ಸಣ್ಣ ಮಕ್ಕಳಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು

ಸಣ್ಣ ಮಕ್ಕಳ ಆರೋಗ್ಯ ಬಗೆಗೆ ಹೆಚ್ಚಿನ ಗಮನ ವಹಿಸಿ

ಕಾವ್ಯಶ್ರೀ, Oct 3, 2022, 5:45 PM IST

Web–Kavya

ಆರೋಗ್ಯ ಎನ್ನುವುದು ಎಲ್ಲರಿಗೂ ಮುಖ್ಯ. ದೇಹ ಆರೋಗ್ಯವಂತ ಸ್ಥಿತಿಯಲ್ಲಿದ್ದರೆ ಮಾತ್ರ ದಿನನಿತ್ಯದ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಸಾಧ್ಯ. ಅದು ಮಕ್ಕಳ ವಿಷಯದಲ್ಲಿಯೂ ಅನ್ವಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಅಂತೂ ಒಂದಲ್ಲ ಒಂದು ರೋಗಗಳನ್ನು ಎಲ್ಲಾ ಜೀವಿಗಳಿಗೂ ಭಾಧಿಸುತ್ತಲೇ ಇರುತ್ತವೆ. ಸಾಂಕ್ರಾಮಿಕ ಕಾಯಿಲೆಗಳಿಂದ ಆರೋಗ್ಯವನ್ನು ರಕ್ಷಿಸಿಕೊಳ್ಳುವುದು ಸ್ವಲ್ಪ ಕಷ್ಟದ ಕೆಲಸ. ವ್ಯಾಕ್ಸಿನೇಷನ್ ಬಂದ ಬಳಿಕ ಇತ್ತೀಚೆಗೆ ಕೊರೋನಾ ಅಬ್ಬರ ಕಡಿಮೆಯಾಗುತ್ತಿದೆ. ಆದರೂ ಆತಂಕ ಮಾತ್ರ ಕಡಿಮೆಯಾಗಿಲ್ಲ. ಇಲ್ಲಿ ಹೇಳಲು ಹೊರಟಿರುವುದು ಮಕ್ಕಳ ಆರೋಗ್ಯದ ಕುರಿತು.

ಮಕ್ಕಳ ಆರೋಗ್ಯ ಬಹಳ ಸೂಕ್ಷ್ಮವಾಗಿರುತ್ತದೆ. ಅವರಿಗೆ ಸ್ವಲ್ಪ ವ್ಯತ್ಯಾಸವಾದರೂ ಸಾಕು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅಲ್ಲದೇ, ತಮಗೆ ಏನಾಗುತ್ತಿದೆ ಎಂಬುದನ್ನ ಹೇಳಲು ಅವರಿಗೆ ತಿಳಿಯುವುದಿಲ್ಲ. ಹಾಗಾಗಿ ನಿಮ್ಮ ಮಕ್ಕಳಲ್ಲಿ ಆರೋಗ್ಯದ ವ್ಯತ್ಯಾಸದ ಬಗ್ಗೆ ಗಮನಿಸಿ.

ಚಿಕ್ಕ ಮಕ್ಕಳು ಪದೇ ಪದೇ ಅನಾರೋಗ್ಯ ಪೀಡಿತರಾಗುತ್ತಿರುತ್ತಾರೆ. ಆಟವಾಡುತ್ತಾ, ಕೈ-ಕಾಲುಗಳಿಗೆ ಗಾಯ ಮಾಡಿಕೊಳ್ಳವುದು.. ವಾಟರ್ ಇನ್ ಫೆಕ್ಷನ್, ಫುಡ್ ಇನ್ ಫೆಕ್ಷನ್,  ಮುಂತಾದ ರೋಗಗಳು ಬರುತ್ತವೆ.

ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ಹಲವು ಕಾರಣಗಳಿವೆ. ಆಹಾರ, ಜೀವನ ಶೈಲಿ ಒಂದು ರೀತಿಯಲ್ಲಿ ಕಾರಣವಾದರೆ ಮಕ್ಕಳು ಇರುವ ವಾತಾವರಣ ಕೂಡ ಆರೋಗ್ಯ ಹಾಳಾಗಲು ಕಾರಣವಾಗುತ್ತದೆ. ಇದನ್ನು ಹೊರತುಪಡಿಸಿ ಇನ್ನೂಂದಿಷ್ಟು ಕಾರಣಗಳಿಂದ ಮಕ್ಕಳು ಆಗಾಗ ಹುಷಾರಿಲ್ಲದಂತೆ ಆಗುತ್ತಾರೆ. ಆ ಬಗೆಗಿನ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.

