ದಾಲ್‌ ತಡ್ಕಾ …ಬಟರ್‌ ನಾನ್‌ ಮನೆಯಲ್ಲೇ ಸರಳವಾಗಿ ಮಾಡಬಹುದು…

ಈರುಳ್ಳಿ, ಟೊಮೆಟೋ ಮತ್ತು ಕೊತ್ತಂಬರಿ ಸೊಪ್ಪನ್ನು ಚಿಕ್ಕದಾಗಿ ಹೆಚ್ಚಿಟ್ಟುಕೊಳ್ಳಿ.

Team Udayavani, Mar 3, 2022, 4:12 PM IST

ದಾಲ್‌ ತಡ್ಕಾ …ಬಟರ್‌ ನಾನ್‌ ಮನೆಯಲ್ಲೇ ಸರಳವಾಗಿ ಮಾಡಬಹುದು…

ದಾಲ್‌ ತಡ್ಕಾ ಭಾರತದ ಪ್ರಸಿದ್ಧ ಪಾಕವಿಧಾನಗಳಲ್ಲಿ ಒಂದಾಗಿದೆ. ಇದು ತಂದೂರಿ ರೋಟಿ,ಬಟರ್‌ ನಾನ್‌ ಹಾಗೂ ಅನ್ನದ ಜೊತೆ ಪದಾರ್ಥವಾಗಿ ಹೆಚ್ಚಿನ ಜನರು ಇಷ್ಟಪಡುತ್ತಾರೆ. ದಾಲ್‌ ತಡ್ಕಾವನ್ನು ಸರಳವಾಗಿ ನೀವು ಮನೆಯಲ್ಲೇ ಮಾಡಿಕೊಳ್ಳಬಹುದು.

ಬಿಸಿ-ಬಿಸಿಯಾದ ಬಟರ್‌ ನಾನ್‌ ಜೊತೆಗೆ ದಾಲ್‌ ತಡ್ಕಾ ಸವಿಯಲು ಬಹಳ ರುಚಿಕರವಾಗಿರುತ್ತದೆ. ಬಟರ್‌ ನಾನ್‌ -ದಾಲ್‌ ತಡ್ಕಾವನ್ನು ಸವಿಯಲು ಹೋಟೆಲ್‌ಗ‌ಳಿಗೆ ಹೋಗುವ ಅಗತ್ಯವಿಲ್ಲ ಬದಲಿಗೆ ಮನೆಯಲ್ಲಿಯೇ ಸರಳವಾಗಿ ಮಾಡಿ ಕುಟುಂಬದವರೊಂದಿಗೆ ಬಟರ್‌ ನಾನ್‌-ದಾಲ್‌ ತಡ್ಕಾವನ್ನು ಸವಿಯಿರಿ. ಈ ರೆಸಿಪಿಯನ್ನು ಹೇಗೆ ಮಾಡುವುದೆಂದು ತಿಳಿದುಕೊಳ್ಳೋಣ…

ಬೇಕಾಗುವ ಸಾಮಗ್ರಿಗಳು
ತೊಗರಿಬೇಳೆ 2 ಕಪ್‌, ಅರಶಿನ ಪುಡಿ ಸ್ವಲ್ಪ, ಜೀರಿಗೆ 1 ಚಮಚ, ಹಸಿಮೆಣಸು 5, ಬೆಳ್ಳುಳ್ಳಿ 4 ರಿಂದ 5 ಎಸಳು, ಒಣಮೆಣಸು 5, ಈರುಳ್ಳಿ 2, ತೆಂಗಿನೆಣ್ಣೆ 4 ಚಮಚ, ಕರಿಬೇವು-ಸ್ವಲ್ಪ, ಶುಂಠಿ 1 ಇಂಚು, ಧನಿಯಾ ಪುಡಿ 2 ಚಮಚ, ಗರಂ ಮಸಾಲ 1 ಚಮಚ, ಟೊಮೆಟೋ 2, ಕೊತ್ತಂಬರಿ ಸೊಪ್ಪು-ಸ್ವಲ್ಪ, ತುಪ್ಪ 1 ಚಮಚ, ಅಚ್ಚಖಾರದ ಪುಡಿ 1 ಚಮಚ, ಸಾಸಿವೆ 1 ಚಮಚ, ಉಪ್ಪು-ರುಚಿಗೆ.

