“ಯಾವ ಕ್ರಮಾಂಕವಾದರೂ ಸೈ’ : ಕೆ.ಎಲ್‌. ರಾಹುಲ್‌

Team Udayavani, May 18, 2019, 9:59 AM IST

k-l-rahul

ಹೊಸದಿಲ್ಲಿ: ವಿಶ್ವಕಪ್‌ನಲ್ಲಿ ಭಾರತಕ್ಕೆ ಎದುರಾಗಿರುವ ದೊಡ್ಡ ಸಮಸ್ಯೆಯೆಂದರೆ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನದ್ದು. ಇಲ್ಲಿ ಸೂಕ್ತ ಆಟಗಾರರಿಲ್ಲದಿರುವುದು ಚರ್ಚೆಗೆ ಕಾರಣವಾಗಿದೆ. 4ನೇ ಕ್ರಮಾಂಕಕ್ಕೆ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿ ಕಾಡಿದೆ. ಈ ಕ್ರಮಾಂಕದಕಲ್ಲಿ ಕೆ.ಎಲ್‌. ರಾಹುಲ್‌ ಅವರನ್ನು ಆಡಿಸುವ ಸಾಧ್ಯತೆ ಇದೆಯೇ?

ಈ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಪಿಟಿಐ ಸುದ್ದಿಸಂಸ್ಥೆ ಶುಕ್ರವಾರ ಕೆ.ಎಲ್‌. ರಾಹುಲ್‌ ಅವರನ್ನು ಸಂದರ್ಶಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕದ ಆರಂಭಕಾರ, ತನಗೆ ಯಾವ ಕ್ರಮಾಂಕವಾದರೂ ಅಡ್ಡಿಯಿಲ್ಲ ಎಂದಿದ್ದಾರೆ.

“ಆಯ್ಕೆಗಾರರು ನನ್ನನ್ನು ತಂಡಕ್ಕೆ ಆರಿಸಿದ್ದಾರೆ. ಅಂದಮೇಲೆ ತಂಡದ ಆಡಳಿತ ಮಂಡಳಿ ನನಗೆ ಸಂಬಂಧಿಸಿದಂತೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾನು ಬದ್ಧನಾಗಿರಬೇಕಾಗುತ್ತದೆ’ ಎಂದು ರಾಹುಲ್‌ ಹೇಳಿದರು.

ಐಪಿಎಲ್‌ನಲ್ಲಿ ರನ್‌ ಸುರಿಮಳೆ
ಆಸ್ಟ್ರೇಲಿಯ ವಿರುದ್ಧದ 2 ಟಿ20 ಪಂದ್ಯಗಳಲ್ಲಿ ಕ್ರಮವಾಗಿ 50 ಮತ್ತು 47 ರನ್‌ ಬಾರಿಸಿದ ರಾಹುಲ್‌, ಇದೇ ಫಾರ್ಮನ್ನು ಐಪಿಎಲ್‌ಗ‌ೂ
ವಿಸ್ತರಿಸಿದರು. ಪಂಜಾಬ್‌ 53.90ರ ಸರಾಸರಿಯಲ್ಲಿ 593 ರನ್‌ ಪೇರಿಸಿ ಮೆರೆದರು. ಇದರಲ್ಲಿ ಒಂದು ಶತಕವೂ ಸೇರಿದೆ. ವಾರ್ನರ್‌ ಬಳಿಕ ಅತ್ಯಧಿಕ ರನ್‌ ಪೇರಿಸಿದ ಹೆಗ್ಗಳಿಕೆಯೂ ಇವರದಾಗಿದೆ. ಹೀಗಾಗಿ ವಿಶ್ವಕಪ್‌ನಲ್ಲೂ ರಾಹುಲ್‌ ಮಿಂಚಬಲ್ಲರೆಂಬ ಭರವಸೆ ಮೂಡಿದೆ.
“ಕಳೆದೆರಡು ತಿಂಗಳಿಂದ ನನ್ನ ಬ್ಯಾಟಿಂಗ್‌ ಉತ್ತಮ ಲಯದಲ್ಲಿದೆ. ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಆಡುವಾಗ ಬ್ಯಾಟಿಂಗ್‌ ಕೌಶಲದತ್ತ ಹೆಚ್ಚಿನ ಗಮನ ನೀಡಲು ಸಾಧ್ಯವಾಯಿತು. ಹೀಗಾಗಿ ಆಸ್ಟ್ರೇಲಿಯ ವಿರುದ್ಧದ ಟಿ20, ಐಪಿಎಲ್‌ನಲ್ಲಿ ರನ್‌ ಉತ್ತಮ ರನ್‌ ಸಂಪಾದಿಸಿದೆ’ ಎಂದರು.

“ನನ್ನ ಬ್ಯಾಟಿಂಗ್‌ ಟೆಕ್ನಿಕ್‌ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ. ನನ್ನದು ಸರಳ ಟೆಕ್ನಿಕ್‌. ವಿಶ್ವ ಮಟ್ಟದ ಕೂಟಗಳಲ್ಲಿ ಫಾರ್ಮ್ ಮುಖ್ಯವಾಗುತ್ತದೆ’ ಎಂಬುದು ರಾಹುಲ್‌ ಅಭಿಪ್ರಾಯ.

ಇಂಗ್ಲೆಂಡ್‌ ವಾತಾವರಣದ ಅರಿವಿದೆ
ಕಳೆದ ಇಂಗ್ಲೆಂಡ್‌ ಪ್ರವಾಸದ ವೇಳೆ ಅಸ್ಥಿರ ಪ್ರದರ್ಶನ ನೀಡಿದ ಪ್ರಶ್ನೆಯೂ ರಾಹುಲ್‌ಗೆ ಎದುರಾಯಿತು. “ಕಳೆದ ವರ್ಷ ಇದೇ ಅವಧಿಯಲ್ಲಿ ನಾವು ಇಂಗ್ಲೆಂಡ್‌ನ‌ಲ್ಲಿದ್ದೆವು. ಹೀಗಾಗಿ ಅಲ್ಲಿನ ವಾತಾವರಣದ ಬಗ್ಗೆ ಅರಿವಿದೆ. ಕಳೆದ ಪ್ರವಾಸ ಯಾರಿಗೂ ಆತ್ಮವಿಶ್ವಾಸ ತುಂಬಿಸದು. ನಾವು ಫ್ರೆಶ್‌ ಆಗಿ ಇಂಗ್ಲೆಂಡ್‌ನ‌ಲ್ಲಿ ವಿಶ್ವಕಪ್‌ ಆಡಬೇಕಿದೆ. ಇದಕ್ಕಾಗಿ ಉತ್ತಮ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ರಾಹುಲ್‌ ಹೇಳಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.