ಏನಿದು ಹೈಪೋಗ್ಲೈಸೀಮಿಯಾ: ಲಕ್ಷಣಗಳು ಮತ್ತು ಪರಿಹಾರ


Team Udayavani, Mar 8, 2021, 6:55 PM IST

Hypoglycemia  Symptoms and Solution

ಆಧುನಿಕ ಜೀವನ ಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಬಹುದೊಡ್ಡ ಪ್ರಭಾವವನ್ನು ಬೀರುತ್ತದೆ. ಇಂದಿನ ಕಾಲಮಾನದ ಜೀವನ ವಿಧಾನ, ಆಹಾರಗಳು ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ವಿಭಿನ್ನ ಪಾತ್ರವನ್ನು ವಹಿಸುತ್ತದೆ.

ನಮ್ಮ ದೇಹದಲ್ಲಿ ಕೊಬ್ಬಿನ ಅಂಶಗಳನ್ನು ಒಳಗೊಂಡಂತೆ ಕೆಲವು ಅಂಶಗಳು ಸೀಮಿತ ಪ್ರಮಾಣದಲ್ಲಿ  ಇರಬೇಕಾಗುತ್ತದೆ. ಈ ಅಂಶಗಳು ನಿಗದಿತ ಪ್ರಮಾಣದಲ್ಲಿ ಇದ್ದಾಗ ಮಾತ್ರ ನಮ್ಮ ಆರೋಗ್ಯ ಸ್ಥಿಮಿತದಲ್ಲಿರಲು ಸಾಧ್ಯ. ಅಂತಹ ಅಂಶಗಳಲ್ಲಿ ದೇಹದಲ್ಲಿನ ಸಕ್ಕರೆ ಪ್ರಮಾಣವೂ ಒಂದು.

ದೇಹದಲ್ಲಿ ಸಕ್ಕರೆ ಪ್ರಮಾಣ ನಿರ್ದಿಷ್ಟ ಮಟ್ಟಕ್ಕಿಂತ ಕಡಿಮೆ ಆಗುವುದನ್ನು ‘ಹೈಪೋಗ್ಲೈಸೀಮಿಯಾ’ ಎಂದು ಕರೆಯಲಾಗುತ್ತದೆ. ದೇಹದಲ್ಲಿ 70 ಮಿ.ಗ್ರಾಂ ಗಿಂತ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಅಂಶ ಇದ್ದರೆ ಅದನ್ನು ಸಕ್ಕರೆ ಅಂಶ ಕಡಿಮೆ ಇರುವಿಕೆ ಎಂದು ಕೆರೆಯಲಾಗುತ್ತದೆ. ಆರೋಗ್ಯವಂತ ವ್ಯಕ್ತಿಯಲ್ಲಿಯೂ ಕೂಡಾ ಒಮ್ಮೊಮ್ಮೆ ಈ ಸಕ್ಕರೆಯ ಅಂಶ ಕಡಿಮೆಯಾಗುವ ಸಾಧ್ಯತೆಗಳಿರುತ್ತದೆ. ಆದರೆ ಆರೋಗ್ಯವಂತರಲ್ಲಿ ಒಮ್ಮೊಮ್ಮೆ ಹೀಗಾಗುವುದರಿಂದ ಬಹುದೊಡ್ಡ ಅಪಾಯವೇನೂ ಆಗುವುದಿಲ್ಲ. ಆದರೆ ಮಧುಮೇಹಿಗಳಲ್ಲಿ ಸಕ್ಕರೆ ಅಂಶ ಕಡಿಮೆಯಾದರೆ ಅದು ಜೀವಕ್ಕೆ ಕುತ್ತು ತರುವ ಸಾಧ್ಯತೆಗಳಿರುತ್ತದೆ.

ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿರುವುದನ್ನು ಗುರುತಿಸುವುದು ಹೇಗೆ?