ಮಾಡುವ ವಿಧಾನ
ತೊಗರಿಬೇಳೆಯನ್ನು ಸುಮಾರು 1ಗಂಟೆಗಳ ಕಾಲ ನೆನೆಸಿರಿ. ನಂತರ ಬೇಳೆಯನ್ನು ಚೆನ್ನಾಗಿ ತೊಳೆದು 4 ಕಪ್‌ ನೀರು,1 ಚಮಚ ಅರಿಶಿನ ಮತ್ತು 1 ಚಮಚ ಎಣ್ಣೆಯನ್ನು ಸೇರಿಸಿ ಕುಕ್ಕರ್‌ ನಲ್ಲಿ 3 ರಿಂದ 4 ವಿಸಿಲ್‌ ಹಾಕಿಸಿ.ತದನಂತರ ಬೇಳೆಯನ್ನು ಒಂದು ಬೌಲ್‌ ಗೆ ವರ್ಗಾಯಿಸಿ ಚೆನ್ನಾಗಿ ಮಿಕ್ಸ್‌ ಮಾಡಿ. ಶುಂಠಿ,ಬೆಳ್ಳುಳ್ಳಿ, ಈರುಳ್ಳಿ, ಟೊಮೆಟೋ ಮತ್ತು ಕೊತ್ತಂಬರಿ ಸೊಪ್ಪನ್ನು ಚಿಕ್ಕದಾಗಿ ಹೆಚ್ಚಿಟ್ಟುಕೊಳ್ಳಿ.

ಒಂದು ಪ್ಯಾನ್‌ ತೆಗೆದುಕೊಂಡು ಅದರಲ್ಲಿ 4 ರಿಂದ 5 ಚಮಚ ಎಣ್ಣೆಯನ್ನು ಹಾಕಿ ಅದು ಬಿಸಿಯಾದಾಗ ಬೆಳ್ಳುಳ್ಳಿ, ಶುಂಠಿ, ಹಸಿಮೆಣಸು, ಜೀರಿಗೆ, ಕರಿಬೇವು, ಒಣಮೆಣಸು ಹಾಕಿ ಸ್ವಲ್ಪ ಹೊತ್ತು ಹುರಿಯಿರಿ. ಆಮೇಲೆ ಈರುಳ್ಳಿಯನ್ನು ಹಾಕಿ 1 ನಿಮಿಷಗಳವರೆಗೆ ಹುರಿಯಿರಿ.ನಂತರ ಅದಕ್ಕೆ ಟೊಮೆಟೋ ಮತ್ತು ಸ್ವಲ್ಪ ಉಪ್ಪನ್ನು ಸೇರಿಸಿ ಮಿಕ್ಸ್‌ ಮಾಡಿ ಟೊಮೆಟೋ ಬೆಂದು ಮೆದುವಾಗುವವರೆಗೂ ಸಣ್ಣ ಉರಿಯಲ್ಲಿ ಹುರಿಯುತ್ತೀರಿ.ಇದಕ್ಕೆ ಅರಿಶಿನ,ಧನಿಯಾ ಪುಡಿ, ಗರಂ ಮಸಾಲ ಪುಡಿಯನ್ನು ಸೇರಿಸಿ 1ನಿಮಿಷ ಹುರಿಯಿರಿ.ಈಗ ಇದಕ್ಕೆ ಮೊದಲೇ ಬೇಯಿಸಿಟ್ಟ ಬೇಳೆ, ಕೊತ್ತಂಬರಿ ಸೊಪ್ಪು ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಮಿಕ್ಸ್‌ ಮಾಡಿ 4 ರಿಂದ 5 ನಿಮಿಷದ ವರೆಗೆ ಚೆನ್ನಾಗಿ ಕುದಿಸಿರಿ.