ಪೌಷ್ಟಿಕಾಂಶಗಳ ಕೊರತೆ:

ಶಾಲೆಗೆ ಹೋಗುವ ಅವಸರದಲ್ಲಿ ಆಹಾರವನ್ನು ಸರಿಯಾಗಿ ಸೇವಿಸದೆ ಇರುವುದು. ಇದರಿಂದಾಗಿ ಪೌಷ್ಟಿಕಾಂಶಗಳ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರ ಪರಿಣಾಮವಾಗಿ ಆಗಾಗ ಶೀತ, ಕೆಮ್ಮು, ಜ್ವರದಂತಹ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಹವಾಮಾನ ಬದಲಾವಣೆ ಸಂದರ್ಭದಲ್ಲಿ ಕೂಡ ಮಕ್ಕಳು ಅನಾರೋಗ್ಯ ಪೀಡಿತರಾಗುತ್ತಾರೆ. ಕಲುಷಿತ ನೀರು ಕುಡಿಯುವುದು, ಸ್ವಚ್ಛತೆಯ ಕೊರತೆಯಿಂದಾಗಿ ದೇಹದಲ್ಲಿ ಪ್ರತಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದನ್ನು ತಪ್ಪಿಸಲು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ಸ್ವಚ್ಛತೆ ಕಡೆಗೆ ಮಕ್ಕಳು ಹೆಚ್ಚು ಗಮಹರಿಸುವಂತೆ ನೋಡಿಕೊಳ್ಳಬೇಕು.   ಮಕ್ಕಳು ಸದಾ ಚಟುವಟಿಕೆಯಿಂದ ಇದ್ದರೆ ಹೆಚ್ಚು ಆರೋಗ್ಯವಂತರಾಗಿರುತ್ತಾರೆ. ಚಟುವಟಿಕೆ ಇಲ್ಲದಿದ್ದರೆ ಜಡತ್ವದಿಂದ ಅವರ ದೇಹಕ್ಕೂ ಅನೇಕ ಅನಾರೋಗ್ಯ ಸಮಸ್ಯೆಗಳು ಕಾಡುತ್ತದೆ.

ಸರಿಯಾದ ನಿದ್ರೆ:

ನಿರ್ಧಿಷ್ಟ ಸಮಯ ಸರಿಯಾಗಿ ನಿದ್ರಿಸುವುದು ಮುಖ್ಯ. ಇಂದಿನ ದಿನಗಳಲ್ಲಿ ಚಿಕ್ಕ ಮಕ್ಕಳೂ ಕೂಡ ಮೊಬೈಲ್‌, ಟಿವಿಗೆ ಅವಲಂಭಿತರಾಗಿರುತ್ತಾರೆ. ಮಧ್ಯರಾತ್ರಿ ಕಳೆದರೂ ಮೊಬೈಲ್‌ ನೋಡುವುದು ಹವ್ಯಾಸವಾಗಿಬಿಟ್ಟಿರುತ್ತದೆ. ಇದರಿಂದ ಸರಿಯಾಗಿ ನಿದ್ದೆ ಆಗುವುದಿಲ್ಲ. ಮಕ್ಕಳ ಆರೋಗ್ಯ ಸರಿಯಾಗಿರಬೇಕೆಂದರೆ ದಿನದ 9 ಗಂಟೆಗಳ ಕಾಲ ನಿದ್ದೆ ಅಗತ್ಯವಾಗಿರುತ್ತದೆ. ನಿದ್ದೆ ಕಡಿಮೆಯಾದಂತೆ ಅನಾರೋಗ್ಯ ಸಂಭವಿಸುತ್ತದೆ. ಕಣ್ಣಿನ ಸಮಸ್ಯೆ, ತಲೆನೋವು, ಓದಿನಲ್ಲಿ ಆಸಕ್ತಿ ಕಳೆದುಕೊಳ್ಳುವುದು, ಖಿನ್ನತೆ ಹೀಗೆ ಹಲವು ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದೇ ಕಾರಣದಿಂದ ದೇಹದಲ್ಲಿ ಶಕ್ತಿ ಇಲ್ಲದಂತಾಗಿ ಸುಸ್ತು, ಬಳಲಿಕೆ ಕಾಡುತ್ತದೆ.

