Raj Deepak Shetty: ಕಣ್ಣಲ್ಲೇ ಮಿಂಚು ಹರಿಸುವ ಟೋಬಿಯ ಖಡಕ್ ವಿಲನ್ ರಾಜ್ ದೀಪಕ್ ಶೆಟ್ಟಿ

ಕೀರ್ತನ್ ಶೆಟ್ಟಿ ಬೋಳ, Aug 18, 2023, 11:44 AM IST

promising kannada actor raj deepak shetty

ನೀಳಕಾಯ, ಕುರುಚಲು ಗಡ್ಡ, ಕಣ್ಣಲ್ಲೇ ಮಿಂಚು ಹರಿಸುವ ವ್ಯಕ್ತಿತ್ವ.. ಖಳ ನಾಯಕನ ಪಾತ್ರಕ್ಕೆ ಹೇಳಿ ಮಾಡಿಸಿದಂತಹ ದೇಹದಾರ್ಡ್ಯತೆ. ಇದು ರಾಜ್ ದೀಪಕ್ ಶೆಟ್ಟಿ ಎಂಬ ಕಲಾವಿದನ ಕಂಡಾಗ ಉಂಟಾಗುವ ಭಾವ.

ಈ ಹಿಂದೆ ಹಲವು ಕನ್ನಡ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ರಾಜ್ ದೀಪಕ್ ಶೆಟ್ಟಿ ಇದೀಗ ಟೋಬಿ ಚಿತ್ರದ ಮೂಲಕ ಸಿನಿಪ್ರೇಮಿಗಳ ಎದುರು ಬರುತ್ತಿದ್ದಾರೆ. ಟ್ರೇಲರ್ ನಲ್ಲಿ ಕೇವಲ ಒಂದು ಡೈಲಾಗ್ ಮತ್ತು ಲುಕ್ ನಿಂದಲೇ ತನ್ನ ಪಾತ್ರದ ವಿಶಾಲತೆಯ ಸುಳಿವು ಕೊಟ್ಟಿದ್ದಾರೆ ರಾಜ್ ದೀಪಕ್.

44 ವರ್ಷದ ರಾಜ್ ದೀಪಕ್ ಶೆಟ್ಟಿ ಜನಿಸಿದ್ದು ಮಂಗಳೂರಿನಲ್ಲಿ. ಕುಡ್ಲದ ಮಿಲಾಗ್ರಿಸ್ ಮತ್ತು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿದ ರಾಜ್ ದೀಪಕ್ ಬದುಕು ಕಟ್ಟಿಕೊಂಡಿದ್ದು ಬಣ್ಣದ ಜಗತ್ತಿನಲ್ಲಿ. ಕನ್ನಡ ಸೀರಿಯಲ್ ಗಳ ಮೂಲಕ ಕ್ಯಾಮರಾ ಎದುರಿಸಿದ ಅವರು ಕಾದಂಬರಿ, ಪ್ರೀತಿ ಇಲ್ಲದ ಮೇಲೆ, ನಿಗೂಢ, ಬಂದೆ ಬರುವ ಕಾಲ, ಮುತ್ತಿನ ತೆನೆ, ಲವ ಲವಿಕೆ, ನಿಹಾರಿಕಾ ಮುಂತಾದ ಧಾರವಾಹಿಗಳ ಮೂಲಕ ಕನ್ನಡಿಗರ ಮನೆ-ಮನಗಳಲ್ಲಿ ಜಾಗ ಪಡೆದವರು.

ಲವ ಲವಿಕೆ ಧಾರವಾಹಿಯಲ್ಲಿ ರಾಜ್ ದೀಪಕ್ ಶೆಟ್ಟಿ ಅವರ ನಟನೆ ಕಂಡ ನಿರ್ದೇಶಕ ಚೇತನ್ ಕುಮಾರ್ ಅವರು ಮೊದಲ ಬಾರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಕರೆ ತಂದರು. ಧ್ರುವ ಸರ್ಜಾ ಮುಖ್ಯಪಾತ್ರದಲ್ಲಿ ನಟಿಸಿದ್ದ ‘ಭರ್ಜರಿ’ ಸಿನಿಮಾದಲ್ಲಿ ರಾಜ್ ದೀಪಕ್ ಮೊದಲ ಬಾರಿ ಖಡಕ್ ವಿಲನ್ ಆಗಿ ಮಿಂಚಿದರು. ಚಿತ್ರವು ಸೂಪರ್ ಹಿಟ್ ಆಗುತ್ತಿದ್ದಂತೆ ರಾಜ್ ದೀಪಕ್ ಶೆಟ್ಟಿ ಅವರಿಗೆ ಚಿತ್ರರಂಗದಿಂದ ಅವಕಾಶಗಳು ಬರಲಾರಂಭಿಸಿತು.