ಒಗ್ಗರಣೆ:
ಒಗ್ಗರಣೆ ಪಾತ್ರೆಗೆ 2 ರಿಂದ 3 ಚಮಚ ಎಣ್ಣೆಯನ್ನು ಹಾಕಿ ಅದು ಬಿಸಿಯಾದ ನಂತರ ಸಾಸಿವೆ,ಜೀರಿಗೆ, ಕರಿಬೇವು, ಒಣಮೆಣಸು, ಅಚ್ಚಖಾರದ ಪುಡಿಯನ್ನು ಸೇರಿಸಿ ಒಗ್ಗರಣೆಯನ್ನು ಮಾಡಿ ದಾಲ್‌ ಗೆ ಹಾಕಿದರೆ ದಾಲ್‌ ತಡಾR ರೆಡಿ. ರುಚಿಯಾದ ದಾಲ್‌ ತಡ್ಕಾ ಅನ್ನು ನೀವೂ ಒಮ್ಮೆ ಮಾಡಿ ಸವಿಯಿರಿ. ಇದು ಅನ್ನ ಹಾಗೂ ತಂದೂರಿ ರೋಟಿ, ಬಟರ್‌ ನಾನ್‌ ಜೊತೆಗೆ ಸವಿಯಲು ಬಹಳ ರುಚಿಕರ.

ಬಟರ್‌ ನಾನ್‌  ಬೇಕಾಗುವ ಸಾಮಗ್ರಿಗಳು
ಮೈದಾ 1/2 ಕೆ.ಜಿ., ಹಾಲಿನ ಪುಡಿ 2 ಚಮಚ, ಅಡುಗೆ ಸೋಡಾ ಸ್ವಲ್ಪ, ಮೊಸರು 1 ಕಪ್‌, ಬೆಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.

ಮಾಡುವ ವಿಧಾನ
ಮೈದಾ ಹಿಟ್ಟನ್ನು ಚೆನ್ನಾಗಿ ಜರಡಿ ಇಟ್ಟುಕೊಳ್ಳಿ. ನಂತರ ಒಂದು ಅಗಲವಾದ ಪಾತ್ರೆಯಲ್ಲಿ ಮೈದಾ ಹಿಟ್ಟು, ಹಾಲಿನ ಪುಡಿ, ಅಡುಗೆ ಸೋಡಾ, ಮೊಸರು, ಉಪ್ಪು ಸೇರಿಸಿ ಚೆನ್ನಾಗಿ ಕಲಸಿ ಬೇಕಿದ್ದರೆ ಸ್ವಲ್ಪ ನೀರನ್ನು ಹಾಕಿಕೊಳ್ಳಬಹುದು. ಹಿಟ್ಟನ್ನು ಚಪಾತಿ ಹಿಟ್ಟಿನಂತೆ ಕಲಸಿ ಸುಮಾರು 2ರಿಂದ 3ಗಂಟೆಗಳ ಕಾಲ ಹಾಗೇ ಇಡಿ. ಆಮೇಲೆ ಹಿಟ್ಟನ್ನು ಉಂಡೆಗಳನ್ನಾಗಿ ಮಾಡಿಕೊಂಡು ಚಪಾತಿಯಂತೆ ಲಟ್ಟಿಸಿ ಬೆಣ್ಣೆಯಿಂದ ಕಾಯಿಸಿದರೆ ಬಿಸಿಬಿಸಿಯಾದ ಬಟರ್‌ ನಾನ್‌ ಸವಿಯಿರಿ ಇದು ದಾಲ್‌ ತಡ್ಕಾ ಜೊತೆಗೆ ತಿನ್ನಲು ಬಹಳ ರುಚಿಕರವಾಗುವುದು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.