ಸೇವಿಸುವ ಆಹಾರ:

ಇಂದಿನ ಯುವ ಪೀಳಿಗೆಯ ಮಕ್ಕಳಿಗೆ ಹಣ್ಣು ತರಕಾರಿಗಳಿಗಿಂತ ಪಿಜ್ಜಾ, ಬರ್ಗರ್‌ಗಳಂತಹ ಜಂಕ್‌ಫುಡ್‌ಗಳೇ ಇಷ್ಟವಾಗುತ್ತವೆ. ಇದರ ಪರಿಣಾಮ ಅನಾರೋಗ್ಯ ಕಾಡುತ್ತದೆ. ಶಾಲೆಗೆ ತೆರಳುವಾಗಲೂ ಸರಿಯಾದ ಆಹಾರ ಪದ್ಧತಿ ಪಾಲಿಸದಿದ್ದರೆ ಹುಷಾರಿಲ್ಲದಂತೆ ಆಗುವುದು ಸಾಮಾನ್ಯ. ಮಧ್ಯಾಹ್ನ ಹೊತ್ತಲ್ಲಿ ಶಾಲೆಗೆ ಬಾಕ್ಸ್ ತೆಗೆದುಕೊಂಡು ಹೋಗುವಾಗ ಕರಿದ ಪದಾರ್ಥಗಳನ್ನು ಕೊಡಬಾರದು.  ಮಧ್ಯಾಹ್ನ ಸಮಯ ಕರಿದ ಪದಾರ್ಥಗಳು ತಿನ್ನುವುದು ಹಸಿದ ಹೊಟ್ಟೆಗೆ ವಿಷ ನೀಡಿದಂತೆ ಎನ್ನುತ್ತಾರೆ ಆಹಾರ ತಜ್ಞರು. ಅದಕ್ಕಾಗಿ ಆಹಾರದಲ್ಲಿ ತರಕಾರಿಗಳನ್ನು ಹೆಚ್ಚಾಗಿ ಬಳಸಬೇಕು. ಶುಚಿ, ರುಚಿಯಾದ ಆಹಾರ ಮಾಡಿಕೊಟ್ಟರೆ ಮಕ್ಕಳಿಗೆ ರುಚಿಗೂ ಆರೋಗ್ಯಕ್ಕೂ ಒಳ್ಳೆಯದು.

ಮಕ್ಕಳ ಆರೋಗ್ಯವನ್ನು ಕಾಪಾಡುವಲ್ಲಿ ಪೋಷಕರ ಪಾತ್ರ ಮಹತ್ವದ್ದು. ಮಕ್ಕಳಿಗೆ ಶುಚಿತ್ವ, ಆರೋಗ್ಯದ ಬಗೆಗಿನ ಸೂಕ್ಷ್ಮ ವಿಚಾರಗಳನ್ನು ಮಕ್ಕಳಿಗೆ ತಿಳಿಸಿ ಕೊಡುವುದು ಮುಖ್ಯ. ಸಾಮಾನ್ಯವಾಗಿ ಶಾಲೆಗೆ ಹೋಗುವ ಚಿಕ್ಕ ಮಕ್ಕಳು ವರ್ಷದಲ್ಲಿ ಹಲವಾರು ಬಾರಿ ಶೀತಕ್ಕೆ ಒಳಗಾಗುತ್ತಾರೆ. ಅದಕ್ಕೆ ಹೆದರುವ ಅಗತ್ಯವಿಲ್ಲ. ಸರಿಯಾದ ಚಿಕಿತ್ಸೆ ಮತ್ತು ಆರೈಕೆ ಮೊದಲ ಆದ್ಯತೆಯಾಗಿರಲಿ. ಹವಾಮಾನ ಬದಲಾವಣೆಗಳಿಂದಾಗಿ ಮಕ್ಕಳು ಕೆಲವೊಮ್ಮೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇಂತಹ ಸಂದರ್ಭಗಳಲ್ಲಿ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.

– ಕಾವ್ಯಶ್ರೀ

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.