‘ಭರ್ಜರಿ’ ಚಿತ್ರೀಕರಣ ನಡೆಯುತ್ತಿದ್ದಂತೆ ‘ಟೈಗರ್’ ಮತ್ತು ‘ಶ್ರೀಕಂಠ’ ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ನಂತರ ‘ವಾಸು ನಾನು ಪಕ್ಕ ಕಮರ್ಷಿಯಲ್’, ‘ಪ್ರಯಾಣಿಕರ ಗಮನಕ್ಕೆ’, ‘ಭರಾಟೆ’, ‘ಬಜಾರ್’, ‘ಪೊಗರು’, ‘ಆದಿ ಲಕ್ಷ್ಮೀ ಪುರಾಣ’ ಮುಂತಾದ ಹಿಟ್ ಚಿತ್ರಗಳಲ್ಲಿ ಕನ್ನಡ ಸಿನಿ ಪ್ರಿಯರ ಪ್ರೀತಿ ಪಡೆದಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿ ಇರುವಾಗಲೇ ರಾಜ್ ದೀಪಕ್ ಶೆಟ್ಟಿ ಅವರ ಹೆಸರು ಗಡಿ ಮೀರಿ ತೆಲುಗಿನತ್ತ ಸಾಗಿತ್ತು. ಟಾಲಿವುಡ್ ನಲ್ಲಿ ಹಿಟ್ ಆದ ‘ಇಸ್ಮಾರ್ಟ್ ಶಂಕರ್’, ವಿಕ್ಟರಿ ವೆಂಕಟೇಶ್ ಅವರ ‘ನಾರಪ್ಪ’, ವಿರಾಟ ಪರ್ವಂ, ತಮಿಳಿನ ‘ಬ್ಯಾಟರಿ’ ಚಿತ್ರದಲ್ಲಿ ರಾಜ್ ದೀಪಕ್ ಶೆಟ್ಟಿ ನಟಿಸಿದ್ದಾರೆ.

ಸದ್ಯ ‘ಟೋಬಿ’ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಎದುರು ಮಿಂಚಿರುವ ರಾಜ್ ದೀಪಕ್ ಶೆಟ್ಟಿ, ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ. ”ಚಿತ್ರದಲ್ಲಿ ಆನಂದ ಎಂಬ ಎದುರಾಳಿ ನಟನಾಗಿ ನಟಿಸುತ್ತಿದ್ದೇನೆ. ನಾನು ಇಲ್ಲಿಯವರೆಗೆ ನಟಿಸಿದ ಅತ್ಯುತ್ತಮ ಪಾತ್ರಗಳಲ್ಲಿ ಇದು ಒಂದು. ಅತ್ಯಂತ ಸೂಕ್ಷ್ಮವಾದ ಆದರೆ ಕ್ರೂರ ಪಾತ್ರ. ನಾನು ಬೇರೆ ಸಿನಿಮಾಗಳಲ್ಲಿ ಮಾಡಿದ ಸಾಮಾನ್ಯ ವಿಲನ್ ಪಾತ್ರಗಳಂತಿಲ್ಲ. ಟ್ರೇಲರ್‌ ಗೆ ಸಿಕ್ಕ ಪ್ರತಿಕ್ರಿಯೆಯಿಂದ ಸಂತಸವಾಗಿದೆ. ಸಿನಿಮಾ ರಿಲೀಸ್‌ ಗಾಗಿ ಜನ ಕಾಯುತ್ತಿದ್ದಾರೆ. ಈ ಚಿತ್ರ ಖಂಡಿತಾ ಇಡೀ ತಂಡಕ್ಕೆ ಅವಕಾಶದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆಯಿದೆ” ಎನ್ನುತ್ತಾರೆ.

ಕನ್ನಡ ಚಿತ್ರರಂಗದಲ್ಲಿ ಬೇರೆ ಭಾಷೆಯಿಂದ ಬಂದ ಖಳ ನಟರು ಮಿಂಚುತ್ತಿರುವ ಸಮಯದಲ್ಲಿ ರಾಜ್ ದೀಪಕ್ ಶೆಟ್ಟಿ ಅವರು ನಮ್ಮವರೇ ಆಗಿ ಕಾಣಿಸುತ್ತಿದ್ದಾರೆ. ಯಾವುದೇ ವಿಲನ್ ಗಳಿಗೆ ಕಡಿಮೆ ಇಲ್ಲದಂತೆ ಕಾಣುವ ಕುಡ್ಲದ ಕುವರ ಭಾರತೀಯ ಸಿನಿಮಾದಲ್ಲಿ ತನ್ನದೇ ಛಾಪು ಮೂಡಿಸುವತ್ತ ಸಾಗುತ್ತಿದ್ದಾರೆ.

ಟಾಪ್ ನ್ಯೂಸ್

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.