World Cup; ಕೊಹ್ಲಿ ಆಕರ್ಷಕ ಶತಕ: ಟೀಮ್ ಇಂಡಿಯಾಕ್ಕೆ ಶರಣಾದ ಬಾಂಗ್ಲಾ


Team Udayavani, Oct 19, 2023, 9:24 PM IST

1-w3qr2r

ಪುಣೆ :ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಗುರುವಾರ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶ ದ ವಿರುದ್ಧ ಭಾರತ 7 ವಿಕೆಟ್ ಗಳ ಅಮೋಘ ಗೆಲುವು ಸಾಧಿಸಿದೆ. ವಿರಾಟ್ ಕೊಹ್ಲಿ ಅವರ ಅಮೋಘ ಶತಕ ಪಂದ್ಯದ ಆಕರ್ಷಣೆಯಾಗಿತ್ತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾ ಗೆಲ್ಲಲು 257 ರನ್ ಗಳ ಗುರಿ ಭಾರತಕ್ಕೆ ನೀಡಿತ್ತು. ಗುರಿ ಬೆನ್ನಟ್ಟಿದ ಭಾರತಕ್ಕೆ ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ಒದಗಿಸಿಕೊಟ್ಟರು. 48 ರನ್ ಗಳಿಸಿದ್ದ ಶರ್ಮ ಹಸನ್ ಮಹಮೂದ್ ಎಸೆದ ಚೆಂಡನ್ನು ದೊಡ್ಡ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ ನಲ್ಲಿ ಹೃದೋಯ್ ಕ್ಯಾಚಿತ್ತು ನಿರ್ಗಮಿಸಿದರು. ಅರ್ಧ ಶತಕದಿಂದ ವಂಚಿತರಾದರು. ಗಿಲ್ 53 ರನ್ ಗಳಿಸಿ ಔಟಾದರು. ಶ್ರೇಯಸ್ ಅಯ್ಯರ್ 19 ರನ್ ಗಳಿಸಿ ಔಟಾದರು.

ಅಮೋಘ ಆಟವಾಡಿದ ಕೊಹ್ಲಿ ಭರ್ಜರಿ ಆಟವಾಡಿ ಅಜೇಯ ಶತಕ ಸಿಡಿಸಿದರು. 97 ಎಸೆತಗಳಲ್ಲಿ 103 ರನ್ ಗಳಿಸಿದರು. 6ಬೌಂಡರಿ ಮತ್ತು 4 ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು. ಕೊಹ್ಲಿ ಅವರಿಗೆ ಶತಕ ಸಂಭ್ರಮಿಸಲು ನೇರವಾದ ರಾಹುಲ್ ಔಟಾಗದೆ 34 ರನ್ ಗಳಿಸಿದರು. 41.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 261 ರನ್ ಗಳಿಸಿ ಸತತ ನಾಲ್ಕನೇ ಜಯವನ್ನು ತನ್ನದಾಗಿಸಿಕೊಂಡಿತು.

ಇದು ವಿಶ್ವಕಪ್ ಚೇಸ್‌ನಲ್ಲಿ ಕೊಹ್ಲಿ ಅವರ ಮೊದಲ ಶತಕವಾಗಿದೆ. ಭಾರತದ ಪರ ಅತಿ ಹೆಚ್ಚು ವಿಶ್ವಕಪ್ ಶತಕ ಸಿಡಿಸಿದವರು. ರೋಹಿತ್ ಶರ್ಮಾ(7),ಸಚಿನ್ ತೆಂಡೂಲ್ಕರ್( 6), ಸೌರವ್ ಗಂಗೂಲಿ(4), ಶಿಖರ್ ಧವನ್(3), ವಿರಾಟ್ ಕೊಹ್ಲಿ(3).

ಭಾರತಕ್ಕೆ ಗೆಲ್ಲಲು 26 ರನ್‌ಗಳ ಅಗತ್ಯವಿದ್ದಾಗ ಕೊಹ್ಲಿ 74 ರನ್ ಗಳಿಸಿದ್ದರು. ಆ ವೇಳೆ ಅವರು ಶತಕ ಸಿಡಿಸುತ್ತಾರಾ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡಿತ್ತು. ಕೊಹ್ಲಿ ಎಲ್ಲಾ ಎಸೆತಗಳನ್ನು ಎದುರಿಸಿದರು. ಆಗ ಬಂದ ರನ್ 6, 1, 4, 0, 0, 6, 0, 1, 0, wd, 2, 0, 2, 0, 1, 0, 0, 6.ಶತಕ ಪೂರ್ಣ ಗೊಳಿಸುವಲ್ಲಿ ರಾಹುಲ್ ಸಂಪೂರ್ಣವಾಗಿ ಸಹಕರಿಸಿದರು. ಕೊನೆಯಲ್ಲಿ ರಾಹುಲ್‌ ಅವರಿಗೆ ಕೊಹ್ಲಿ ದೊಡ್ಡ ಅಪ್ಪುಗೆ ನೀಡಿದರು.

ಬಾಂಗ್ಲಾ ಉತ್ತಮ ಆರಂಭ ಪಡೆಯಿತು. ತಂಜಿದ್ ಹಸನ್ ಮತ್ತು ಲಿಟ್ಟನ್ ದಾಸ್ ಮೊದಲ ವಿಕೆಟ್ ಗೆ 93 ರನ್ ಗಳ ಜತೆಯಾಟವಾಡಿದರು. ತಂಜಿದ್ ಹಸನ್ 51 ರನ್ ಮತ್ತು ಲಿಟ್ಟನ್ ದಾಸ್ 66 ರನ್ ಗಳಿಸಿ ಔಟಾದರು. ನಜ್ಮುಲ್ ಹೊಸೈನ್ ಶಾಂಟೊ 8, ಮೆಹಿದಿ ಹಸನ್ ಮಿರಾಜ್ 3 ರನ್ ಗಳಿಸಿ ಬೇಗನೆ ನಿರ್ಗಮಿಸಿದರು. ತೌಹಿದ್ ಹೃದಯ್ 16 ,ಮುಶ್ಫಿಕರ್ ರಹೀಮ್ 38, ನಸುಮ್ ಅಹ್ಮದ್ 14, ಮಹಮುದುಲ್ಲಾ 46 ರನ್ ಗಳಿಸಿ ಔಟಾದರು.

ಭಾರತದ ಪರ ಬುಮ್ರಾ, ಸಿರಾಜ್ ಮತ್ತು ಜಡೇಜಾ ತಲಾ 2 ವಿಕೆಟ್ ಪಡೆದರು. ಶಾರ್ದೂಲ್ ಮತ್ತು ಕುಲದೀಪ್ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿ ಯಾದರು.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.