ಆಲ್ ರೌಂಡರ್ ಪಟ್ಟಿಯಲ್ಲಿ ವಿಶ್ವದ 2ನೇ ಸ್ಥಾನಕ್ಕೇರಿದ್ದ ಪಠಾಣ್ ಸ್ವಿಂಗ್ King ಆಗಿದ್ದು ಹೇಗೆ

ಪಾಕ್ ವಿರುದ್ಧದ ಪಂದ್ಯದಲ್ಲಿ ಇರ್ಫಾನ್ ತಮ್ಮ ಟೆಸ್ಟ್ ಜೀವನದ ಚೊಚ್ಚಲ ಮತ್ತು ಏಕೈಕ ಶತಕ ಬಾರಿಸಿದ್ದರು.

Team Udayavani, Aug 23, 2021, 1:55 PM IST

ಆಲ್ ರೌಂಡರ್ ಪಟ್ಟಿಯಲ್ಲಿ ವಿಶ್ವದ 2ನೇ ಸ್ಥಾನಕ್ಕೇರಿದ್ದ ಪಠಾಣ್ ಸ್ವಿಂಗ್ King ಆಗಿದ್ದು ಹೇಗೆ

ಸದಾ ನಗುಮುಖ, ಗುಂಗುರು ಕೂದಲು, ಎದುರಾಳಿ ಬ್ಯಾಟ್ಸ್‌ಮನ್‌ ದಿಕ್ಕೆಡುವಂತಹ ಸ್ವಿಂಗ್ ಬೌಲಿಂಗ್, ವಿಕೆಟ್ ಕಿತ್ತಾಗ ಒಂದು ಕೈ ಮೇಲೆತ್ತಿ ಸರಳ ಸಂಭ್ರಮಾಚರಣೆ. ಇವೆಲ್ಲ ಒಂದು ಕಾಲದಲ್ಲಿ ಅದ್ಭುತ ಆಲ್ ರೌಂಡರ್ ಆಗಿ ಮೆರೆದಾಡಿದ್ದ, ಮತ್ತೋರ್ವ ಕಪಿಲ್ ದೇವ್, ವಾಸಿಂ ಅಕ್ರಂ ಎಂದೆನಿಸಿಕೊಂಡಿದ್ದ ಇರ್ಫಾನ್ ಪಠಾಣ್ ಸ್ಟೈಲ್.ಇರ್ಫಾನ್ ಪಠಾಣ್ ಜನಿಸಿದ್ದು 1984ರ ಅಕ್ಟೋಬರ್ 27ರಂದು. ಗುಜರಾತ್ ರಾಜ್ಯದ ಬರೋಡಾದಲ್ಲಿ. ( ಈಗಿನ ವಡೋದರಾ) ಸಹೋದರ ಖ್ಯಾತ ಕ್ರಿಕೆಟಿಗ ಯೂಸುಫ್ ಪಠಾಣ್. ಬರೋಡಾದ ಮಸೀದಿಯೊಂದರಲ್ಲಿ ಇವರ ತಂದೆ ಮೌಲ್ವಿಯಾಗಿದ್ದರು. ಹೀಗಾಗಿ ಪಠಾಣ್ ಸಹೋದರ ಬಾಲ್ಯ ಮಸೀದಿಯಲ್ಲೇ ಕಳೆದಿತ್ತು.

ಮೌಲ್ವಿಯಾಗಿದ್ದ ತಂದೆಗೆ ಸಹಜವಾಗಿಯೇ ಮಕ್ಕಳು ಅರೇಬಿಕ್‌ ಓದಿ ಇಸ್ಲಾಂ ಪಂಡಿತರಾಗಬೇಕೆಂಬ ಬಯಕೆಯಿತ್ತು. ಮಸೀದಿಗೆ ಭೇಟಿ ನೀಡುತ್ತಿದ್ದ ಇತರ ವಿದ್ವಾಂಸರೂ ಇದೇ ಸಲಹೆ ನೀಡುತ್ತಿದ್ದರು. ಆದರೆ ಈ ಸಹೋದರರ ಆಸಕ್ತಿ ಬೇರೆಯದೇ ಆಗಿತ್ತು. ಅದೇ ಕ್ರಿಕೆಟ್.
ಅಣ್ಣ ಯೂಸುಫ್ ಬ್ಯಾಟಿಂಗ್‌ ನಡೆಸುತ್ತಿದ್ದರೆ ತಮ್ಮನದು ಬೌಲಿಂಗ್. ಈ ಪುಟ್ಟ ಪೋರರು ಎಸೆದ ಚೆಂಡುಗಳು ಮಸೀದಿಯ ಗೋಡೆಯ ಮೇಲೆ ಅಚ್ಚೊತ್ತಿರುತ್ತಿದ್ದವು. ಆದರೆ ಮುಂದೊಂದು ದಿನ ಅದೇ ಮಸೀದಿಯನ್ನು ವಿಶ್ವ ಪ್ರಸಿದ್ದಿ ಮಾಡಿದ್ದು ಇದೇ ಪಠಾಣ್ ಸಹೋದರರು.

