಿಳಿದಿರಬಹುದು ಆದರೆ ಅದು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ ಮತ್ತು ಅದರಿಂದ ಯಾವೆಲ್ಲಾ ರೀತಿಯ ಅನುಕೂಲಗಳಿವೆ ಎಂಬುದನ್ನು ತಿಳಿದುಕೊಳ್ಳಬೇಕು.

ಕೃಷಿ ಆಧಾರಿತ ಕೈಗಾರಿಕೆಗಳು ಯಾಕೆ ಬೇಕು?
ಈ ಕೈಗಾರಿಕೆಗಳು ಬಹಳ ಮುಖ್ಯ, ಏಕೆಂದರೆ ಅವು ಕೈಗಾರಿಕಾ ಉತ್ಪನ್ನಗಳನ್ನು, ವಿದೇಶಿ ವಿನಿಮಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಆದಾಯ ಮಟ್ಟವನ್ನು ಹೆಚ್ಚಿಸಿ ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ನೀಡುತ್ತದೆ. ಈ ಕೃಷಿ ಆಧಾರಿತ ಕೈಗಾರಿಕೆಗಳು ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಕಾರಣವಾಗಿದೆ. ಈ ಕೈಗಾರಿಕೆಗಳಿಂದ ರೈತರ ಆದಾಯದಲ್ಲಿ ಏರಿಕೆ ಕಂಡು ಬರುವುದಲ್ಲದೆ ಮಾರುಕಟ್ಟೆಯ ವಿಸ್ತರಣೆಗೆ ಸುಗಮವಾಗುತ್ತದೆ.

ಭಾರತೀಯ ಆರ್ಥಿಕತೆಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳ ಪಾತ್ರ ಕೃಷಿ ಆಧಾರಿತ ಕೈಗಾರಿಕೆಗಳು ಜಿಡಿಪಿಯ ಬೆಳವಣಿಗೆಗೆ ಕಾರಣವಾಗುವುದಲ್ಲದೆ ಕೃಷಿಯ ಉತ್ತೇಜನಕ್ಕೆ ಅವು ಸಹಾಯ ಮಾಡುತ್ತದೆ. ಕಡಿಮೆ ವೆಚ್ಚ ಹೊಂದಿರುವ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಬರಲು ಕಾರಣವಾಗುತ್ತದೆ.

ಆ್ಯಗ್ರೋ ಆಧಾರಿತ ಕೈಗಾರಿಕೆಗಳಲ್ಲಿ ಸಕ್ಕರೆ, ಕಾಗದ, ಜವಳಿ, ಎಣ್ಣೆ ಹೀಗೆ ಹತ್ತು ಹಲವಾರು ರೀತಿಯ ಉದ್ಯಮಗಳಿದ್ದು ಈ ಕೈಗಾರಿಕೆಗಳು ಕೃಷಿ ಉತ್ಪನ್ನಗಳನ್ನು ತಮ್ಮ ಕಚ್ಚಾವಸ್ತುಗಳನ್ನಾಗಿ ಬಳಸಿಕೊಳ್ಳುತ್ತದೆ. ಈ ಸಂಘಟಿತ ವಲಯದಲ್ಲಿ ಜವಳಿ ಉದ್ಯಮ ಅತಿದೊಡ್ಡದ್ದಾಗಿದ್ದು, ಇದರಲ್ಲಿ ಹತ್ತಿ, ಉಣ್ಣೆ, ರೇಷ್ಮೆ, ಸೆಣಬು. ಸಂಶ್ಲೇಷಿತ ನಾರುಗಳ ಜವಳಿ ಉದ್ಯಮವನ್ನು ಹೊಂದಿದೆ. ಪ್ರಸ್ತುತ ದೇಶದಲ್ಲಿ 1600ಕ್ಕೂ ಹೆಚ್ಚು ಹತ್ತಿ ಮತ್ತು ಮಾನವ ನಿರ್ಮಿತ ಫೈಬರ್‌ ಗಿರಣಿಗಳಿವೆ. ಇವುಗಳಲ್ಲಿ ಶೇ. 80ರಷ್ಟು ಖಾಸಗಿ ವಲಯದಲ್ಲಿದ್ದರೆ ಇನ್ನುಳಿದವು ಸಾರ್ವಜನಿಕ ಮತ್ತು ಸಹಕಾರಿ ವಲಯದಲ್ಲಿದೆ. ಇವುಗಳಲ್ಲಿ ನಾಲ್ಕರಿಂದ ಹತ್ತು ಮಗ್ಗಗಳನ್ನು ಹೊಂದಿರುವ ಕಾರ್ಖಾನೆ ಸಣ್ಣ ಪ್ರಮಾಣದ್ದಾಗಿದೆ. ಸಾವಿರಾರು ಜನರಿಗೆ ಉದ್ಯೋಗ ನೀಡುವಲ್ಲಿ ಇದು ಸಫ‌ಲವಾಗಿದೆ.

ಭಾರತವು ಸ್ಪಿನ್ನಿಂಗ್‌ನಲ್ಲಿ ವಿಶ್ವ ದರ್ಜೆಯ ಉತ್ಪಾದನೆಯನ್ನು ಹೊಂದಿದೆ. ಹತ್ತಿ ನೂಲಿನ ವ್ಯಾಪಾರದಲ್ಲಿ ನಮಗೆ ಹೆಚ್ಚಿನ ಪಾಲಿದ್ದು, ವ್ಯಾಪಾರದ ನಾಲ್ಕನೇ ಒಂದು ಭಾಗವಾಗಿದೆ. ಆದರೆ ದೊಡ್ಡ ದೊಡ್ಡ ಕಾರ್ಖಾನೆಗಳಿಂದಾಗಿ ಸ್ಥಳೀಯ ಮಾರುಕಟ್ಟೆಗಳಿಗೆ ದೊಡ್ಡ ನ್ಯೂನತೆಯಾಗಿ ಪರಿಣಮಿಸಿದೆ.

ಇನ್ನು ಸೆಣಬಿನ ಸರಕುಗಳ ಉತ್ಪಾದನೆಯಲ್ಲಿ ಅತಿದೊಡ್ಡ ಉತ್ಪಾದಕ ಮತ್ತು ಬಾಂಗ್ಲಾದೇಶದ ಅನಂತರ ರಫ್ತುದಾರರಾಗಿ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಸುಮಾರು 70 ಸೆಣಬಿನ ಗಿರಣಿಗಳಿವೆ. ಸಕ್ಕರೆ ಉತ್ಪಾದನೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ 460ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳಿವೆ.

-ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.