ನಮ್ಮ ಶರೀರದಲ್ಲಿ ಸಕ್ಕರೆಯ ಅಂಶ ಕಡಿಮೆಯಾಗಿದೆ ಎಂಬುವುದನ್ನು ಕೆಲವು ಲಕ್ಷಣಗಳಿಂದ ಗುರುತಿಸಬಹುದಾಗಿ. ಸಾಮಾನ್ಯವಾಗಿ ಇಂತಹ ಸಮಯದಲ್ಲಿ ವಿಪರೀತ ಸುಸ್ತಿನ ಅನುಭವವಾಗುವುದು, ಕೈಕಾಲು ನಡುಗುವಿಕೆ, ಬೆವರುವಿಕೆ, ದೇಹದಲ್ಲಿ ನಡುಕ ಕಂಡುಬರುವುದು,ಬಲಹೀನತೆ, ತಲೆನೋವು, ಹಸಿವು ಹೆಚ್ಚಾಗುವಿಕೆ, ಗಾಬರಿಯಾಗುವುದು, ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬರುವುದು, ಎದೆಬಡಿತ ಹೆಚ್ಚಾಗುವಿಕೆ ಮುಂತಾದ ಲಕ್ಷಣಗಳನ್ನು ಕಾಣಬಹುದಾಗಿದೆ. ಕೆಲವು ಬಾರಿ ಈ ಯಾವ ಲಕ್ಷಣಗಳು ಕಾಣಿಸಿಕೊಳ್ಳದೆಯೂ ವಿಪರೀತ ಸುಸ್ತಾಗುತ್ತದೆ.

ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು ಅನೇಕ ಬಾರಿ ರೋಗಿಗಾಗಲಿ ಇತರರಿಗಾಗಲಿ ಗೊತ್ತಾಗುವುದೇ ಇಲ್ಲ. ರಕ್ತದಲ್ಲಿ ಸಕ್ಕರೆಯ  ಅಂಶ ಹೆಚ್ಚಾಗುವುದಕ್ಕಿಂತ ಕಡಿಮೆಯಾಗುವುದು ಹೆಚ್ಚು ಅಪಾಯಕಾರಿಯಾದದ್ದು. ಸಾಮಾನ್ಯವಾಗಿ ಮಧುಮೇಹಿಗಳಲ್ಲಿ ಈ ಸಮಸ್ಯೆ ಕಂಡುಬರಲು ಕಾರಣ ಮಾತ್ರೆ ಅಥವಾ ಇನ್ಸುಲಿನ್ ಅನ್ನು  ಸರಿಯಾದ ಪ್ರಮಾಣದಲ್ಲಿ ತೆಗೆದುಕೊಳ್ಳದೆ ಇರುವುದು , ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಸೇವಿಸುವುದು ಇತ್ಯಾದಿ.

ಇನ್ನು ಇದನ್ನು ಹೊರತುಪಡಿಸಿದರೆ ಇನ್ನೂ ಕೆಲವು ಕಾರಣಗಳಿಂದ ಈ ಸಮಸ್ಯೆ ಕಂಡುಬರಬಹುದಾಗಿದ್ದು, ಸರಿಯಾದ ಸಮಯಕ್ಕೆ ಆಹಾರವನ್ನು ಸೇವಿಸದಿರುವುದು, ಉಪವಾಸ ಮಾಡುವುದು, ಇನ್ಸುಲಿನ್ ಸೇವಿಸಿದ ಬಳಿಕ ತುಂಬಾ ಸಮಯದವರೆಗೆ ಆಹಾರ ಸೇವಿಸದಿರುವುದು, ಅತಿಯಾದ ವ್ಯಾಯಾಮ ಮಾಡುವುದು, ಮದ್ಯಪಾನ ಮಾಡುವುದು ಕೂಡಾ  ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಲು ಪ್ರಮುಖ ಕಾರಣಗಳಾಗಿರುತ್ತದೆ.

ಈ ಸಮಯದಲ್ಲಿ ಏನು ಮಾಡಬೇಕು?

ಶರೀರದಲ್ಲಿ ಸಕ್ಕರೆಯ ಅಂಶ ಕಡಿಮೆಯಾಗಿದೆ ಎಂದು ಅನ್ನಿಸಿದರೆ ಆ ವ್ಯಕ್ತಿಗೆ ಸುಮಾರು 15 ಗ್ರಾಂ ನಷ್ಟು ಸಕ್ಕರೆ ನೀಡಬೇಕು, ಇಲ್ಲವೇ 3 ಗ್ಲೂಕೋಸ್ ಬಿಸ್ಕತ್ ಅಥವಾ ಅರ್ಧ ಚಮಚದಷ್ಟು ಜೇನುತುಪ್ಪವನ್ನು ಸೇವಿಸಬೇಕು. ಈ ರೀತಿಯ ಕ್ರಮಗಳಿಂದ ಶರೀರದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ. ಆ ಬಳಿಕ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಸಲಹೆಗಳನ್ನು ಪಡೆದುಕೊಳ್ಳಬೇಕು. ಸಕ್ಕರೆ ಅಂಶ ಕಡಿಮೆ ಇರುವ ಸಮಯದಲ್ಲಿ ವಾಹನಗಳ ಚಾಲನೆ ಮಾಡುವುದು ಅಪಾಯಕಾರಿ.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.