ಎಡಗೈ ವೇಗಿ ಮತ್ತು ಎಡಗೈ ಬ್ಯಾಟ್ಸಮನ್ ಆಗಿರುವ ಇರ್ಫಾನ್ ಪಠಾಣ್, ಅಂಡರ್ 14, ಅಂಡರ್-15 ಕೂಟಗಳಲ್ಲಿ ಬರೋಡಾ ತಂಡವನ್ನು ಪ್ರತಿನಿಧಿಸಿದರು. 2003ರಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ಟೆಸ್ಟ್ ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ಮುಂದಿನ ವರ್ಷವೇ ಏಕದಿನ ಪದಾರ್ಪಣೆ ಮಾಡಿದರು. ಅದು 2006ರ ಪಾಕಿಸ್ಥಾನ ಟೆಸ್ಟ್ ಸರಣಿ. ಮೊದಲರೆಡು ಪಂದ್ಯಗಳು ನೀರಸ ಡ್ರಾನಲ್ಲಿ ಅಂತ್ಯವಾಗಿದ್ದವು. ಆದರೆ ಮೂರನೇ ಪಂದ್ಯಕ್ಕೆ ಕಿಚ್ಚು ಹಚ್ಚಿದ್ದು ಇರ್ಫಾನ್ ಪಠಾಣ್ ಹ್ಯಾಟ್ರಿಕ್. ಪಂದ್ಯದ ಮೊದಲ ಓವರ್ ನ ಕೊನೆಯ ಮೂರು ಎಸೆತಗಳಲ್ಲಿ ಮೂರು ವಿಕೆಟ್ ಪಡೆದು ಪಠಾಣ್ ದಾಖಲೆ ಬರೆದಿದ್ದರು. ಅದು ಕೂಡಾ ಪಾಕಿಸ್ಥಾನದ ದಿಗ್ಗಜ ಆಟಗಾರರಾದ ಸಲ್ಮಾನ್ ಭಟ್, ಯೂನಿಸ್ ಖಾನ್ ಮತ್ತು ಮೊಹಮ್ಮದ್ ಯೂಸುಫ್ ರ ವಿಕೆಟ್ ಪಡೆದಿದ್ದರು.

2007ರಲ್ಲಿ ನಡೆದ ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಚಾಂಪಿಯನ್ ಆಗುವಲ್ಲಿ ಪಠಾಣ್ ಕೊಡುಗೆ ಅಪಾರ. ಪಾಕಿಸ್ಥಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಪ್ರಮುಖ ಮೂರು ವಿಕೆಟ್ ಪಡೆದು ಪಾಕ್ ಬ್ಯಾಟಿಂಗ್ ಕುಸಿಯುವಂತೆ ಮಾಡಿದ್ದರು ಈ ಎಡಗೈ ಸ್ವಿಂಗ್ ಬೌಲರ್. ಈ ಸಾಧನೆಗೆ ಇರ್ಫಾನ್ ಪಠಾಣ್ ಗೆ ಪಂದ್ಯಶ್ರೇಷ್ಠ ಗೌರವವೂ ಸಿಕ್ಕಿತ್ತು.

ಲಂಕಾ ವಿರುದ್ಧ ದಿಲ್ಲಿ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ವೀರೇಂದ್ರ ಸೆಹವಾಗ್ ಗಾಯಾಳಾಗಿ ಹೊರಬಿದ್ದಾಗ ಅವರ ಸ್ಥಾನ ತುಂಬಿದ್ದು ಇದೇ ಇರ್ಫಾನ್. ಆ ಪಂದ್ಯದಲ್ಲಿ ಪಠಾಣ್ 93 ರನ್ ಗಳಿಸಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಇರ್ಫಾನ್ ತಮ್ಮ ಟೆಸ್ಟ್ ಜೀವನದ ಚೊಚ್ಚಲ ಮತ್ತು ಏಕೈಕ ಶತಕ ಬಾರಿಸಿದ್ದರು.

ಆಲ್ ರೌಂಡರ್ ಪಟ್ಟಿಯಲ್ಲಿ ವಿಶ್ವದ ಎರಡನೇ ಸ್ಥಾನಕ್ಕೇರಿದ್ದ ಇರ್ಫಾನ್ ಪಠಾಣ್ ಸತತ ಗಾಯಗಳಿಂದ ತಂಡದಲ್ಲಿ ಆಗಾಗ ಹೊರಬೀಳುತ್ತಿದ್ದರು. ಫಿಟ್ ನೆಸ್ ಕೊರತೆಯಿಂದಾಗಿ ಪಠಾಣ್ ಬೌಲಿಂಗ್ ಶೈಲಿಯೂ ಬದಲಾಯಿತು. ಇದರಿಂದಾಗಿ ಬೌಲಿಂಗ್ ವೇಗವೂ ತಗ್ಗಿತು. ಹೀಗಾಗಿ 2012ರ ನಂತರ ರಾಷ್ಟ್ರೀಯ ತಂಡದಲ್ಲಿ ಪಠಾಣ್ ಕಾಣಿಸಿಕೊಳ್ಳಲೇ ಇಲ್ಲ. ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಇರ್ಫಾನ್ ಪಠಾಣ್, ಕ್ರಿಕೆಟ್ ಕಾಮೆಂಟೇಟರಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.